Homeಕರ್ನಾಟಕ7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ 7.5 ಲಕ್ಷ ಚಾಲಕರು ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು.

- Advertisement -
- Advertisement -

ರಾಜ್ಯ ಸರ್ಕಾರ ಆಟೋ-ಟ್ಯಾಕ್ಸಿ ಚಾಲಕರು, ಕ್ಷೌರಿಕರು, ಮಡಿವಾಳರು ಮತ್ತು ಕಟ್ಟಡ ಕಾರ್ಮಿಕರಿಗೆ ‘ಪರಿಹಾರ’ ಘೋಷಿಸಿದ್ದರೂ ಬಹುತೇಕರಿಗೆ ಹಣ ಬಂದಿಲ್ಲ. ಸೇವಾಸಿಂಧುವಿನಲ್ಲಿ ಕಾರ್ಮಿಕರ ನೋಂದಣಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಹಾಗೂ ಸರ್ವರ್ ಡೌನ್ ಪ್ರಮುಖ ಕಾರಣ ಎನ್ನಲಾಗಿದೆ. ಕಾರ್ಮಿಕರ ಹೆಸರಲ್ಲಿ ಸಣ್ಣಪುಟ್ಟ ವ್ಯತ್ಯಾಸವಿದ್ದರೂ ಸೇವಾಸಿಂದು ಸ್ವೀಕರಿಸುವುದಿಲ್ಲ. ಎಲ್ಲಾ ದಾಖಲೆಗಳನ್ನು ಸಲ್ಲಿಸಿಯೂ ಅದು ಒಪ್ಪಿಕೊಳ್ಳುವುದು ಕಷ್ಟವಾಗಿದೆ. ಹಾಗಾಗಿ ಫಲನುಭವಿಗಳು 5000 ರೂ ಪರಿಹಾರದ ಹಣ ಪಡೆಯುವುದಕ್ಕೆ ಹರಸಾಹಸಪಡಬೇಕಾಗಿದೆ.

ರಾಜ್ಯದಲ್ಲಿ 7.5 ಲಕ್ಷ ಮಂದಿ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಇದ್ದಾರೆ. 2ಲಕ್ಷದಷ್ಟು ಮಂದಿ ಲೈಸನ್ಸ್  ಹೊಂದಿಲ್ಲದ ಚಾಲಕರು ಇದ್ದಾರೆ. ಹಾಗಾಗಿ ಪರವಾನಿಗೆ ಹೊಂದಿಲ್ಲದ ಚಾಲಕರಿಗೆ ಹಣ ಬರುವುದಿಲ್ಲ. ಅಷ್ಟೇ ಅಲ್ಲದೆ ಎಲ್ಲಾ ದಾಖಲೆಗಳು ಇರುವ ಚಾಲಕರಿಗೂ ಹಣ ದೊರೆಯುತ್ತದೆ ಎಂಬ ನಂಬಿಕೆ ಇಲ್ಲ. ಆದರೂ ಚಾಲಕರು ನಿತ್ಯವು ಸೇವಾಸಿಂದುವಿನಲ್ಲಿ ನೋಂದಣಿ ಮಾಡಿಸುವುದರಲ್ಲಿ ನಿರತರಾಗಿದ್ದಾರೆ. ದಾಖಲೆಗಳನ್ನು ಅಪ್ ಲೋಡ್ ಮಾಡಿ ಅಗ್ರಿ ಕೊಟ್ಟರೆ ಅದು ತೆಗೆದುಕೊಳ್ಳುವುದಿಲ್ಲ. ಹಾಗಾಗಿ ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಇದೇ ರೀತಿ ಮುಂದುವರಿದರೆ ವರ್ಷವಾದರೂ ನೋಂದಣಿ ಮಾಡಿಸಲು ಸಾಧ್ಯವಿಲ್ಲ ಎಂದು ಚಾಲಕರು ಆರೋಪಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್, “ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ ಚಾಲಕರು 7.5 ಲಕ್ಷ ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು. 7.5 ಲಕ್ಷ ಮಂದಿ ಚಾಲಕರಿಗೆ 5 ಸಾವಿರ ರೂನಂತ ಪರಿಹಾರ ನೀಡಬೇಕೆಂದರೆ 400 ಕೋಟಿ ಹಣ ಮೀಸಲಿಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ 1610 ಕೋಟಿಯಲ್ಲಿ ಕೇವಲ 40 ಕೋಟಿ ಚಾಲಕರಿಗೆ ನೀಡಲು ಉದ್ದೇಶಿಸಿರುವುದರಿಂದ ಈ ಹಣ ಸಾಕಾಗುವುದಿಲ್ಲ ಎಂದು ಹೇಳಿದರು.

ಚಾಲಕರಿಗೆ ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಎಲ್ಲ ಇದ್ದರೂ ಚಾಸಿಸ್ ನಂಬರ್ ಬೇರೆಯವರ ಹೆಸರಲ್ಲಿರುತ್ತದೆ.  ಶೇಕಡ 40ರಷ್ಟು ಆಟೋ ಮತ್ತು ಟ್ಯಾಕ್ಸಿಗಳು ಚಾಲಕ ಕಮ್ ಮಾಲಿಕರವು ಆಗಿರುತ್ತವೆ. ಅವರಿಗೆ ಚಾಸಿಸ್ ನಂಬರ್ ಕೂಡ ಇರುತ್ತದೆ. ಉಳಿದ ಶೇಕಡ 60ರಷ್ಟು ಚಾಲಕರು ಚಾಸಿಸ್ ನಂಬರ್ ಹೊಂದಿಲ್ಲ. ಡ್ರೈವಿಂಗ್ ಲೈಸನ್ಸ್ ನಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ವ್ಯತ್ಯಾಸವಿದ್ದರೆ (ಅದು ಇನ್ಶಿಯಲ್).ಆಗ ಸೇವಾಸಿಂದು ವೈಬ್ ಸೈಟ್ ನಲ್ಲಿ ನೋಂದಣಿಯಾಗದೆ ರಿಜೆಕ್ಟ್ ಆಗುತ್ತದೆ. ಇಂಥ ಪ್ರಕರಣಗಳು ಹಲವು ಇರುವುದು ಕಂಡು ಬಂದಿದೆ. ಆದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ ಪರಿಹಾರ ಪಡೆಯಲು ಬಾರದಂತಹ ಪರಿಸ್ಥಿತಿ ಬಂದಿದೆ.


ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ


2018ರ ಅಂಕಿಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ 21 ಲಕ್ಷ ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಸಿದ್ದಾರೆ. ಆದರೆ 2019ರಲ್ಲಿ ನವೀಕರಣ ಆಗಿರುವುದು ತುಂಬ ಕಡಿಮೆ. ಕೇವಲ 1.55 ಲಕ್ಷ ಮಂದಿ ಕಟ್ಟಡ ಕಾರ್ಮಿಕರ ಹೆಸರನ್ನು ನವೀಕರಿಸಲು ಮಾತ್ರ ಸಾಧ್ಯವಾಗಿದೆ. ಇದುವರೆಗೆ ಕಟ್ಟಡ ಕಾರ್ಮಿಕರಿಗೆ ಶೇ.50ರಷ್ಟು ಮಂದಿಗೆ ಪರಿಹಾರದ ಹಣ ಅವರ ಅಕೌಂಟಿಗೆ ನೇರ ವರ್ಗಾವಣೆಗೊಂಡಿದೆ.  ಉಳಿದವರಿಗೆ ಇನ್ನೂ ಬಂದಿಲ್ಲ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ “ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 1 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಹಾಗಾಗಿ ಕಟ್ಟಡ ಕಾರ್ಮಿಕರಿಗೆ ಹಣ ಬಂದಿದೆ. ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೋಂದಾಯಿತರಲ್ಲದ ಕಾರ್ಮಿಕರಿಗೂ ಪರಿಹಾರ ನೀಡಬೇಕೆಂಬ ಒತ್ತಾಯ ನಮ್ಮದು. ಈ ಹಿನ್ನೆಲೆಯಲ್ಲಿ 12 ಮಂದಿ ಕಾರ್ಮಿಕರಿಗೆ ಹಣ ವರ್ಗಾವಣೆಯಾಗಿದೆ. ನಮ್ಮ ತಕರಾರಿರುವುದು ಶಾಸಕರಿಗೆ ಆಹಾರ ಧಾನ್ಯದ ಕಿಟ್ ನೀಡಿರುವುದರಲ್ಲಿ. ಇದರಲ್ಲಿ ವಂಚನೆಯಾಗಿದೆ. ಹಾಗಾಗಿ ಕಷ್ಟದಲ್ಲಿರುವ ಎಲ್ಲಾ ಕಾರ್ಮಿಕರಿಗೂ ಪ್ರತಿ ತಿಂಗಳು 8 ಸಾವಿರದಂತೆ ಮೂರು ತಿಂಗಳಿಗೆ 24 ಸಾವಿರ ರೂಪಾಯಿ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ ಎಂದರು.

ಮಡಿವಾಳರು, ಕ್ಷೌರಿಕರು ಸೇವಾಸಿಂದುವಿನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪರದಾಡುತ್ತಿದ್ದಾರೆ. ದಾಖಲೆಗಳನ್ನು ಹಿಡಿದು ಇಂಟರ್ ನೆಟ್ ಸೆಂಟರ್ ಗಳಿಗೆ ಅಲೆಯುತ್ತಿರುವುದು ಸಾಮಾನ್ಯವಾಗಿದೆ. ಆಧಾರ್‌, ಬ್ಯಾಂಕ್ ಪಾಸ್ ಪುಸ್ತಕ, ಅಂಗಡಿ ಲೈಸನ್ಸ್ ನೀಡಿದರೂ ನಮಗೆ ಇನ್ನೂ ಹಣ ಬಂದಿಲ್ಲ ಎನ್ನುತ್ತಾರೆ ರಾಜು.

ವೈಜ್ಞಾನಿಕವಾಗಿ ಚಾಲಕರು, ಕ್ಷೌರಿಕರು, ಮಡಿವಾಳರ ಸಮಗ್ರ ಮಾಹಿತಿ ಪಡೆಯದೇ ಇರುವುದು ಇಂತಹ ವಿಳಂಬಕ್ಕೆ ಕಾರಣವಾಗಿದೆ. ಆಧಾರ್, ಪಾಸ್ ಪುಸ್ತಕ, ಡ್ರೈವಿಂಗ್ ಲೈಸನ್ಸ್‌‌ನಲ್ಲಿರುವ ಹೆಸರುಗಳ ಸಣ್ಣಪುಟ್ಟ ವ್ಯತ್ಯಾಸಗಳು ಕೂಡ ಪರಿಹಾರದ ಹಣ ಪಡೆಯಲು ಸಾಧ್ಯವಾಗಿಲ್ಲ.


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...