Homeಕರೋನಾ ತಲ್ಲಣಪ್ರಯೋಗಾರ್ಥ ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವನಿಗೆ ಕೊರೊನಾ ಪಾಸಿಟಿವ್!

ಪ್ರಯೋಗಾರ್ಥ ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವನಿಗೆ ಕೊರೊನಾ ಪಾಸಿಟಿವ್!

ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಿರುವ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಮೊದಲ ಡೋಸೇಜ್ ಮಾತ್ರ ನೀಡಲಾಗಿದೆ

- Advertisement -
- Advertisement -

ಕೊರೊನಾ ಲಸಿಕೆ ಕೊವಾಕ್ಸಿನ್ ಪ್ರಯೋಗದಲ್ಲಿ ಭಾಗವಹಿಸಿದ್ದ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದಾರೆ. ಅವರು ನವೆಂಬರ್ 20 ರಂದು ಕೊರೊನಾ ಲಸಿಕೆ ಕೋವಾಕ್ಸಿನ್ ಪ್ರಯೋಗದಲ್ಲಿ ಭಾಗವಹಿಸಿದ್ದರು.

ಈ ಬಗ್ಗೆ ಟ್ವಿಟ್ಟರ್‌‌ನಲ್ಲಿ ಮಾಹಿತಿ ನೀಡಿರುವ ಅನಿಲ್ ವಿಜ್, ತನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದವರು ತಮ್ಮನ್ನು ತಾವು ಕೊರೊನಾ ವೈರಸ್ ಪರೀಕ್ಷೆಗೆ ಒಳಪಡುವಂತೆ ಸೂಚಿಸಿದ್ದಾರೆ. ಪ್ರಸ್ತುತ ಅವರು ಅಂಬಾಲಾ ಕ್ಯಾಂಟ್‌ನ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅನಿಲ್ ವಿಜ್ ಮಾಹಿತಿ ನೀಡಿದ್ದು, ನವೆಂಬರ್ 20 ರಂದು ಅದೇ ಆಸ್ಪತ್ರೆಯಲ್ಲಿ ಅವರು ಕೋವಾಕ್ಸಿನ್ ವಿಚಾರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕೊರೊನಾ ಲಸಿಕೆಯ ಬಳಕೆಗೆ ಅನುಮತಿ ನೀಡಿದ ಬ್ರಿಟನ್! 

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು “ಕೋವಾಕ್ಸಿನ್ ಎರಡು ಡೋಸ್ ಆಂಟಿ-ಕೊರೊನಾವೈರಸ್ ಲಸಿಕೆಯಿದ್ದು, ಅದರ ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಿರುವ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಮೊದಲ ಡೋಸೇಜ್ ಮಾತ್ರ ನೀಡಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

ಈ ಮೊದಲು, ಅನಿಲ್ ವಿಜ್ ಸಂಭಾವ್ಯ ಕೊರೊನಾ ವೈರಸ್ ಲಸಿಕೆ ಕೊವಾಕ್ಸಿನ್‌ಗಾಗಿ ಮೂರನೇ ಹಂತದ ಪ್ರಯೋಗಗಳಲ್ಲಿ ಮೊದಲ ಸ್ವಯಂಸೇವಕರಾಗಲು ಮುಂದಾಗಿದ್ದಾರೆ. ಇದು ಕೊರೊನಾ ವೈರಸ್ ಲಸಿಕೆಗಾಗಿ ಭಾರತದ 3 ನೇ ಹಂತ ಪರಿಣಾಮಕಾರಿತ್ವ ಅಧ್ಯಯನವಾಗಿದೆ ಮತ್ತು ಇದುವರೆಗೆ ನಡೆಸಿದ ಅತಿದೊಡ್ಡ 3 ನೇ  ಹಂತದ  ಪರಿಣಾಮಕಾರಿತ್ವ ಪ್ರಯೋಗವಾಗಿದೆ.

ಘಟನೆಯ ಬಗ್ಗೆ ಕೊವಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್ ಪ್ರತಿಕ್ರಿಯಿಸಿದ್ದು, “ಕೊವಾಕ್ಸಿನ್ ಕ್ಲಿನಿಕಲ್ ಪ್ರಯೋಗಗಳು 2-ಡೋಸ್ ವೇಳಾಪಟ್ಟಿಯನ್ನು ಆಧರಿಸಿವೆ, ಇದನ್ನು 28 ದಿನಗಳ ಅಂತರದಲ್ಲಿ ನೀಡಲಾಗುತ್ತದೆ. 2 ನೇ ಡೋಸ್ ನೀಡಿದ 14 ದಿನಗಳ ನಂತರ ಲಸಿಕೆ ಪರಿಣಾಮಕಾರಿತ್ವವನ್ನು ನಿರ್ಧರಿಸಲಾಗುತ್ತದೆ. ಎರಡೂ ಡೋಸೇಜ್‌ಗಳನ್ನು ಪಡೆದಾಗ ಅದು ಪರಿಣಾಮ ಬೀರುವಂತೆ ಕೋವಾಕ್ಸಿನ್ ಅನ್ನು ರೂಪಿಸಲಾಗಿದೆ” ಎಂದು ಭಾರತ್ ಬಯೋಟೆಕ್ ಹೇಳಿದೆ.

“ಹಂತ 3 ಪ್ರಯೋಗವು ಡಬಲ್-ಬ್ಲೈಂಡ್ ಅಧ್ಯಯನವಾಗಿದ್ದು, ಅಲ್ಲಿ ಸ್ವಯಂಸೇವಕರು ಲಸಿಕೆ ಪಡೆಯುವ 50% ಅವಕಾಶವನ್ನು ಹೊಂದಿರುತ್ತಾರೆ” ಎಂದು ಭಾರತ್ ಬಯೋಟೆಕ್ ಹೇಳಿದೆ.

ಇದನ್ನೂ ಓದಿ: ಲಸಿಕೆ ಬರುವವರೆಗೂ ದೆಹಲಿಯಲ್ಲಿ ಶಾಲೆ ಆರಂಭವಿಲ್ಲ- ಮನೀಶ್ ಸಿಸೋಡಿಯಾ

ಕೊರೊನಾ ವೈರಸ್ ವಿರುದ್ಧದ ಸಂಭಾವ್ಯ ಲಸಿಕೆ ಕೋವಾಕ್ಸಿನ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜೊತೆಗೆ ಭಾರತ್ ಬಯೋಟೆಕ್ ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿದೆ.

ಲಸಿಕೆ ತಯಾರಕರು ಈ ಹಂತ 1 ಮತ್ತು 2 ಪ್ರಯೋಗಗಳ ಮಧ್ಯಂತರ ವಿಶ್ಲೇಷಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಮತ್ತು 3 ನೇ ಹಂತದ ಪ್ರಯೋಗಗಳಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಈ ಹಿಂದೆ ಘೋಷಿಸಿದ್ದರು.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...