ಕೊರೊನಾ ಸೋಂಕು ದೃಡಪಟ್ಟಿದ್ದ ಶವ ಆಸ್ಪತ್ರೆಯಿಂದ ನಾಪತ್ತೆಯಾದ ಘಟನೆ ಮುಂಬೈಯಲ್ಲಿ ನಡೆದಿದೆ.
ಕೊಲೆಯಾಗಿದ್ದ 27 ವರ್ಷದ ವ್ಯಕ್ತಿಯೊಬ್ಬರ ಮೃತ ದೇಹವನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದರೆ ಈಗ ಅವರ ಶವ ನಾಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ರಾಜವಾಡಿ ಆಸ್ಪತ್ರೆಯ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕೌಟುಂಬಿಕ ಕಲಹದಿಂದಾಗಿ ಸೋದರ ಸಂಬಂಧಿಯೊಬ್ಬರು 27 ವರ್ಷದ ಯುವಕನ ಹೊಟ್ಟೆಗೆ ಇರಿದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ನಗರದ ರಾಜವಾಡಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ನಂತರ ದೇಹವನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ, ಶವವೇ ಆಸ್ಪತ್ರೆಯಿಂದ ನಾಪತ್ತೆಯಾಗಿದೆ.
ಈ ಬಗ್ಗೆ ಮೃತರ ಕುಟುಂಬ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ರಾಜವಾಡಿ ಆಸ್ಪತ್ರೆಯ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕೌಟುಂಬಿಕ ಕಲಹದ ಬಗ್ಗೆ ದೇವನಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.
ಓದಿ: ನನ್ನ ಅಜಾಗರೂಕತೆಯೆ ಕಾರಣ; ಕೊರೊನಾ ಸೋಂಕಿತ ಮಹಾರಾಷ್ಟ್ರ ಸಚಿವ


