Homeಮುಖಪುಟಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

- Advertisement -
- Advertisement -

ಮಂಡ್ಯ ಜಿಲ್ಲೆಯ ಕಿರುಗಾವಲು ಪಂಚಾಯ್ತಿಯ ಕಲ್ಕುಳಿ ಗ್ರಾಮಕ್ಕೆ ಸೇರಿದ, ಪಂಚಾಯ್ತಿಯಲ್ಲಿ ಪೌರಕಾರ್ಮಿಕ ಸೇವೆ ಸಲ್ಲಿಸುತ್ತಿದ್ದ ಬಸವರಾಜು (45) ರವರು ಕೊರೊನಾ ಹರಡದಂತೆ ಔಷಧಿ ಸಿಂಪಡಿಸುವಾಗ ಆದ ಅನಾಹುತದಿಂದಾಗಿ ನಿನ್ನೆ ಮಂಡ್ಯದಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ತಮ್ಮ ಪಂಚಾಯ್ತಿ ಸುತ್ತಲಿನ ಗ್ರಾಮಗಳಿಗೆ ಕರೋನಾ ಸೋಂಕು ಹರಡದಂತೆ ಔಷಧಿ ಸಿಂಪಡಿಸುವ ಸಿಬ್ಬಂದಿಗಳಿಗೆ ಜೊತೆಗಾರರಾಗಿ ಮತ್ತು ಮಾರ್ಗದರ್ಶಕರಾಗಿ ಪಂಚಾಯ್ತಿ ಆದೇಶದ ಮೇರೆಗೆ ಬಸವರಾಜು ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅವರಿಗೆ ಸಿಂಪಡಿಸಲಾಗುತ್ತಿದ್ದ ಔಷಧದ ಅಡ್ಡಪರಿಣಾಮ ಉಂಟಾಗಿದೆ. ಅದರಿಂದ ಅಸ್ವಸ್ಥರಾಗಿದ್ದ ಅವರನ್ನು ಏಪ್ರಿಲ್‌ 21ರಂದು ಮಂಡ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೀ ರಕ್ತಕ್ಕೆ ಪ್ರಬಲ ರಾಸಾಯನಿಕಗಳು ಸೇರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಬಸವರಾಜುರವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಪೌರಕಾರ್ಮಿಕರಿಗೆ ಸೂಕ್ತ ರಕ್ಷಣೇ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೊರೊನಾ ವಿರೋಧಿ ಹೋರಾಟದಲ್ಲಿ ಬಲಿಯಾಗುವ ಪೌರಕಾರ್ಮಿಕರ ಪ್ರಾಣಕ್ಕೆ ಬೆಲೆಯಿಲ್ಲವೇ?
ಸಾರ್ವಜನಿಕರಿಗೆ ಕರೋನಾ ಬರದಂತೆ ತಡೆಯಲು ಔಷಧಿ ಸಿಂಪಡಣೆ ಮಾಡುವಾಗ ದೇಹದಲ್ಲಿ ಔಷಧಿ ಸೇರಿದ ಪರಿಣಾಮವಾಗಿ ಸಾವಿಗೀಡಾದ ಪೌರಕಾರ್ಮಿಕ ಬಸವರಾಜು ಅವರದ್ದು ತ್ಯಾಗವಲ್ಲವೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.

ಪೊಲೀಸರು, ವೈದ್ಯರಿಗಾಗಿ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ನಾಗರೀಕರೇ, ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸೋಣ. ಅವರಂತೆಯೇ ಪ್ರಾಣಾಪಾಯವನ್ನು ಲೆಕ್ಕಿಸದೆ ನಮ್ಮ ಸೇವೆಯಲ್ಲಿ ತೊಡಗಿರುವ ಪೌರಕಾರ್ಮಿಕರನ್ನೂ ನೆನೆಯಬೇಕು. ಅವರ ತ್ಯಾಗವನ್ನು ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು! ಎಂದು ಆಗ್ರಹಿಸಲಾಗಿದೆ.

ಈ ಕುರಿತು ಬಸವರಾಜುರವರ ಸಂಬಂಧಿ ಮತ್ತು ಕರ್ನಾಟಕ ಜನಶಕ್ತಿಯ ಕಾರ್ಯಕರ್ತರಾದ ಸಿದ್ದರಾಜುರವರು ಮಾತನಾಡಿ “ಒಂದು ವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ನಿನ್ನೆ ಬೆಳಿಗ್ಗೆ ಪ್ರಜ್ಞೆ ತಪ್ಪಿದರು. ಆಗ ಕೂಡಲೇ ನಾನೇ ಜಿಲ್ಲಾಸ್ಪತ್ರೆಗೆ ತೋರಿಸಿ ಅಡ್ಮಿಟ್ ಮಾಡಿದೆ. ರಾತ್ರಿ ವೆಂಟಿಲೇಟರ್‌ಗೆ ಹಾಕಿದ್ದರು. ಆದರೂ ಬಸವರಾಜು ಬದುಕುಳಿಯಲ್ಲಿಲ್ಲ. ಈ ಕುರಿತು ಜಿಲ್ಲಾ ಪಂಚಾಯತ್‌ ಸಿಇಒ, ಇಒ ರವರಿಗೆ ಮಾಹಿತಿ ನೀಡಿದ್ದೇವೆ. ಅವರು ಎರಡು ದಿನದ ನಂತರ ಪರಿಹಾರ ಹಣ ನೀಡುವ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮೊದಲೇ ಬಡವರಾಗಿರುವ ಪೌರಕಾರ್ಮಿಕರು ಈ ರೀತಿ ಲಾಕ್‌ಡೌನ್‌ ಸಮಯದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಜಾಗ್ರತಾ ಸಲಕರಣೆಗಳನ್ನು ನೀಡುವ ಮೂಲಕ ಸರ್ಕಾರ ಅವರ ರಕ್ಷಣೆಗೆ ಮುಂದಾಗಬೇಕು’ ಎಂದಿದ್ದಾರೆ.

ಬಸವರಾಜುರವರ ಸಾವನ್ನು ಯಾವುದೇ ಪೊಳ್ಳುಕಾರಣ ನೀಡಿ ಕೊರೋನಾ ಸಂಬಂಧಿ ಸಾವಲ್ಲ ಎಂಬಂತೆ ಬಿಂಬಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬಾರದೆಂದು. ಇಂತಹ ಸಂದರ್ಭದಲ್ಲೂ ಸೇವೆಗೆ ಹಾಜರಾಗಿ ಪ್ರಾಣತ್ಯಾಗ ಮಾಡಿದ ಬಸವರಾಜು ಅವರನ್ನು ಕೊರೋನಾ ವಿರೋಧಿ ಸಂಗ್ರಾಮದ ಹುತಾತ್ಮ ಎಂದು ಸರ್ಕಾರ ಪರಿಗಣಿಸಬೇಕು. ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲೇಬೇಕು. ಪೌರ ಕಾರ್ಮಿಕರ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳಿಗೆ‌ ಆದೇಶ ಹೊರಡಿಸಬೇಕು ಎಂಬ ಆಗ್ರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿವೆ.


ಇದನ್ನೂ ಓದಿ: ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪೌರಕಾರ್ಮಿಕರ ಸೇವೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿ ಅವರ ಕೆಲಸವನ್ನು ಖಾಯಂಗೊಳಿಸುವಂತೆ, ಅಗತ್ಯ ಸಂಖ್ಯೆಯಲ್ಲಿ ನೇಮಕಾತಿಗೊಳಿಸುವಂತೆ, ಇವರನ್ನು ಮುಖ್ಯವಾಹಿನಿಗೆ ತರಲು ಇವರ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ಕಲ್ಪಿಸುವಂತೆ, ಇವರಿಗೆ ವಿಶೇಷ ಜೀವವಿಮೆ ಕಲ್ಪಿಸುವಂತೆ, ಇವರಿಗೆ ಹಾಗೂ ಇವರ ಅವಲಂಭಿತರಿಗೆ ಸಂಪೂರ್ಣ ಉಚಿತ ವೈಧ್ಯಕೀಯ ಸೇವೆಗಳನ್ನು ಕಲ್ಪಿಸುವಂತೆ ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆವತಿಯಿಂದ ನಿರಂತರ ಹೋರಾಟ ನಡೆಸಿದ್ದೆವು. ಆದರೆ ಇಂದಿಗೂ ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ಸೇವೆಗೆ ತೆಗೆದುಕೊಂಡು ವಂಚಿಸಲಾಗುತ್ತಿದೆ: ಕೆ.ನರೇಂದ್ರಬಾಬು, ವಕೀಲರು ಮತ್ತು ಸಂಸ್ಥಾಪಕ ಅಧ್ಯಕ್ಷರು, ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆ, 7022272226

  2. ರಾಷ್ಟ್ರದಾದ್ಯಂತ ಕೊರೋನಾ ಕಾರಣದಿಂದ ಮರಣಿಸಿದವರಿಗಿಂತಾ ಹಸಿವೆಯಿಂದ ಮರಣಿಸುವವರ ಸಂಖ್ಯೆ ಹೆಚ್ಚಾಗುವ ಸಂಭವ ಹೆಚ್ಚಾಗಿದೆ. ಜನ ಬೀದಿಗೆ ಬರುವ ಬದಲಾಗಿ ನ್ಯಾಯಬೆಲೆ ಅಂಗಡಿಯವರು ಪ್ರತಿಯೊಬ್ಬರ ಜನಮನೆ ಬಾಗಿಲಿಗೆ ಹೋಗಿ ಪಡಿತರ ಚೀಟಿಗಳನ್ನು ಪರಿಶೀಲಿಸದೇ ಪಡಿತರವನ್ನು ಅಳೆದುಕೊಡುವಂತೆ ಒತ್ತಾಯಿಸಲಾಗಿತ್ತು, ಆದರೆ ಇಚ್ಚಾಕೊರತೆ ಕಾಡಿದೆ

  3. ನಿಜ ಹೇಳಬೇಕೆಂದರೆ ಪೌರಕಾರ್ಮಿಕರೇ ಮುಂಚೂಣಿಯ ಹೋರಾಟಗಾರರು
    RIP

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...