HomeUncategorizedಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಹತ್ತು ತಿಂಗಳ ನಂತರವೂ ಕೊರೊನಾ ಬಿಕ್ಕಟ್ಟು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಅನ್‌ಲಾಕ್ ಮಾಡಿದ ನಂತರ ಅನೇಕ ದೇಶಗಳು ಕೊರೊನಾ ಸೋಂಕಿನ ಎರಡನೇ ಅಲೆಯನ್ನು ಎದುರಿಸುತ್ತಿವೆ.

- Advertisement -
- Advertisement -

ಕೊರೊನಾ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ವಿಶ್ವದಾದ್ಯಂತ 10 ಜನರಲ್ಲಿ ಒಬ್ಬರಿಗೆ ಕೊರೊನಾ ಸೋಂಕಿಗೆ ಒಳಗಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಶೇಷ ಸಭೆಯಲ್ಲಿ ಅಲ್ಲಿನ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಅಂದಾಜಿನ ಪ್ರಕಾರ, ವಿಶ್ವದ ಬಹುಪಾಲು ಜನರು ಅಪಾಯದಲ್ಲಿದ್ದಾರೆ ಎಂದು ಉನ್ನತ ಅದಿಕಾರಿಯೊಬ್ಬರು ಹೇಳಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಜಗತ್ತಿನಲ್ಲಿ ಪ್ರಸ್ತುತ 35 ಮಿಲಿಯನ್ ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಆದರೆ WHO ಅಂದಾಜಿನ ಪ್ರಕಾರ ಸುಮಾರು 800 ಮಿಲಿಯನ್ (80 ಕೋಟಿ) ಜನರು ಸೋಂಕಿಗೆ ಒಳಗಾಗಿದ್ದಾರೆ ಎಂಬುದು ತಿಳಿದು ಬಂದಿದೆ. ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆಗಿಂತ ವಾಸ್ತವದಲ್ಲಿರುವ ನೈಜ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ತಜ್ಞರು ಬಹಳ ಹಿಂದೆಯೇ ಕಳವಳ ವ್ಯಕ್ತಪಡಿಸಿದ್ದರು.

ಕೊರೊನಾ ಕುರಿತಂತೆ ಚರ್ಚಿಸಲು ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ WHO ಪ್ರಧಾನ ಕಛೇರಿಯಲ್ಲಿ ಸಭೆ ಸೇರಲಾಗಿತ್ತು.

ಹತ್ತು ತಿಂಗಳ ನಂತರವೂ ಕೊರೊನಾ ಬಿಕ್ಕಟ್ಟು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಅನ್‌ಲಾಕ್ ಮಾಡಿದ ನಂತರ ಅನೇಕ ದೇಶಗಳು ಕೊರೊನಾ ಸೋಂಕಿನ ಎರಡನೇ ಅಲೆಯನ್ನು ಎದುರಿಸುತ್ತಿವೆ. ಕೆಲವು ಕಡೆ ಮೊದಲಿಗಿಂತಲೂ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ.

ಇದನ್ನೂ ಓದಿ: ಕೊರೊನಾದಿಂದ 551 ವೈದ್ಯರ ಸಾವು: ಭಾರತೀಯ ವೈದ್ಯಕೀಯ ಸಂಘಟನೆಯ ದತ್ತಾಂಶ

ವಿಶ್ವದ ಜನಸಂಖ್ಯೆಯ ಶೇಕಡಾ 10 ರಷ್ಟು ಜನರು ಈ ವೈರಸ್‌ಗೆ ತುತ್ತಾಗಿದ್ದಾರೆ. ಇದು ದೇಶದಿಂದ ದೇಶಕ್ಕೆ ಬದಲಾಗುತ್ತದೆ. ನಗರದಿಂದ ಹಳ್ಳಿಗೆ ಬದಲಾಗುತ್ತದೆ ಮತ್ತು ವಿಭಿನ್ನ ಗುಂಪುಗಳ ನಡುವೆ ವ್ಯತ್ಯಾಸವನ್ನು ಹೊಂದಿರುತ್ತದೆ ಎಂದು, WHOನ ಆರೋಗ್ಯ ತುರ್ತು ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಮೈಕ್ ರಯಾನ್ ಹೇಳಿದ್ದಾರೆ.

ಪ್ರಸ್ತುತ ಭಾರತದಲ್ಲಿ 66,85,082 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 1,03,569 ಸಾವುಗಳು ಸಂಭವಿಸಿವೆ. ಒಟ್ಟು 56,32,490 ಸೋಂಕಿತರು ಇದುವರೆಗೂ ಚೇತರಿಸಿಕೊಂಡಿದ್ದು, 9,19,023 ಸಕ್ರಿಯ ಸೋಂಕಿತ ಪ್ರಕರಣಗಳಿವೆ.


ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...