Homeಕರೋನಾ ತಲ್ಲಣಒಂದು ಲಕ್ಷದ ಗಡಿಯತ್ತ ಸಾಗಿದ ದೇಶದ ಕೊರೊನಾ ಸಾವಿನ ಸಂಖ್ಯೆ

ಒಂದು ಲಕ್ಷದ ಗಡಿಯತ್ತ ಸಾಗಿದ ದೇಶದ ಕೊರೊನಾ ಸಾವಿನ ಸಂಖ್ಯೆ

ದೇಶದಲ್ಲಿ ಚೇತರಿಕೆ ಪ್ರಮಾಣ 83.01% ಇದ್ದರೆ, ಮರಣ ಪ್ರಮಾಣ 1.06% ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

- Advertisement -
- Advertisement -

ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ 61 ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ 70,589  ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ದೇಶದಲ್ಲಿ ಇದುವರೆಗೂ ವರದಿಯಾದ ಕೊರೊನಾ ಪ್ರಕರಣಗಳ ಸಂಖ್ಯೆ 61,45,292 ಕ್ಕೆ ತಲುಪಿದೆ.

ಒಟ್ಟು 61,45,292 ಕೊರೊನಾ ಪ್ರಕರಣಗಳ ಪೈಕಿ 9,47,576 ಸಕ್ರಿಯ ಪ್ರಕರಣಗಳಿದ್ದು, 51,01,398 ಮಂದಿ ಗುಣಮುಖರಾಗಿದ್ದಾರೆ. ಕಳೆದ ಒಂದು ದಿನದಲ್ಲಿ 776  ಸೋಂಕಿತರು ಮೃತಪಟ್ಟಿದ್ದು, 84,877 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿವರೆಗೂ ಕೊರೊನಾದಿಂದ ದೇಶದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 96,318ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಒಳಮೀಸಲಾತಿ: ಬೆಂಕಿಯಾಗಲೊಲ್ಲದ ಬೆಳಕು – ಡಾ.ರವಿಕುಮಾರ್ ನೀಹ

ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿರುವ ಪ್ರಮಾಣ ಹೆಚ್ಚಾಗಿದ್ದು, ಮರಣ ಪ್ರಮಾಣ ಕಡಿಮೆಯಾಗಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ 83.01% ಇದ್ದರೆ, ಮರಣ ಪ್ರಮಾಣ 1.06% ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ನಿನ್ನೆವರೆಗೂ ದೇಶದಲ್ಲಿ 7,31,10,041 ಕೊರೊನಾ ಟೆಸ್ಟ್ ನಡೆಸಲಾಗಿದೆ. ನಿನ್ನೆ ಒಂದೇ ದಿನ 11,42,811 ಕೋವಿಡ್‌ ಪರೀಕ್ಷೆಗಳನ್ನು ನಡೆಸಿರುವುದಾಗಿ ಐಸಿಎಂಆರ್‌ ತಿಳಿಸಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಿಸಿರುವ ಇಂದಿನ ಕೋವಿಡ್ ಅಂಕಿ ಅಂಶಗಳು

24 ಗಂಟೆಯಲ್ಲಿ ಹೊಸ ಪ್ರಕರಣಗಳು – 70,589

24 ಗಂಟೆಯಲ್ಲಿ ಮೃತಪಟ್ಟವರು -776

24 ಗಂಟೆಯಲ್ಲಿ ಗುಣಮುಖರಾದವರು – 84,877

ಒಟ್ಟಾರೆ ಪ್ರಕರಣಗಳು – 61,45,292

ಒಟ್ಟು ಸಕ್ರಿಯ ಪ್ರಕರಣಗಳು – 9,47,576

ಒಟ್ಟಾರೆ ಗುಣಮುಖರಾದವರು – 51,01,398

ಒಟ್ಟಾರೆ ಮೃತಪಟ್ಟವರು – 96,318


ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...