Homeಕರೋನಾ ತಲ್ಲಣಕೊರೊನಾ, ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಂತೆ CITU, KPRS, AIAWU ಮನವಿ

ಕೊರೊನಾ, ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಂತೆ CITU, KPRS, AIAWU ಮನವಿ

- Advertisement -
- Advertisement -

ದೇಶದಾದ್ಯಂತ ಬಿಗಡಾಯಿಸುತ್ತಿರುವ ಆರ್ಥಿಕ ಬಿಕ್ಕಟ್ಟು ಹಾಗೂ ಕೊರೊನಾ ಸಂಕಷ್ಠವನ್ನು ಜನತೆ ಅತ್ಯಂತ ಗಂಭೀರವಾಗಿ ಎದುರಿಸುತ್ತಿರುವಾಗ ಸರಕಾರ ಜನರ ಜೊತೆ ನಿಂತು ದೇಶದ ಆರ್ಥಿಕ ಸಂಕಷ್ಠ ಹಾಗೂ ಆರೋಗ್ಯ ರಕ್ಷಣೆಗೆ ನಿಲ್ಲುವುದರ ಬದಲು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿರುವ ಸೆಂಟರ್ ಅಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಕರ್ನಾಟಕ ಪ್ರಾಂತ ರೈತ ಸಂಘ (KPRS) ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ಅಂತಹ ನೀತಿಗಳನ್ನು ತಕ್ಷಣವೇ ಕೈಬಿಡುವಂತೆ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿವೆ.

ಮೂರು ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು, ಆರ್ಥಿಕ ಕುಸಿತ ಮತ್ತು ಕೊರೊನಾ ಬಿಕ್ಕಟ್ಟಿನ ಪರಿಸ್ಥಿಯಲ್ಲಿ ಕೆಲವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಧಾನ ಮಂತ್ರಿಗೆ ಹಕ್ಕೊತ್ತಾಯ ಮಾಡಿದೆ.

ಹಕ್ಕೋತ್ತಾಯವು, ವಿಶೇಷ ಪ್ಯಾಕೇಜ್ ಘೋಷಿಸಬೇಕು, ಜನದ್ರೋಹಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಒಳಿಸಬೇಕು, ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕೆಂದು ಆಗ್ರಹಿಸಿದೆ.

ಜಂಟಿ ಕ್ರಿಯಾ ಸಮಿತಿಯ ಹಕ್ಕೊತ್ತಾಯಗಳು :

  • ಕೊರೊನಾ ವೈರಾಣುವನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ನಾಗರೀಕರುಗಳಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ದೊರೆಯುವಂತೆ ಕ್ರಮವಹಿಸಬೇಕು. ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ 3 ರಷ್ಠು ಅಂಶವನ್ನು ವೆಚ್ಚ ಮಾಡಲು ಕ್ರಮವಹಿಸಬೇಕು.
  • ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲಾ ಕುಟುಂಬಗಳಿಗೆ ಕನಿಷ್ಟ ಕೊರೊನಾ ಸಮಸ್ಯೆ ಇತ್ಯರ್ಥವಾಗುವವರೆಗೆ ಮಾಸಿಕ 7,500 ರೂಗಳ ನೆರವು ಘೋಷಿಸಬೇಕು.
  • ಈ ಎಲ್ಲಾ ಕುಟುಂಬಗಳ ಸದಸ್ಯರಿಗೆ, ಮಾಸಿಕ ತಲಾ 10 ಕೆಜಿ ಸಮಗ್ರ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು ಹಾಗೂ ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್‌ನ್ನು ಒದಗಿಸಬೇಕು.
  • ನಗರ ಹಾಗೂ ಗ್ರಾಮೀಣ ಪ್ರದೇಶದ ಉದ್ಯೋಗ ಕೇಳುವ ಎಲ್ಲಾ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ತಲಾ ಕುಟುಂಬಕ್ಕೆ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಟ 600 ರೂಗಳಿಗೆ ಹೆಚ್ಚಿಸಬೇಕು.
  • ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ಒದಗಿಸಬೇಕು.
  • ಎಲ್ಲ ರೀತಿಯ ಕಾರ್ಮಿಕರುಗಳಿಗೆ ಲಾಕ್‌ಡೌನ್ ಅವಧಿಯ ವೇತನವು ದೊರೆಯುವಂತೆ ಅಗತ್ಯ ಕ್ರಮವಹಿಸಬೇಕು. ಕಾರ್ಮಿಕ ಕಾಯ್ದೆಗಳ ದುರ್ಬಲಗೊಳಿಸುವಿಕೆಯನ್ನು ತಕ್ಷಣ ತಡೆಯಬೇಕು.
  • ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು.
  • ವ್ಯವಸಾಯವನ್ನು ಕಾರ್ಪೋರೇಟ್ ಕಂಪನಿಗಳಿಗೆ ವಹಿಸುವ ಎಲ್ಲಾ ಭೂ ಹಾಗೂ ವ್ಯವಸಾಯ ಸಂಬಂಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.
  • ಸಾರ್ವಜನಿಕರನ್ನು ಕಾಳಸಂತೆಯ ಲೂಟಿಕೋರತನಕ್ಕೆ ಒಳಪಡಿಸುವ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ-2020 ನ್ನು ವಾಪಾಸು ಪಡೆಯಬೇಕು.

ಇದನ್ನೂ ಓದಿ: ಮಾಸ್ಕ್ ಧರಿಸದ ಕಾರಣಕ್ಕೆ ಬಂಧನಕ್ಕೊಳಗಾದ ದಲಿತ ಯುವಕ ಪೊಲೀಸ್ ಕಸ್ಟಡಿಯಲ್ಲಿ ಸಾವು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...