Homeಕರೋನಾ ತಲ್ಲಣಕೊರೊನಾ: ಪಂಜಾಬ್‌‌‌ನ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ 2 ಗಂಟೆ ವಿಸ್ತರಣೆ

ಕೊರೊನಾ: ಪಂಜಾಬ್‌‌‌ನ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ 2 ಗಂಟೆ ವಿಸ್ತರಣೆ

- Advertisement -
- Advertisement -

ಕೊರೊನಾ ವೈರಸ್ ಹೆಚ್ಚು ದಾಖಲಾಗುತ್ತಿರುವ ಪಂಜಾಬ್‌ನ ಒಂಬತ್ತು ಜಿಲ್ಲೆಗಳಲ್ಲಿ ಕರ್ಫ್ಯೂವನ್ನು ಎರಡು ಗಂಟೆಗಳ ಕಾಲ ವಿಸ್ತರಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗುರುವಾರ ಹೇಳಿದ್ದಾರೆ.

ಪ್ರತಿದಿನ 100 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಲುಧಿಯಾನ, ಜಲಂಧರ್, ಪಟಿಯಾಲ, ಮೊಹಾಲಿ, ಅಮೃತಸರ, ಗುರುದಾಸ್‌ಪುರ, ಹೋಶಿಯಾರ್‌ಪುರ, ಕಪುರ್ಥಾಲಾ ಮತ್ತು ರೋಪರ್ ಜಿಲ್ಲೆಗಳಲ್ಲಿ ಮಾರ್ಚ್ 18 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸಲಾಗಿದೆ. ಪಂಜಾಬ್‌ನಲ್ಲಿ ದೈನಂದಿನವಾಗಿ ವರದಿಯಾಗುತ್ತಿರುವ ಪ್ರಕರಣಗಳು 2039 ರವರೆಗೆ ಏರಿಕೆಯಾಗಿದ್ದು, ಸೋಂಕಿನಿಂದಾಗಿ ಬುಧವಾರ 35 ಸಾವುಗಳು ಸಂಭವಿಸಿವೆ.

ಇದನ್ನೂ ಓದಿ: ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ರಾಜ್ಯದಲ್ಲಿ ಕೊರೊನಾ ಬಹಳ ಅಪಾಯಕಾರಿಯಾಗಿ ಹರಡುತ್ತಿದ್ದು, ಇಂದು ಸುಮಾರು 2000 ಪ್ರಕರಣಗಳು ವರದಿಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಇನ್ನೂ ಹಲವಾರು ಕಠಿಣ ಕ್ರಮಗಳು ಮತ್ತು ನಿರ್ಬಂಧಗಳನ್ನು ಹೇರಲಾಗುವುದು” ಎಂದು ಎಚ್ಚರಿಸಿದ್ದಾರೆ.

“ಕೊರೊನಾ ವೈರಸ್ ಅನ್ನು ನಿಭಾಯಿಸಲು ಬೇಕಾಗಿ ತುಂಬಾ ಕಠಿಣವಾಗಲಿದ್ದೇನೆ. ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಇಂದಿನಿಂದ 11 ಗಂಟೆಯ ಬದಲು ರಾತ್ರಿ 9 ಗಂಟೆಯಿಂದ ಕರ್ಫ್ಯೂ ಪ್ರಾರಂಭವಾಗಲಿದೆ” ಅವರು ಹೇಳಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ರಾಜ್ಯ ಸರ್ಕಾರವು ತಜ್ಞರ ತಂಡದೊಂದಿಗೆ ಚರ್ಚಿಸಿದ ನಂತರ ಸಭೆಗಳ ಮೇಲಿನ ನಿರ್ಬಂಧಗಳು ಸೇರಿದಂತೆ ಹಲವಾರು ಕಠಿಣ ಕ್ರಮಗಳನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

“ಈ ನಿರ್ಬಂಧಗಳು ರಾಜಕೀಯ ಕೂಟಗಳ ಮೇಲೆ ಕೂಡಾ ಹೇರಲಾಗುತ್ತಿದೆಯೆ ಎಂಬುದು ವೈದ್ಯಕೀಯ ತಜ್ಞರ ತಂಡದ ಸಲಹೆಯಂತೆ ನಿರ್ಧರಿಸಲ್ಪಡುತ್ತದೆ” ಎಂದು ಅವರು ಹೇಳಿದ್ದಾರೆ. ರೋಗಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಆರೈಕೆ ಪಡೆಯಬೇಕೆಂದು ಅವರು ಪಂಜಾಬ್ ಜನರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಾ. 26ಕ್ಕೆ ಭಾರತ್ ಬಂದ್: ಹೋಳಿ ದಿನದಂದು ಕೃಷಿ ಕಾನೂನುಗಳ ಪ್ರತಿ ದಹನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...