ಗೃಹಸಚಿವ ಅಮಿತ್ ಷಾಗೆ ಕೊರೊನಾ ಸೋಂಕು ತಗುಲಿದೆ. ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
“ಕೊರೊನಾ ಸೋಂಕಿನ ಆರಂಭಿಕ ರೋಗಲಕ್ಷಣಗಳು ಕಂಡಬಂದ ನಂತರ ಪರೀಕ್ಷೆ ಮಾಡಿಸಿದೆ. ಪಾಸಿಟಿವ್ ವರದಿ ಬಂದಿದೆ. ನಾನು ಆರೋಗ್ಯವಾಗಿದ್ದೇನೆ, ಆದರೆ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕ್ವಾರಂಟೈನ್‌ನಲ್ಲಿರಿ” ಎಂದು ಅಮಿತ್ ಷಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅಮಿತ್ ಷಾ ಕೆಲವು ದಿನಗಳ ಹಿಂದೆ ಕ್ಯಾಬಿನೆಟ್ ಸಭೆಯಲ್ಲಿ ಭಾಗವಹಿಸಿದ್ದರು. ಹಾಗಾಗಿ ಅಲ್ಲಿ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಗಾಗಲು ಮತ್ತು ಕ್ವಾರಂಟೈನ್‌ನಲ್ಲಿರಲು ವಿನಂತಿಸಲಾಗಿದೆ ಎಂದು ತಿಳಿದುಬಂದಿದೆ.
ಸಾಂಕ್ರಾಮಿಕ ರೋಗವು ಉತ್ತರ ಪ್ರದೇಶದ ಸಚಿವರ ಜೀವವನ್ನು ಬಲಿ ಪಡೆದಿದೆ. ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಮಲ್ ರಾಣಿ ವರುಣ್ (62) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಇದನ್ನೂ ಓದಿ: ಕೊರೊನಾದಿಂದ ಸಾವನಪ್ಪಿದ ಉತ್ತರಪ್ರದೇಶದ ಸಚಿವೆ ಕಮಲ್ ರಾಣಿ ವರುಣ್