Homeಕರ್ನಾಟಕಕೊರೊನಾ ಭಯ: ಬೆಂಗಳೂರಿನ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಅಸಹಜ ಸಾವು

ಕೊರೊನಾ ಭಯ: ಬೆಂಗಳೂರಿನ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಅಸಹಜ ಸಾವು

- Advertisement -
- Advertisement -

ಕೊರೊನಾ ಸೋಂಕಿತ ಮಹಿಳಾ ರೋಗಿಯೊಬ್ಬರು ಸೋಂಕಿಗೆ ಹೆದರಿ ಅಸಹಜವಾಗಿ ಸಾವಿಗೀಡಾದ ಘಟನೆ ನಿನ್ನೆ ರಾತ್ರಿ (ಗುರುವಾರ) ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.

ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೂ ಗುರುವಾರ ಮಧ್ಯರಾತ್ರಿ 2.30 ರ ವೇಳೆಗೆ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗಾಗಿ ಮೀಸಲಿಟ್ಟಿದ್ದ ವಾರ್ಡ್​ನಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೂನ್ ತಿಂಗಳ 18ರಂದು ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ಈ ಮಹಿಳೆಯೂ ಕುಣಿಗಲ್ ನ‌ ರಾಜಗೋಪಾಲ ನಗರದಲ್ಲಿ ವಾಸವಾಗಿದ್ದರು.

ಮಹಿಳೆಯ ಜೊತೆಗೆ ಮಗ, ಸೊಸೆ ಹಾಗೂ ಮೊಮ್ಮಗ ಕೂಡ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ಕಾರಣದಿಂದ ಖಿನ್ನತೆಯಿಂದ ಅಥವಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಕೊರೋನಾ ರೋಗಿ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದರು. ನಿನ್ನೆ ಮತ್ತೋರ್ವ ಮಹಿಳೆ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಎರಡನೇ ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಬಲಿಯಾದಂತಾಗಿದೆ.

ಜೀವ ಅಮೂಲ್ಯವಾಗಿದೆ ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಓದಿ: ಬಾಯ್‍ಕಾಟ್ ಚೈನಾ ಅಬ್ಬರದ ಕೂಗು ವಾಣಿಜ್ಯದಲ್ಲಿ ಕಾರ್ಯಗತ ಸಾಧ್ಯವೇ?


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...