Homeಕರೋನಾ ತಲ್ಲಣಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಉಲ್ಬಣವನ್ನು ತಡೆಗಟ್ಟಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

- Advertisement -
- Advertisement -

ಪವಿತ್ರ ರಂಜಾನ್ ತಿಂಗಳಲ್ಲಿ ಮಸೀದಿಯಲ್ಲಿ ಒಂದು ಬಾರಿಗೆ 50 ಜನರಂತರ ಒಂದು ದಿನದಲ್ಲಿ ಐದು ಬಾರಿ ನಮಾಜ್ (ಪ್ರಾರ್ಥನೆ) ಮಾಡಲು ಅವಕಾಶ ನೀಡುವಂತೆ ಕೋರಿದ್ದ ಜುಮಾ ಮಸೀದಿ ಟ್ರಸ್ಟ್‌ಗೆ ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನಿರಾಕರಿಸಿದೆ.

ಧಾರ್ಮಿಕ ಆಚರಣೆಗಳನ್ನು ಅನುಸರಿಸುವ ಹಕ್ಕು ಮುಖ್ಯವಾದರೂ, ಕೊರೊನಾ ಉಲ್ಬಣದ ಸಮಯದಲ್ಲಿ, ಸಾರ್ವಜನಿಕ ಆದೇಶ ಮತ್ತು ನಾಗರಿಕರ ಸುರಕ್ಷತೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಆರ್.ಡಿ.ಧನುಕಾ ಮತ್ತು ವಿ.ಜಿ.ಬಿಶ್ತ್ ಅವರ ವಿಭಾಗೀಯ ನ್ಯಾಯಪೀಠದ ರಜಾದಿನದ ನ್ಯಾಯಾಲಯವು ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲೇಖಿಸಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಅನುಮತಿ ನಿರಾಕರಿಸಿದೆ.

ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು  ದಕ್ಷಿಣ ಮುಂಬೈನಲ್ಲಿರುವ ಮಸೀದಿಯನ್ನು ತೆರೆಯಲು ಅವಕಾಶ ನೀಡುವಂತೆ ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.  ಏಪ್ರಿಲ್ 13 ರ ಮಹಾರಾಷ್ಟ್ರ ಸರ್ಕಾರದ ಸುತ್ತೋಲೆಯ ಪ್ರಕಾರ ಮಸೀದಿಯನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

ಒಂದು ಎಕರೆ ವಿಸ್ತಿರ್ಣ ಹೊಂದಿರುವ ಮಸೀದಿಯಲ್ಲಿ ಒಂದೇ ಸಮಯದಲ್ಲಿ 7,000 ಜನರು ಸಭೆ ಸೇರಬಹುದು ಎಂದು ಅರ್ಜಿದಾರರು ತಿಳಿಸಿದ್ದಾರೆ. ಆದರೂ, ಕೊರೊನಾ ನಿಬಂರ್ಧಗಳನ್ನು ಗಮನದಲ್ಲಿಟ್ಟುಕೊಂಡು, ಪವಿತ್ರ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಒಂದು ಸಮಯದಲ್ಲಿ ಕೇವಲ 50 ಜನರಿಗೆ ಮಾತ್ರ ಅವಕಾಶ ಕೊಟ್ಟು, ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳು ಮತ್ತು ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಅರ್ಜಿದಾರರು ತಿಳಿಸಿದ್ದರು.

ಕೊರೊನಾ ಉಲ್ಬಣವನ್ನು ತಡೆಗಟ್ಟುವ ಕ್ರಮಗಳನ್ನು ಕೈಗೊಂಡ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ, 15 ದಿನಗಳ ಅವಧಿಯಲ್ಲಿ, ಎಲ್ಲಾ ಧಾರ್ಮಿಕ ಪೂಜಾ ಸ್ಥಳಗಳು ಮುಚ್ಚಿರಬೇಕು ಮತ್ತು ಪೂಜಾ ಸ್ಥಳದ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಮಾತ್ರ ತಮ್ಮ ಕರ್ತವ್ಯವನ್ನು ಮುಂದುವರಿಸಲು ಅವಕಾಶವಿದೆ. ಪೂಜಾ ಸ್ಥಳಗಳ ಎಲ್ಲಾ ಸಿಬ್ಬಂದಿಗೆ ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಬೇಗನೆ ಲಸಿಕೆ ನೀಡುವಂತೆ ಸೂಚಿಸಲಾಗಿದೆ.

ಜನರು ತಮ್ಮ ಧರ್ಮವನ್ನು ಆಚರಿಸಲು ಸರ್ಕಾರ ನಿರಾಕರಿಸುತ್ತಿಲ್ಲ. ಆದರೆ ಕೊರೊನಾ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಅವರು ಪ್ರಾರ್ಥನೆಯನ್ನು ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಪರ  ಹಾಜರಾದ ಹೆಚ್ಚುವರಿ ಸರ್ಕಾರಿ ವಕೀಲರಾದ ಜ್ಯೋತಿ ಚವ್ಹಾಣ್ ಹೇಳಿದ್ದಾರೆ. ರಾಜ್ಯವು ಲಸಿಕೆಗಳು ಮತ್ತು ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಸಾಮಾಜಿಕ ಕೂಟಗಳಿಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದರು.


ಇದನ್ನೂ ಓದಿ: ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

0
ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು 'ಇಂಡಿಯಾ...