Homeಮುಖಪುಟಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

- Advertisement -
- Advertisement -

ಕೊರೊನಾ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆ ಎದುರಿಸಿದ್ದ ಬಿಜೆಪಿ ಮತ್ತೆ ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಕೊರೊನಾ ವ್ಯಾಕ್ಸಿನೇಷನ್ ಉತ್ತೇಜಿಸಲು, ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸೋಂಕಿನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ದೇಶಾದ್ಯಂತ ಸ್ವಯಂಸೇವಕ ಸೇವೆಯ ಎರಡನೇ ಹಂತವನ್ನು ಪ್ರಾರಂಭಿಸಲು ಬಿಜೆಪಿ ಸಜ್ಜಾಗಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಸಿದ್ಧವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸದ ಬಳಿಕ, ಸೋಂಕಿನ ಎರಡನೇ ಅಲೆಯಲ್ಲಿ ತತ್ತರಿಸಿರುವ ದೇಶದಲ್ಲಿ ಜನರಿಗೆ ಸಹಾಯ ಮಾಡಲು ಕಳೆದ ತಿಂಗಳು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು.

“ಸೇವೆಯೇ ಸಂಘಟನೆ” ಎಂಬ ಘೋಷವಾಕ್ಯದ ಅಡಿಯಲ್ಲಿ ಜೆಪಿ ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅಭಿಯಾನ, ಪರಿಹಾರ ಕಾರ್ಯಕ್ರಮಗಳು, ಹಳ್ಳಿಗಳಲ್ಲಿ ಆರೋಗ್ಯ ಸ್ವಯಂಸೇವಕರಿಗೆ ತರಬೇತಿ ನೀಡಲು ಸಹಾಯ ಮಾಡುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

18 ರಿಂದ 44 ವರ್ಷ ವಯಸ್ಸಿನ ಡೆಲಿವರಿ ಮಾಡುವ ವ್ಯಕ್ತಿಗಳು, ಆಟೋ ರಿಕ್ಷಾ ಚಾಲಕರು, ಮನೆ ಕೆಲಸದವರು, ಪತ್ರಿಕೆ ವಿತರಕರು, ಗ್ಯಾಸ್ ಸಿಲಿಂಡರ್ ತಲುಪಿಸುವವರಿಗೆ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಈ ಅಭಿಯಾನದಡಿ ಹೇಳಲಾಗಿದೆ.

ಇತರ ಕೆಲವು ಗುಂಪುಗಳು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪೋಷಕರನ್ನು ಒಳಗೊಂಡಿರುತ್ತದೆ. ಈ ಗುಂಪು ಕೊರೊನಾ ಮೂರನೇ ಹಂತವನ್ನು ತಡೆಗಟ್ಟುವ ಸರ್ಕಾರದ ಪೂರ್ವಸಿದ್ಧತಾ ಕ್ರಮಗಳ ಒಂದು ಭಾಗವಾಗಿದೆ, ಇದರಲ್ಲಿ ಒಂದು ವಿಭಾಗದ ತಜ್ಞರು ಮಕ್ಕಳಿಗೆ ಈ ಸೋಂಕು ಹೆಚ್ಚು ಅಪಾಯಕಾರಿ ಎಂದು ನಂಬುತ್ತಾರೆ.

ಅಭಿಯಾನದ ನೇತೃತ್ವ ವಹಿಸಿರುವ ಜೆಪಿ ನಡ್ಡಾ ಅವರ ಸೂಚನೆಗಳ ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದ್ಯತೆ ನೀಡಬೇಕಾದ ಕೆಲವು ಕ್ಷೇತ್ರಗಳನ್ನು ಗುರುತಿಸಿ ಪತ್ರವನ್ನು ಬರೆದಿದ್ದಾರೆ.

“ರಕ್ತದಾನ ಶಿಬಿರಗಳನ್ನು ಆಯೋಜಿಸುವುದು ಮತ್ತು ಮನವಿಗಳ ಮೇರೆಗೆ ರಕ್ತದಾನ ಮಾಡುವುದು. ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಲ್ಲಿ ಪಡಿತರ ಕಿಟ್ ಮತ್ತು ಆಹಾರ ವಿತರಣೆಯನ್ನು ಏರ್ಪಡಿಸುವುದು ಮಾಡಬೇಕು. ವಯಸ್ಸಾದ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವ ಅಥವಾ ಮನೆಯ ಎಲ್ಲರೂ ಸೋಂಕಿಗೆ ಒಳಗಾದ ಪ್ರತ್ಯೇಕ ಮನೆಗಳಿಗೆ ಸ್ವಯಂಸೇವಕರನ್ನು ನಿಯೋಜಿಸುವುದು ಮುಖ್ಯ” ಎಂದಿದ್ದಾರೆ.

’ದೂರವಾಣಿ ಮೂಲಕ ಮೆಡಿಸಿನ್ ಕನ್ಸಲ್ಟೆನ್ಸಿ ಮತ್ತು ವೈದ್ಯಕೀಯ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೊರೊನಾ ಸೋಂಕಿತ ಜನರಿಗೆ ಸಹಾಯ ಮಾಡುವುದು ಅವರಿಗೆ ತಮ್ಮ ವಿಮಾ ಸೌಲಭ್ಯ ಶೀಘ್ರದಲ್ಲಿಯೇ ದೊರೆಯುವಂತೆ ನೋಡಿಕೊಳ್ಳಬೇಕು. ಸ್ವಯಂಸೇವಕರು ಅಗತ್ಯವಿರುವ ಕುಟುಂಬಗಳಿಗೆ ಸಹಾಯ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಕಾರ್ಯಕರ್ತರಿಗೆ ತರಬೇತಿ ನೀಡಲು ಮತ್ತು ಸ್ಥಳೀಯ ವೈದ್ಯಕೀಯ ಕಚೇರಿಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳು, ಆಕ್ಸಿಮೀಟರ್‌ಗಳು, ಹೋಮ್ ಟೆಸ್ಟ್ ಕಿಟ್‌ಗಳು ಮತ್ತು ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಲು ರಾಜ್ಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುವುದು‍ ಎಂದು ಬಿಜೆಪಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಟೀಕೆಗಳ ಮಧ್ಯೆ, ಸರ್ಕಾರ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ತಿಂಗಳಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತಿದೆ.


ಇದನ್ನೂ ಓದಿ: ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...