Homeಅಂತರಾಷ್ಟ್ರೀಯಪಾಕಿಸ್ತಾನದ ಮಾಜಿ ಕ್ರಿಕೆಟಿಗ ’ಶಾಹಿದ್ ಅಫ್ರಿದಿ’ಗೆ ಕೊರೊನಾ ಸೋಂಕು

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ’ಶಾಹಿದ್ ಅಫ್ರಿದಿ’ಗೆ ಕೊರೊನಾ ಸೋಂಕು

- Advertisement -
- Advertisement -

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಮೂರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಬಳಲುತ್ತಿದ್ದ ಅಫ್ರಿದಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಪರೀಕ್ಷೆ ವೇಳೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

“ನನಗೆ ಗುರುವಾರದಿಂದ ಅಸೌಖ್ಯ ಕಾಡುತ್ತಿದೆ. ನನ್ನ ಮೈಕೈ ಬಹಳಷ್ಟು ನೋಯುತ್ತಿದೆ. ನನ್ನ ಪರೀಕ್ಷೆ ನಡೆಸಲಾಯಿತು, ದುರದೃಷ್ಟವಶಾತ್ ನನಗೆ ಕೊರೊನಾ ಸೋಂಕು ಇರುವುದುತಿಳಿದು ಬಂತು. ನಾನು ಶೀಘ್ರ ಗುಣಮುಖನಾಗಲು ಪ್ರಾರ್ಥನೆಗಳ ಅಗತ್ಯವಿದೆ. ಇನ್‍ಶಾ ಅಲ್ಲಾಹ್,” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನದಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆ ಕಂಡಿದೆ. ಹೀಗಾಗಿ ತೀವ್ರ ಮೇಲ್ವಿಚಾರಣೆಯಲ್ಲಿ ಪೂರ್ವ ಸಿದ್ಧತೆಗಳನ್ನು ನಡೆಸಲು ಉದ್ದೇಶಿಸಲಾಗಿದ್ದ ಕ್ರಿಕೆಟ್ ಶಿಬಿರ ಕೂಡ ರದ್ದಾಗಿದೆ. ಕಳೆದ ವಾರ ಪಾಕಿಸ್ತಾನದಲ್ಲಿ ಕೊರೊನಾ ಪ್ರಕರಣ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದೆ.


ಓದಿ: ಪಾಕಿಸ್ತಾನದ‌ ಸಹಾಯ ತಿರಸ್ಕರಿಸಿದ ಭಾರತ…!


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...