ರಾಜ್ಯದಲ್ಲಿ ಕೊರೊನಾ ಉಲ್ಬಣ ಜಾಸ್ತಿಯಾಗಿದ್ದು, ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮೃತಪಟ್ಟವರ ಅಂತ್ಯಕ್ರಿಯೆ ನಡೆಸಲು ಚಿತಾಗಾರಗಳ ಬಳಿ ಸಾಲುಗಟ್ಟಿ ನಿಲ್ಲುವಂತಾಗಿದೆ. ಇಂತಹ ಸ್ಥಿತಿಯಲ್ಲಿ ಮೃತರ ಜಮೀನನಲ್ಲೇ ಶವಸಂಸ್ಕಾರಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.
ಕೊರೊನಾ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಚಿತಾಗಾರಗಳ ಬಳಿ ದಟ್ಟನೆ ಹೆಚ್ಚಾಗಿದೆ. ಚಿತಾಗಾರಗಳ ಬಳಿ ಶವಸಂಸ್ಕಾರಕ್ಕೂ ಪರದಾಡುವಂತಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕೊರೊನಾದಿಂದ ಮೃತಪಟ್ಟವರ ಶವಗಳನ್ನು ಮೃತಪಟ್ಟವರ ಸಂಬಂಧಿಕರ ಒಡೆತನದ ಖಾಸಗಿ ಭೂಮಿಯಲ್ಲಿ ಹೂಳಲು ಅಥವಾ ಸುಡಲು ಅನುಮತಿ ನೀಡಿದೆ.
ಶವಸಂಸ್ಕಾರ ಮಾಡಲು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಡಿಹೆಚ್‌ಒ ಯಿಂದ ಅನುಮತಿ ಪಡೆದು ಸಂಸ್ಕಾರ ನಡೆಸಬೇಕು. ಸಂಸ್ಕಾರದ ವೇಳೆ ಮಾರ್ಗಸೂಚಿ ಉಲ್ಲಂಘಿಸುವಂತಿಲ್ಲ. ಪ್ರೋಟೋಕಾಲ್ ಪ್ರಕಾರವೇ ಶವಸಂಸ್ಕಾರ ಮಾಡಬಹುದು. ಜಮೀನು, ತೋಟಗಳಲ್ಲಿ ಅಂತ್ಯಸಂಸ್ಕಾರ ನಡೆಸಬಹುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ: ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್ ಆಕ್ರೋಶ
ಇದರ ಜೊತೆಗೆ ಕೊರೊನಾ ಸೋಂಕಿನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಸಚಿವ ಅಶೋಕ್ ಹೇಳಿದ್ದಾರೆ.
ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತಿಸಲಾಗಿದೆ. ಸಾಂಪ್ರದಾಯಿಕವಾಗ ಶವಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನೂ ಐದು ಕಡೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿ ತೆರೆದ ಸ್ಥಳದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ


