Homeಕರ್ನಾಟಕಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಗಳು ಎದ್ದಿದೆ.

- Advertisement -
- Advertisement -

ತುಮಕೂರು: ಕೊರೊನ ವಾರಿಯರ್ಸ್ ಗೆ ವೈಯಕ್ತಿಕ ಸುರಕ್ಷಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮೊದಲಿಗೆ ಪಿಪಿಇ ಕಿಟ್‌‌ಗಳ ಟೆಂಡರ್ ರಾಜ್ಯ ಮಟ್ಟದಲ್ಲಾಗಿದೆಯೇ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿದೆಯೇ ಸ್ಪಷ್ಟ ಮಾಹಿತಿ ಇಲ್ಲ. ಆರೋಗ್ಯ ಇಲಾಖೆಯ ನಿರ್ದೇಶಕರೇ ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಪಿಪಿಇ ಕಿಟ್‌‌ಗಳ ಅಗತ್ಯವಿದೆ ಎಂಬ ಮಾಹಿತಿ ಪಡೆದು ರಾಜ್ಯಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಬಹುದು. ಇಲ್ಲವೇ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಿದ್ದರೆ, ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಲು ಅವಕಾಶವಿದೆ.

ಒಂದೊಮ್ಮೆ ಜಿಲ್ಲಾಮಟ್ಟದಲ್ಲಿಯೇ ಪಿಪಿಇ ಕಿಟ್ ಖರೀದಿಗೆ ಟೆಂಟರ್ ಕರೆದಿದ್ದರೆ ಮೇಲಿನವರಿಗೆ ಕಮಿಷನ್ ನೀಡಲೇಬೇಕು ಎಂಬುದು ಆರೋಗ್ಯ ಇಲಾಖೆಯಲ್ಲಿನ ಮೂಲಗಳು ಹೇಳುತ್ತವೆ. ತುಮಕೂರಿನಲ್ಲಿ ಚಂದ್ರಿಕಾ ಅವರು ಜಿಲ್ಲೆಯಲ್ಲೇ ಟೆಂಡರ್ ಕರೆದು ಖರೀದಿಸಿದರೇ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಂದ್ರಿಕಾ ವಿರುದ್ಧ ಅವ್ಯವಹಾರದ ಆರೋಪ ಮಾಡುತ್ತಾರೆ.

ದಿಲೀಪ್ ಕುಮಾರ್ ಹಿಂದಿನ ಡಿಎಚ್ಒ ಚಂದ್ರಿಕಾ ವಿರುದ್ಧ ಆರೋಪ ಮಾಡುತ್ತಿದ್ದಂತೆಯೇ ಅವರನ್ನು ಡಿಮೋಷನ್ ಮಾಡಿ ಹೊಸದುರ್ಗಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಚಂದ್ರಿಕಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲೇ ಇಲ್ಲ. ಸರ್ಕಾರ ದಲಿತ ಅಧಿಕಾರಿಗಳನ್ನು ಅನಗತ್ಯವಾಗಿ ವರ್ಗಾವಣೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಂದ್ರಿಕಾ ಮೇಲೆ ತನಿಖೆಗೆ ಅಧೇಶಿಸಲಾಯಿತು. ಇದಾದ ಕೆಲವೇ ದಿನಗಳಲ್ಲಿ ಚಂದ್ರಿಕಾ ಅವರನ್ನು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ನೀಡಿತು. ಹಾಗಾಗಿ ಚಂದ್ರಿಕಾ ಈಗ ಜೆಡಿ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಆರೋಪವನ್ನು ಚಂದ್ರಿಕಾ ಮೇಲೆ ಮಾಡಿದ ಕೂಡಲೇ ವರ್ಗಾವಣೆ ಮಾಡುವುದಾದರೆ ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಮಾಡುವ ಹುನ್ನಾರ ಈ ಆರೋಪದ ಹಿಂದಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜ್ಯೋತಿ ಗಣೇಶ್ ಒತ್ತಡ ವರ್ಗಾವಣೆಗೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಚಂದ್ರಿಕಾ ಅವರು ಸಾಚಾ ಏನಲ್ಲ. ಆದರೆ ದಲಿತರು ಎಂಬ ಕಾರಣಕ್ಕೆ ಮತ್ತು ತಮ್ಮ ಮಾತನ್ನು ಕೇಳುವ ಅಧಿಕಾರಿಯನ್ನು ಡಿಎಚ್ಒ ಸ್ಥಾನಕ್ಕೆ ಕೂರಿಸಬೇಕಾಗಿತ್ತು. ಆ ಕಾರಣಕ್ಕೆ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಅಧಿಕಾರಿಯಾಗಿ ಕೂರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು ತಮ್ಮ ಸುಮುದಾಯದ ಅಧಿಕಾರಿಯನ್ನು ಆ ಜಾಗಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಿನ ಡಿಎಚ್ಒ ನಾಗೇಂದ್ರಪ್ಪ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪಂಡ್ ಆಗಿದ್ದವರು. ಅವ್ಯವಹಾರದ ಆರೋಪವೂ ನಾಗೇಂದ್ರಪ್ಪ ಅವರ ಮೇಲಿತ್ತು. ಅಜೆಸ್ಟ್‌ಮೆಂಟ್ ನಡೆದು ಕೇಸು ಖುಲಾಸೆಯಾಗಿದೆ ಎಂದು ಹೇಳಲಾಗುತ್ತಿದೆ.

ಚಂದ್ರಿಕಾ ಡಿಎಚ್ಓ ಆಗಿದ್ದಾಗ ಪ್ರತಿದಿನದ ಕೊರೊನ ಹೆಲ್ತ್ ಬುಲಿಟಿನ್ ಅನ್ನು ಜಿಲ್ಲಾಧಿಕಾರಿ ನೀಡುತ್ತಿದ್ದರು. ನಾಗೇಂದ್ರಪ್ಪ ಡಿಎಚ್ಒ ಆಗಿ ಬಂದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಯೇ ಕೋವಿಡ್-19 ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ. ಇದು ಒಬ್ಬ ಮಹಿಳಾ ಅಧಿಕಾರಿಯನ್ನು ನಡೆಸಿಕೊಂಡಿರುವ ರೀತಿಯನ್ನು ಎತ್ತಿತೋರಿಸುತ್ತದೆ. ಕೊರೊನ ಕಾಲದಲ್ಲಿ ‘ಹುಲ್ಲುಗಾವಲು’ ಹುಲುಸಾಗಿ ಬೆಳೆದಿದ್ದು, ಅದನ್ನು ಕೊಯ್ದುಕೊಳ್ಳಲು ಭ್ರಷ್ಟರು ಕಾದು ಕುಳಿತಿದ್ದಾರೆ. 

ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ತಮ್ಮ ಸಮುದಾಯದ ಅಧಿಕಾರಿಗಳನ್ನು ಮುಖ್ಯ ಸ್ಥಾನಗಳಿಗೆ ತರುವ ಹುನ್ನಾರು ನಡೆಯುತ್ತಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಸಂಬಂಧಿ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...