Homeಮುಖಪುಟಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾದ ಆರ್ಥಿಕ ಮುಗ್ಗಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಘೋಷಿಸಿರುವ ಕೊರೊನಾ ಪುನಶ್ಚೇತನ ಪ್ಯಾಕೇಜ್‌ ಅಸಮರ್ಪಕವಾಗಿದೆ ಹಾಗೂ ದೇಶದ ಆರ್ಥಿಕತೆ ಕುಸಿಯುತ್ತಿದೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ ಹೇಳಿದ್ದಾರೆ.

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ, 2014, 2019 ರಲ್ಲಿ ಕೂಡ ಹಿಂದುತ್ವ ಗೆದ್ದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ಕೇಂದ್ರ ಸರ್ಕಾರದ ಪ್ಯಾಕೆಜ್ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯನ್ ಸ್ವಾಮಿ, “ಕೇಂದ್ರ ಸರ್ಕಾರ 21 ಟ್ರಿಲಿಯನ್‌ ಪರಿಹಾರ ಘೋಷಿಸಿದೆ. ಅದರಲ್ಲಿ, ಕೇವಲ 1.2 ಟ್ರಿಲಿಯನ್ ಮಾತ್ರ ಪ್ರೋತ್ಸಾಹಕವಾಗಿದೆ. ಉಳಿದದ್ದು ಉದ್ದೀಪಕ ಮತ್ತು ಹಣಕಾಸು ರಿಯಾಯಿತಿಗಳಾಗಿವೆ. ಪ್ರೋತ್ಸಾಹಕ ಪ್ಯಾಕೇಜ್ ಅಸಮರ್ಪಕವಾಗಿದೆ. ಅದು ಪೂರೈಕೆದಾರರನ್ನು ಬೆಳೆಸಿ, ಅಧಿಕಾರ ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

2014-15 ರ ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ಧಿ ದರ ಶೇ.8 ರಷ್ಟಿತ್ತು. ನಂತರದ ವರ್ಷಗಳಲ್ಲಿ ಅದು ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. 2019-20 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅಭಿವೃದ್ಧಿ ದರ 3.1 ಕ್ಕೆ ಕುಸಿದಿತ್ತು. ಕೊರೊನಾ ನಂತರದಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ಹೇರಿಕೆಯಿಂದಾಗಿ ವ್ಯಾಪಾರ, ವಹಿವಾಟು, ಉತ್ಪಾದನಾ ಕ್ಷೇತ್ರ ಎಲ್ಲವೂ ಸ್ಥಗಿತಗೊಂಡಿದ್ದು, ಅಭಿವೃದ್ಧಿ ಸೂಚ್ಯಂಕ ಬಿದ್ದಿದೆ ಎಂದು ಸುಬ್ರಹ್ಮಣ್ಯನ್ ಸ್ವಾಮಿ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?


source: tradingeconomics.com

ಜಿಡಿಪಿ ದರ ಗಣನೀಯವಾಗಿ ಕುಸಿಯುತ್ತಿದೆ ಎಂದು ನಾನು ಹೇಳುತ್ತಲೇ ಇದ್ದೆ. ಆದರೆ, ಎಲ್ಲರೂ ನನಗೆ ಬೈದು ಬಾಯಿಮುಚ್ಚಿಸುತ್ತಿದ್ದರು. ಈಗ, 2020-2021 ರ ಹಣಕಾಸು ವರ್ಷದ ಆರಂಭದಲ್ಲಿ (ಏಪ್ರಿಲ್‌-ಜೂನ್‌ 30)  ದೇಶದ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದೆ. ಈ ವರ್ಷದ ಅಂತ್ಯದ ವೇಳೆಗೆ ದೇಶದ ಅಭಿವೃದ್ಧಿ ದರ -15% ಗೆ ಇಳಿಯಬಹುದು. ಕೊನೆಗೆ ಒಟ್ಟಾರೆ ದೇಶದ ಬೆಳವಣಿಗೆ ಶೇಕಡಾ 15 ರಷ್ಟಾಗಬಹುದು ಎಂದು ಅವರು ಹೇಳಿದ್ದಾರೆ.

ಕಳೆದ ನಾಲ್ಕೈದು ವರ್ಷಗಳಿಂದ ವಿತ್ತೀಯ ಕೊರತೆಯುಂಟಾಗಿದೆ. ನೋಟು ಅನಾಣ್ಯೀಕರಣ ಮತ್ತು ಜಿಎಸ್‌ಟಿಯಿಂದ ಇದು ಸಂಭವಿಸಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎಂದು ನಾವು ಕರೆಯಬಹುದು. ಆದಾಯ ತೆರಿಗೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಸರ್ಕಾರ ಜನರ ಕೈಗೆ ಹೇಗೆ ಹಣ ತಲುಪಬೇಕು ಎಂಬುದರ ಬಗ್ಗೆ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ಆದರೆ, ದೇಶಾದ್ಯಂತ ಲಾಕ್‌ಡೌನ್‌ ಹೇರುವ ಮುನ್ನ ಜನರಿಗೆ ತಮ್ಮ ಜೀವನೋಪಾಯಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕಾಗಿತ್ತು. ಆದರೆ, ಅದು ಆಗಲಿಲ್ಲ ಹಾಗಾಗಿ ಜನರು ಸಂಕಷ್ಟಗಳನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.

ಮುಂಬರುವ ಅಮೆರಿಕ ಚುನಾವಣೆಯಲ್ಲಿ ಮತ್ತೆ ಡೊನಾಲ್ಡ್ ಟ್ರಂಪ್ ಅವರೆ ಅಧ್ಯಕ್ಷರಾಗಬಹುದು. ಬಿಡೆನ್‌ ಮುಸ್ಲಿಮರ ಬಳಿ ಹೋಗಿ, ನಾವು ಅಧಿಕಾರಕ್ಕೆ ಬಂದರೆ, ಭಾರತೀಯರಿಗೆ ಪಾಠ ಹೇಳುತ್ತೇವೆ ಎಂದು ಹೇಳಿ ತಪ್ಪು ಮಾಡಿದ್ದಾರೆ. ಹಾಗಾಗಿ ಟ್ರಂಪ್‌ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ;ಫ್ಯಾಕ್ಟ್‌ಚೆಕ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...