Homeಮುಖಪುಟಆಂಬುಲೆನ್ಸ್‌ನಲ್ಲಿ ಕೊರೊನಾ ರೋಗಿಯ ಮೇಲೆ ಅತ್ಯಾಚಾರ!: ಚಾಲಕನ ಬಂಧನ

ಆಂಬುಲೆನ್ಸ್‌ನಲ್ಲಿ ಕೊರೊನಾ ರೋಗಿಯ ಮೇಲೆ ಅತ್ಯಾಚಾರ!: ಚಾಲಕನ ಬಂಧನ

ವೈದ್ಯಕೀಯ ಪರೀಕ್ಷೆಯ ನಂತರ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಅತ್ಯಾಚಾರ, ಕೊಲೆ ಯತ್ನ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಶನಿವಾರ ತಡರಾತ್ರಿ ಕೇರಳದ ಪತನಂತಿಟ್ಟಾ ಜಿಲ್ಲೆಯಲ್ಲಿ ಕೊರೊನಾ ರೋಗಿಗೆ ಆಂಬ್ಯುಲೆನ್ಸ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದುಬಂದಿದ್ದು, ಅಪರಾಧ ನಡೆದ ಕೆಲವೇ ಗಂಟೆಗಳಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ ಒಂದೇ ಕುಟುಂಬದ ಇಬ್ಬರು ಮಹಿಳೆಯರಿಗೆ ಕೊರೊನಾ ದೃಢಪಟ್ಟಿತ್ತು. ಕೇರಳದಲ್ಲಿ ಕೊರೊನಾ ನಿಯಮಗಳ ಪ್ರಕಾರ, ರೋಗಿಗಳನ್ನು ಆಂಬುಲೆನ್ಸ್ ಮೂಲಕ ಮಾತ್ರ ಆಸ್ಪತ್ರೆಗೆ ಸಾಗಿಸಲು ಅವಕಾಶವಿದೆ. ಮಧ್ಯರಾತ್ರಿಯ ಹೊತ್ತಿಗೆ ಆಂಬ್ಯುಲೆನ್ಸ್ ಬಂದಿದ್ದು, ರೋಗಿಯನ್ನು ಸ್ಥಳೀಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೌಲಭ್ಯ ಕೇಂದ್ರದ ಅಧಿಕಾರಿಗಳು ಒಬ್ಬ ರೋಗಿಯನ್ನು ಮಾತ್ರ ದಾಖಲಿಸಿಕೊಂಡಿದ್ದು, ಮತ್ತೊಬ್ಬ ರೋಗಿಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಚಾಲಕರಿಗೆ ಸೂಚಿಸಿದರು. ಆಗ ಈ ದುರ್ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಚಾಲಕನು ಆಂಬುಲೆನ್ಸ್ ಅನ್ನು ನಿರ್ಜನ ಸ್ಥಳದಲ್ಲಿ ನಿಲ್ಲಿಸಿ ವಾಹನದೊಳಗಿನ ರೋಗಿಯ ಮೇಲೆ ಅತ್ಯಾಚಾರ ಎಸಗಿದ್ದು, ಇದನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ರೋಗಿಗೆ ಬೆದರಿಕೆ ಹಾಕಿದ್ದಾನೆ. ಆದರೆ ಆಸ್ಪತ್ರೆಗೆ ದಾಖಲಾದ ನಂತರ ಈ ಘಟನೆಯ ಬಗ್ಗೆ ಆಕೆ ವೈದ್ಯರಿಗೆ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ವೈದ್ಯಕೀಯ ಪರೀಕ್ಷೆಯ ನಂತರ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಅತ್ಯಾಚಾರ, ಕೊಲೆ ಯತ್ನ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಆರೋಗ್ಯ ಅಧಿಕಾರಿಗಳು ಆರೋಪಿಯನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದರು. “ಪ್ರತಿ ಆಂಬುಲೆನ್ಸ್‌ನಲ್ಲಿ ಕನಿಷ್ಠ ಇಬ್ಬರು ಉದ್ಯೋಗಿಗಳು ಇರಬೇಕು ಮತ್ತು ಕೇವಲ ಮಹಿಳಾ ರೋಗಿಗಳಾಗಿದ್ದರೆ ವಿಶೇಷ ಕಾಳಜಿ ವಹಿಸಬೇಕು” ಎಂದು ಕಟ್ಟುನಿಟ್ಟಿನ ಸೂಚನೆಗಳಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವಾಲಯದ ಅಧಿಕಾರಿಗಳು ಘಟನೆಯ ತನಿಖೆಗಾಗಿ ಆದೇಶಿಸುವುದಾಗಿ ಹೇಳಿದರು.

“ಇದು ಆಘಾತಕಾರಿ ಘಟನೆ. ಇಂತಹ ಘಟನೆಗಳು ನಡೆಯದಂತೆ ಸಚಿವಾಲಯ ಕ್ರಮ ಕೈಗೊಂಡಿದೆ. ಇಂದಿನಿಂದ ಹೆಚ್ಚಿನ ಆರೋಗ್ಯ ಕಾರ್ಯಕರ್ತರನ್ನು ಆಂಬುಲೆನ್ಸ್‌ಗಳಲ್ಲಿ ನಿಯೋಜಿಸಲಾಗುವುದು” ಎಂದು ಕೇರಳ ಶಾಸಕಾಂಗ ಸಭೆಯಲ್ಲಿ ಅರ್ನಮುಲಾ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾರ್ಕ್ಸ್‌ವಾದಿ) ನಾಯಕಿ ವೀಣಾ ಜಾರ್ಜ್ ಹೇಳಿದ್ದಾರೆ.

ಪತನಂತಿಟ್ಟಾ ಪೊಲೀಸ್ ಅಧೀಕ್ಷಕ (ಎಸ್‌ಪಿ) ಕೆ.ಜಿ ಸೈಮನ್, “ಇದು ಯೋಜಿತ ಅಪರಾಧವೆಂದು ತೋರುತ್ತದೆ. ನಾವು ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ನಾವು ವಿಚಾರಣೆಯನ್ನು ಪ್ರಾರಂಭಿಸುತ್ತೇವೆ” ಎಂದು ಹೇಳಿದರು.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಕೆ ಶೈಲಾಜಾ ಈ ಘಟನೆಯು ಅಮಾನವೀಯವಾಗಿದ್ದು, ಇಂತಹ  ಘಟನೆಗಳು ಸಂಭವಿಸಬಾರದು ಎಂದು ಹೇಳಿದ್ದಾರೆ.


ಇದನ್ನೂ ಓದಿ: IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...