Homeಅಂತರಾಷ್ಟ್ರೀಯವಿಶ್ವದಾದ್ಯಂತ ಎರಡು ವರ್ಷಗಳಲ್ಲಿ ಕೊರೊನಾ ನಿರ್ಮೂಲನೆ: ವಿಶ್ವ ಆರೋಗ್ಯ ಸಂಸ್ಥೆ

ವಿಶ್ವದಾದ್ಯಂತ ಎರಡು ವರ್ಷಗಳಲ್ಲಿ ಕೊರೊನಾ ನಿರ್ಮೂಲನೆ: ವಿಶ್ವ ಆರೋಗ್ಯ ಸಂಸ್ಥೆ

1918 ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್‌ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಮಿಕ ವಿಶ್ವದಾದ್ಯಂತ ಎರಡು ವರ್ಷದಲ್ಲಿ ನಿರ್ಮೂಲನೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅದಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.

ಇಂದು ಶತಕ ಹಿಂದೆ 1918 ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್‌ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ ಲಸಿಕೆ ಪತ್ತೆಹಚ್ಚಲು ಜಗತ್ತು ಒಗ್ಗೂಡಿ ಯಶಸ್ವಿಯಾದರೆ, ಕೊರೊನಾ ವೈರಸ್‌ ಪಿಡುಗು ಎರಡು ವರ್ಷಗಳಲ್ಲಿ ಇಲ್ಲವಾಗಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ವೈರಸ್ ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೆ ಇದನ್ನು ತಡೆಯಲು ಅಗತ್ಯವಾದ ತಂತ್ರಜ್ಞಾನ ಹಾಗೂ ಜ್ಞಾನ ಕೂಡಾ ನಮ್ಮ ಬಳಿ ಇದೆ ಎಂದು ವಿಶ್ಲೇಷಿಸಿದ್ದಾರೆ.

ಸಾಬೀತಾಗದ ಯಾವುದೇ ಲಸಿಕೆ ಇಲ್ಲದ ಹೊತ್ತಿನಲ್ಲಿ ಸಾಂಕ್ರಾಮಿಕ ರೋಗವು ಎಷ್ಟು ಬೇಗ ನಿಯಂತ್ರಣಕ್ಕೆ ಬರಬಹುದು ಎಂಬುದನ್ನು ಮಾಹಿತಿ ನೀಡುವ ವಿಷಯದಲ್ಲಿ ಆರೋಗ್ಯ ಸಂಸ್ಥೆ ಯಾವಾಗಲೂ ಜಾಗರೂಕವಾಗಿರುತ್ತದೆ ಎಂದೂ ಅವರು‌ ಹೇಳಿದರು‌.

ವಿಶ್ವಾದ್ಯಂತ 2.28 ಕೋಟಿ ಮಂದಿಗೆ ಸೋಂಕು ತಗುಲಿದ್ದು, 1.46 ಕೋಟಿ ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 7.96 ಲಕ್ಷ ಜನರು ಬಲಿಯಾಗಿದ್ದಾರೆ.


ಓದಿ: ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...