Homeಕರೋನಾ ತಲ್ಲಣಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ, ಭಾರತವು ವಿಶ್ವದ ಅತ್ಯಧಿಕ ಕೊರೊನಾ ಸಂಪರ್ಕ ದರಕ್ಕೆ ಸಾಕ್ಷಿಯಾಗಿದೆ ಎಂದು ತಿಳಿದುಬಂದಿದೆ. ಆ ಮೂಲಕ ಸೋಂಕಿತ ವ್ಯಕ್ತಿಯು ಪ್ರತಿ ಎರಡು ದಿನಗಳಿಗೊಮ್ಮೆ ಇನ್ನೊಬ್ಬರಿಗೆ ಸೋಂಕು ತಗುಲಿಸುತ್ತಿದ್ದಾನೆ. ಆತಂಕಕಾರಿ ಸಂಗತಿಯೆಂದರೆ, ಈ ತಿಂಗಳ ಕೊರೊನಾ ಸಂಪರ್ಕ ದರದಲ್ಲಿ ಭಾರಿ ಏರಿಕೆಯಾಗಿದೆ.

ತಂತ್ರಜ್ಞಾನ ವಿಜ್ಞಾನ ವಿಭಾಗವು ಪ್ರಾರಂಭಿಸಿದ ಮಾದರಿಯ ಮೂಲಕ ಮಾಡಲಾಗಿರುವ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ, “ಏಪ್ರಿಲ್ ಮಧ್ಯದ ವೇಳೆಗೆ ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಉತ್ತುಂಗಕ್ಕೆ ಏರುತ್ತದೆ. ಈ ಸಮಯದಲ್ಲಿ ದೈನಂದಿನ ಸೋಂಕುಗಳು 70,000 ಮತ್ತು 80,000 ರ ನಡುವೆ ಇರುತ್ತದೆ”. ಮುಖ್ಯವಾಗಿ ಈ ಸಮಯದಲ್ಲಿ ಮಹಾರಾಷ್ಟ್ರದಲ್ಲೇ ಪ್ರಕರಣ ಹೆಚ್ಚಿರುತ್ತದೆ ಎಂದು ವಿಶ್ಲೇಷಣೆ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ವಿಶ್ಲೇಷಣೆ ನಡೆಸಿರುವ ವಿಜ್ಞಾನಿಗಳ ಪ್ರಕಾರ, ಶಾಲಾ-ಕಾಲೇಜುಗಳು, ಮಾರುಕಟ್ಟೆಗಳು, ಸಾರ್ವಜನಿಕ ಸ್ಥಳಗಳು ಮತ್ತು ಸಾರ್ವಜನಿಕ ಸಾರಿಗೆಗಳು ಸಂಪರ್ಕ ದರದ ಈ ಅನಿರೀಕ್ಷಿತ ಏರಿಕೆಗೆ ಕಾರಣ ಎಂದು ಹೇಳಿದ್ದಾರೆ. ವೇಗವಾಗಿ ಹರಡುವ ರೂಪಾಂತರಿ ವೈರಸ್‌ಗಳು ಕೂಡಾ ಇದಕ್ಕೆ ಕೊಡುಗೆ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

“ಸಂಪರ್ಕದಿಂದಾಗಿ ಕೊರೊನಾ ಹರಡುತ್ತಿರುವ ಸಂಖ್ಯೆಯು ಭಾರತದಲ್ಲಿ ಕಂಡುಬರುತ್ತಿರುವಷ್ಟು ಪ್ರಪಂಚದಲ್ಲಿ ಎಲ್ಲಿಯೂ ವರದಿಯಾಗಿಲ್ಲ. ಸಂಪರ್ಕ ದರದಲ್ಲಿನ ಭಾರಿ ಏರಿಕೆ ಎಲ್ಲೆಡೆ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಗೆ ಕಾರಣವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್‌‌‌‌‌‌ ಆರಂಭದಲ್ಲಿ, ಒಬ್ಬ ಸೋಂಕಿತ ವ್ಯಕ್ತಿಯು ನಾಲ್ಕು ದಿನಗಳಲ್ಲಿ ಇನ್ನೊಬ್ಬರಿಗೆ ಸೋಂಕು ತಗುಲಿಸುತ್ತಿದ್ದರೆ, ಪ್ರಸ್ತುತ ಸುಮಾರು ಎರಡನೆ ದಿನದಲ್ಲಿ ಇನ್ನೊಬ್ಬರಿಗೆ ಸೋಂಕು ಹರಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿನ ಹೆಚ್ಚಳವು ಮುಖ್ಯವಾಗಿ ಸಂಪರ್ಕ ದರದಲ್ಲಿನ ಗಮನಾರ್ಹ ಹೆಚ್ಚಳದಿಂದ ಆಗಿದೆ ಎಂದು ಅಧ್ಯಯನದ ಭಾಗವಾಗಿರುವ ಕಾನ್ಪುರದ ಐಐಟಿಯ ಉಪನಿರ್ದೇಶಕ ಮನೀಂದ್ರ ಅಗ್ರವಾಲ್ ಹೇಳಿದ್ದಾರೆ.

ಅಗ್ರವಾಲ್‌‌‌ ‌‌‌‌‌‌ಅವರ ಪ್ರಕಾರ ಎರಡನೆ ಅಲೆಯ ಅತೀ ಹೆಚ್ಚು ಪ್ರಕರಣಗಳು ಏಪ್ರಿಲ್ 15 ರಿಂದ 25 ರ ಸುಮಾರಿಗೆ ವರದಿಯಾಗುತ್ತದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...