Homeಮುಖಪುಟಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

- Advertisement -
- Advertisement -

ದೇಶವು ಕಳೆದ ಒಂದು ವರ್ಷದಿಂದ ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದ ಬಳಲುತ್ತಿದೆ. ಒಂದು ವರ್ಷ ಕಳೆದರು ಕೊರೊನಾ ವಿರುದ್ದ ಹೋರಾಟವನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇತ್ತೀಚೆಗೆ ಆಕ್ರಮಿಸಿಕೊಂಡಿರುವ ಕೊರೊನಾ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಅವರ ವರ್ಚಸ್ಸನ್ನು ಉಳಿಸಿಕೊಳ್ಳಲು ಬಿಜೆಪಿ ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ ಪೊಲಿಟಿಕಲ್‌ ಸರ್ಜರಿ ಮಾಡಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ಚಿಂತಿಸಿದೆ. ಅಲ್ಲದೆ, ರಾಜ್ಯದ ಸಿಎಂ ಯಡಿಯೂರಪ್ಪ ಅವರನ್ನೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಬೇರೊಬ್ಬರನ್ನು ಸಿಎಂ ಮಾಡಲು ಮುಂದಾಗಿದ್ದು, ಇದಕ್ಕಾಗಿ ಯಾರು ಸೂಕ್ತ ಎಂದು ಹುಡುಕಾಟ ಆರಂಭಿಸಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕನ್ನು ಆಕ್ರಮಣ ಹೆಚ್ಚಾಗಿದ್ದು, ರಾಜ್ಯ ಸರ್ಕಾರಗಳು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಉತ್ತರ ಪ್ರದೇಶದಿಂದ ಕೋವಿಡ್‌ನಿಂದ ಮೃತಪಟ್ಟವರ ಶವಗಳು ಗಂಗಾ ನದಿಯ ತಡದಲ್ಲಿ ತೇಲುತ್ತಿವೆ. ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ದಿನ ನಿತ್ಯದ ಕೊರೊನಾ ಪ್ರಕರಣಗಳು ದಾಖಲಾಗುವ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡ್‌ನಲ್ಲಿ ಕುಂಭಮೇಳ ನಡೆದ ನಂತರ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಅದರೆ, ರಾಜ್ಯ ಸರ್ಕಾರ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಎಲ್ಲಾ ಕಾರಣಗಳಿಂದ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ವರ್ಚಸ್ಸು ಕುಸಿಯುತ್ತಿದೆ. ಇದನ್ನು ತಪ್ಪಿಸಿ, ಮೋದಿಯನ್ನು ಮತ್ತೆ ವೈಭವೀಕರಿಸಲು ಮುಂದಾಗಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪೊಲಿಟಕ್‌ ಸರ್ಜರಿ ನಡೆಸಿ, ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದಕ್ಕಾಗಿ, ಈಗಾಗಲೇ ಮೋದಿ ಹಾಗೂ ಅಮಿತ್ ಷಾ ಅವರು ಆರ್‌ಎಸ್‌ಎಸ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ, ಅವರಿಂದ ರಾಜೀನಾಮೆ ಪಡೆದು, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ-ಶಾ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

ಈ ಪೈಕಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು. ಕರ್ನಾಟಕದ ಸಿಎಂ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ.

ಈ ಹಿಂದೆಯೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಕೆಲಸಗಳಲ್ಲಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸಿ, ಸಭೆಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದ್ದು, ಯಡಿಯೂರಪ್ಪ ಅವರ ಸಿಎಂ ಖುರ್ಚಿ ಮತ್ತೆ ಅಲುಗಾಡುತ್ತಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಶುರು ಮಾಡಿದ್ದಾರೆ. ತಮ್ಮ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಕೆಲವರ ತಲೆದಂಡವಾಗಲಿದೆ. ಈ ತಲೆದಂಡವನ್ನೇ ಅಸ್ತ್ರವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಮತ್ತೆ ಮೋದಿಯವರನ್ನು ಅಟ್ಟಕ್ಕೇರಿಸಲಿದೆ ಎಂದು ರಾಜಕೀಯ ವಿಮರ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೋವಿಡ್ ನಿರ್ವಹಣೆಯ ವಿಫಲತೆ, ಚುನಾವಣಾ ಫಲಿತಾಂಶಗಳಲ್ಲಿ ಹಿನ್ನಡೆ: BJP-RSS ನಲ್ಲಿ ಈಗ ಆಂತರಿಕ ಆಕ್ರೋಶ, ತಳಮಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಸರ್ಕಾರದ ಕೆಲಸಗಳಿಗೆ ಉಪರಾಜ್ಯಪಾಲರುಗಳ ಮೂಲಕ ಒಕ್ಕೂಟ ಸರ್ಕಾರ ಹೇಗೆ ತೊಡರುಗಾಲು ಕೊಡುತ್ತ ಬಂದಿದೆ ಎಂಬುದನ್ನು ನಾವೆಲ್ಲಾ ನೋಡುತ್ತಾ ಬಂದಿದ್ದೇವೆ. ಕರ್ನಾಟಕದ ಮು.ಮ. ಯಡ್ಯೂರಪ್ಪನವರ ಕೊರೋನಾ ವೈಫಲ್ಯವೂ ಸಹ ಅವರ ತಲೆದಂಡಕ್ಕೆಂದೇ ಹೆಣೆಯಲಾದ ಅಂತಹುದೇ ಕುತಂತ್ರ ಎಂಬುದು ನನ್ನ ನಂಬಿಕೆ. ಇದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಚುನಾವಣೋತ್ತರ ಗಲಭೆಗಳ ವಿಚಾರದಲ್ಲೂ ಕುತಂತ್ರ ಮಾಡಲಾಗಿದೆ ಎಂಬುದು ನನ್ನ ನಂಬಿಕೆ. ಒಟ್ಟಾರೆಯಾಗಿ ತಮಗೆ ಬೇಡದವರನ್ನು, ಅಸಂವೈಧಾನಿಕವಾಗಿಯಾದರೂ ಸರಿಯೇ, ಹೇಗಾದರೂ ತೊಲಗಿಸಿಕೊಳ್ಳುವ ಸರ್ವಾಧಿಕಾರದ ಒಂದು ಸ್ವರೂಪವನ್ನು ಒಕ್ಕೂಟ ಪ್ರದರ್ಶಿಸುತ್ತಿದೆ ಎಂಬುದನ್ನು ಯಾರೂ ಅಲ್ಲಗೆಳೆಯಲಾರರು.

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...