Homeಕರೋನಾ ತಲ್ಲಣಕೊರೊನಾ: ಬ್ರೆಜಿಲ್‌ ಹಿಂದಿಕ್ಕಿ ಎರಡನೆ ಸ್ಥಾನಕ್ಕೆ ಏರಿದ ಭಾರತ

ಕೊರೊನಾ: ಬ್ರೆಜಿಲ್‌ ಹಿಂದಿಕ್ಕಿ ಎರಡನೆ ಸ್ಥಾನಕ್ಕೆ ಏರಿದ ಭಾರತ

ಇದುವರೆಗೂ 32 ಲಕ್ಷಕ್ಕೂ ಹೆಚ್ಚು ಕೊರೊನಾ ರೋಗಿಗಳು ದೇಶದಾದ್ಯಂತ ಚೇತರಿಸಿಕೊಂಡಿದ್ದಾರೆ.

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ 90 ಸಾವಿರಕ್ಕಿಂತಲೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಬ್ರೆಜಿಲ್‌‌ ದೇಶವನ್ನು ಹಿಂದಿಕ್ಕಿ, ಭಾರತವು ವಿಶ್ವದ ಎರಡನೇ ಅತೀ ಹೆಚ್ಚು ಕೊರೊನಾ ಸೋಂಕಿತ ದೇಶವಾಗಿ ದಾಖಲಾಯಿತು.

ಪ್ರಸ್ತುತ ದೇಶದಲ್ಲಿ ಇದುವರೆಗೂ ಒಟ್ಟು 42 ಲಕ್ಷ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ದೇಶದಲ್ಲಿ 90,000 ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಇದನ್ನೂ ಓದಿ: ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ಅಮೆರಿಕಾ ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ದೇಶವಾಗಿದ್ದು, ಅಲ್ಲಿ ಇದುವರೆಗೂ 62 ಲಕ್ಷ ಪ್ರಕರಣಗಳು ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ, ಭಾರತವು ಸುಮಾರು ಒಂದು ತಿಂಗಳಿನಿಂದ ವಿಶ್ವದಲ್ಲೇ ಅತಿ ಹೆಚ್ಚು ದೈನಂದಿನ ಕೊರೊನಾ ಪ್ರಕರಣಗಳನ್ನು ವರದಿ ಮಾಡುತ್ತಿದೆ.

ಸುಮಾರು 32 ಲಕ್ಷಕ್ಕೂ ಹೆಚ್ಚು ಕೊರೊನಾ ರೋಗಿಗಳು ದೇಶದಾದ್ಯಂತ ಚೇತರಿಸಿಕೊಂಡಿದ್ದು, ಕಳೆದ 24 ಗಂಟೆಗಳಲ್ಲಿ 69 ಸಾವಿರಕ್ಕೂ ಹೆಚ್ಚು ಚೇತರಿಕೆ ದಾಖಲಾಗಿದೆ.

ಸೋಂಕಿನಿಂದಾಗಿ ಈವರೆಗೆ 71,642 ಜನರು ಸಾವಿಗೀಡಾಗಿದ್ದು, ನಿನ್ನೆ ಒಂದೇ ದಿನದಲ್ಲಿ 1,016 ಸಾವುಗಳು ದಾಖಲಾಗಿದೆ.

ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕೊರೊನಾದಿಂದಾಗಿ ಹೆಚ್ಚು ಹಾನಿಗೊಳಗಾದ ರಾಜ್ಯಗಳಾಗಿದ್ದು, ಈ ಐದು ರಾಜ್ಯಗಳು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳನ್ನು ವರದಿ ಮಾಡಿದೆ.

ರಾಜ್ಯದಲ್ಲಿ ಇದುವರೆಗೆ 3.99 ಲಕ್ಷ ಪ್ರಕರಣಗಳು ವರದಿಯಾಗಿದ್ದು. 2.93 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದಾಗಿ 6,393 ಜನರು ಈ ವರೆಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...