Homeಕರ್ನಾಟಕಕೊರೊನಾ ಸಾವು: ₹1 ಲಕ್ಷ ಪರಿಹಾರ ಆದೇಶ ಹಿಂಪಡೆದ ರಾಜ್ಯದ ಬಿಜೆಪಿ ಸರ್ಕಾರ

ಕೊರೊನಾ ಸಾವು: ₹1 ಲಕ್ಷ ಪರಿಹಾರ ಆದೇಶ ಹಿಂಪಡೆದ ರಾಜ್ಯದ ಬಿಜೆಪಿ ಸರ್ಕಾರ

- Advertisement -
- Advertisement -

ಕೊರೊನಾ ಸೋಂಕಿನಿಂದಾಗಿ ಮೃತರಾದವರ ವಾರಸುದಾರರಿಗೆ 1 ಲಕ್ಷ ರೂ.ಗಳನ್ನು ಪರಿಹಾರ ಧನ ನೀಡುವುದಾಗಿ ರಾಜ್ಯದ ಬಿಜೆಪಿ ಸರ್ಕಾರ ಈ ಹಿಂದೆ ಘೋಷಿಸಿತ್ತು. ಆದರೆ ಇದೀಗ ಈ ಆದೇಶವನ್ನು ವಾಪಾಸು ಪಡೆದು ಪರಿಷ್ಕೃತ ಆದೇಶವನ್ನು ಮಂಗಳವಾರ ಹೊರಡಿಸಿದೆ.

ರಾಜ್ಯ ಸರ್ಕಾರವು ಜುಲೈ ತಿಂಗಳಲ್ಲಿ, ಕೊರೊನಾದಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊ೦ಡ೦ತಹ, ಬಡತನ ರೇಖೆಗಿ೦ತ ಕೆಳಗಿರುವ ಕುಟುಂಬಕ್ಕೆ 1 ಲಕ್ಷ ರೂ.ಗಳನ್ನು ಪರಿಹಾರ ನೀಡುವುದಾಗಿ ಘೋಷಿಸಿತ್ತು. ಅದರಂತೆ, ಈ ಹಣವನ್ನು ಅರ್ಹ ಸ೦ತ್ರಸ್ತ ಕುಟುಂಬದ ಕಾನೂನುಬದ್ದ ವಾರಸುದಾರರಿಗೆ ನೀಡುವುದಾಗಿ ಹೇಳಿತ್ತು.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಬೂದಿ ಮುಚ್ಚಿದ ಕೆಂಡವಾದ ಗ್ರಾಮ

ಇಷ್ಟೇ ಅಲ್ಲದೆ, ಜಿಲ್ಲಾಧಿಕಾರಿಗಳ ಜಿಲ್ಲಾ ವಿಪತ್ತು ಪರಿಹಾನ ನಿಧಿಯಿಂದ(DDRF) ಪಿ.ಡಿ. ಖಾತೆಯಲ್ಲಿ ಪ್ರಸ್ತುತ ಲಭ್ಯವಿರುವ ಅನುದಾನದಿಂದ 1 ಲಕ್ಷ ರೂ. ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೆಪ್ಟೆಂಬರ್‌ 23 ರ ಗುರವಾರದಂದು ಆದೇಶ ನೀಡಲಾಗಿತ್ತು.

ಆದರೆ, ಒಕ್ಕೂಟ ಸರ್ಕಾರವು ಕೊರೊನಾದಿ೦ದಾಗಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ 50 ಸಾವಿರ ರೂ.ಗಳು ನೀಡಬೇಕು ಎಂದು ಸೂಚನೆ ನೀಡಿದ್ದರಿಂದ, ಗುರುವಾರ ರಾಜ್ಯ ಸರ್ಕಾರ ನೀಡುವುದಾಗಿ ಘೋಷಿಸಿದ್ದ 1 ಲಕ್ಷ ರೂ. ಪರಿಹಾರದ ಆದೇಶವನ್ನು ವಾಪಾಸು ಪಡೆದಿದೆ.

“ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ನೀಡಿರುವ ಸೆಪ್ಟೆಂಬರ್‌ 25 ರ ನಿರ್ದೇಶನದ೦ತೆ, ಕೊರೊನಾದಿಂದಾಗಿ ಮೃತಪಟ್ಟ ವ್ಯಕ್ತಿಯ ಕಾನೂನು ಬದ್ಧ ವಾರಸುದಾರರಿಗೆ 50 ಸಾವಿರ ರೂ. ಪರಿಹಾರ ನೀಡಬೇಕಾಗಿದೆ. ಹೀಗಾಗಿ ರಾಜ್ಯ ಸರ್ಕಾರದಿ೦ದ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದ್ದು, ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿ ಸೆಪ್ಟೆಂಬರ್‌ 23 ರಂದು ಹೊರಡಿಸಲಾಗಿದ್ದ ಆದೇಶವನ್ನು ಯಥಾವತ್ತಾಗಿ ಹಿಂಪಡೆಯಲಾಗಿದೆ” ಎಂದು ಮಂಗಳವಾರದ ಆದೇಶದಲ್ಲಿ ತಿಳಿಸಲಾಗಿದೆ.

ಕೊರೊನಾದಿಂದಾಗಿ ಮೃತಪಟ್ಟ ಬಿಪಿಎಲ್‌ ಕುಟುಂಬದ ದುಡಿಯುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ ಕುರಿತ೦ತೆ ರಾಜ್ಯದಲ್ಲಿ ಒಟ್ಟು 7,711 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ದಿಫೈಲ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...