Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...