Homeಕರೋನಾ ತಲ್ಲಣ1 ಕೋಟಿ ದಾಟಿದ ಕೊರೊನಾ ಪ್ರಕರಣಗಳು! - ಪ್ರಧಾನಿ ಹೇಳಿಕೆ ಸುಳ್ಳಾಗಿದೆ ಎಂದ ರಾಹುಲ್ ಗಾಂಧಿ

1 ಕೋಟಿ ದಾಟಿದ ಕೊರೊನಾ ಪ್ರಕರಣಗಳು! – ಪ್ರಧಾನಿ ಹೇಳಿಕೆ ಸುಳ್ಳಾಗಿದೆ ಎಂದ ರಾಹುಲ್ ಗಾಂಧಿ

"ಪ್ರಧಾನಿ ಹೇಳಿದಂತೆ 21 ದಿನಗಳಲ್ಲಿ ಯುದ್ಧವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಬದಲಿಗೆ ಇದು ದೇಶದ ಲಕ್ಷಾಂತರ ಜೀವಗಳನ್ನು ಬಲಿತೆಗೆದುಕೊಂಡಿತು"

- Advertisement -
- Advertisement -

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಕೋಟಿ ದಾಟಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. “ಪ್ರಧಾನಿ ಹೇಳಿದಂತೆ 21 ದಿನಗಳಲ್ಲಿ ಯುದ್ಧವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಬದಲಿಗೆ ಇದು ದೇಶದ ಲಕ್ಷಾಂತರ ಜೀವಗಳನ್ನು ಬಲಿತೆಗೆದುಕೊಂಡಿತು” ಎಂದು ಹೇಳಿದ್ದಾರೆ.

ಭಾರತದ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು ಒಂದು ಕೋಟಿಯ ಗಡಿ ದಾಟಿದೆ. ಸುಮಾರು ಒಂದು ತಿಂಗಳಲ್ಲಿ 10 ಲಕ್ಷ ಪ್ರಕರಣಗಳನ್ನು ವರದಿ ಮಾಡಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 95.50 ಲಕ್ಷಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಇದನ್ನೂ ಓದಿ: 60 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲು ಸಿದ್ದವಾಗಿರುವ ಭಾರತ

“ಮಹಾಭಾರತ ಯುದ್ಧವನ್ನು 18 ದಿನಗಳಲ್ಲಿ ಗೆಲ್ಲಲಾಗಿತ್ತು. ಕೊರೊನಾ ವೈರಸ್ ವಿರುದ್ಧದ ಯುದ್ಧವು 21 ದಿನಗಳನ್ನು ತೆಗೆದುಕೊಳ್ಳುತ್ತದೆ” ಎಂದು ಮಾರ್ಚ್‌ನಲ್ಲಿ ಪ್ರಧಾನಮಂತ್ರಿ ಹೇಳಿದ್ದರು.

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ, ಆಗಸ್ಟ್ 7 ರಂದು 20 ಲಕ್ಷ, ಆಗಸ್ಟ್ 23 ರಂದು 30 ಲಕ್ಷ ಮತ್ತು ಸೆಪ್ಟೆಂಬರ್ 5 ರಂದು 40 ಲಕ್ಷಗಳನ್ನು ದಾಟಿತ್ತು. ಸೆಪ್ಟೆಂಬರ್ 16 ರಂದು 50 ಲಕ್ಷ, ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ, ಅಕ್ಟೋಬರ್ 29 ರಂದು 80 ಲಕ್ಷ, ಮತ್ತು ನವೆಂಬರ್ 20 ರಂದು 90 ಲಕ್ಷವನ್ನು ತಲುಪಿತ್ತು.

ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಇಂದಿನವರೆಗೆ ಒಟ್ಟು ಸೋಂಕಿತರ ಸಂಖ್ಯೆ 1,00,04,599 ಆಗಿದ್ದು, ಸಾವಿನ ಸಂಖ್ಯೆ 1,45,136 ಕ್ಕೆ ತಲುಪಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 347 ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ.


ಇದನ್ನೂ ಓದಿ: ಪ್ರಯೋಗಾರ್ಥ ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವನಿಗೆ ಕೊರೊನಾ ಪಾಸಿಟಿವ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

ಸೋನಿ ಲೈವ್‌ ಒಟಿಟಿಯಲ್ಲಿ ಬಿಡುಗಡೆಯಾಗಿರುವ ‘ವಿಕ್ಟಿಮ್’ ಎಂಬ ಆಂಥಾಲಜಿಯ ಮೊದಲ ಚಾಪ್ಟರ್‌ ‘ಧಮ್ಮಮ್‌’- ವಿಮರ್ಶಕರ ಮನಗೆದ್ದಿದೆ. ದಲಿತ ಪ್ರತಿರೋಧದ ಕಥನಗಳನ್ನು ತಮಿಳು ನೆಲದಲ್ಲಿ ಕಟ್ಟಿಕೊಡುತ್ತಿರುವ ಪ.ರಂಜಿತ್‌, ‘ಧಮ್ಮಮ್‌’ ನಿರ್ದೇಶಕರೆಂಬುದು ಮತ್ತೊಂದು ಗಮನಾರ್ಹ ಸಂಗತಿ. ಅರ್ಧ...