Homeಕರೋನಾ ತಲ್ಲಣಪಶ್ಚಿಮ ಬಂಗಾಳದಲ್ಲಿ ಜುಲೈ 1ರ ವರೆಗೆ ಕೊರೊನಾ ನಿರ್ಬಂಧ ವಿಸ್ತರಣೆ

ಪಶ್ಚಿಮ ಬಂಗಾಳದಲ್ಲಿ ಜುಲೈ 1ರ ವರೆಗೆ ಕೊರೊನಾ ನಿರ್ಬಂಧ ವಿಸ್ತರಣೆ

- Advertisement -
- Advertisement -

ಕೊರೊನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರವು ಕೊರೊನಾ ಪ್ರೇರಿತ ನಿರ್ಬಂಧಗಳನ್ನು ಜುಲೈ 1 ರವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕೊಲ್ಕತ್ತಾದಲ್ಲಿ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ನಿರ್ಬಂಧಗಳನ್ನು ಜುಲೈ 1 ರವರೆಗೆ ವಿಸ್ತರಿಸಲಾಗುತ್ತಿದೆ. ಜನರ ಸಂಚಾರವನ್ನು ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ನಿರ್ಬಂಧಿಸಲಾಗುವುದು. ಆದಾಗ್ಯೂ, ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳು ತಲಾ 25% ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತವೆ. ಖಾಸಗಿ ಮತ್ತು ಕಾರ್ಪೊರೇಟ್ ಕಚೇರಿಗಳು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ 25% ಕ್ಕಿಂತ ಹೆಚ್ಚಿನ ಸಿಬ್ಬಂದಿ ಸಾಮರ್ಥ್ಯದೊಂದಿಗೆ ತೆರೆದಿರುತ್ತವೆ. ಖಾಸಗಿ ಕಚೇರಿಗಳು ಇ-ಪಾಸ್ ಮೂಲಕ ನೌಕರರಿಗೆ ಸಾರಿಗೆ ಸೇವೆಗಳನ್ನು ವ್ಯವಸ್ಥೆಗೊಳಿಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

“ಶಾಪಿಂಗ್ ಮಾಲ್ ಮತ್ತು ಕಾಂಪ್ಲೆಕ್ಸ್‌ಗಳಲ್ಲಿನ ಅಂಗಡಿಗಳು 50% ದಷ್ಟು ಕೆಲಸದವರೊಂದಿಗೆ ಬೆಳಿಗ್ಗೆ 11 ರಿಂದ ಸಂಜೆ 6 ರವರೆಗೆ ತೆರೆಯಲು ಅವಕಾಶವಿದೆ. ಕ್ರೀಡಾ ಚಟುವಟಿಕೆಗಳು ಪ್ರೇಕ್ಷಕರಿಲ್ಲದೆ ಪುನರಾರಂಭಿಸಬಹುದು. ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಜಲಮಾರ್ಗಗಳು ಮುಚ್ಚಿಯೆ ಇರುತ್ತದೆ. ತುರ್ತು ಪರಿಸ್ಥಿತಿಯನ್ನು ಹೊರತುಪಡಿಸಿ ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಲಾಗಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

50% ದಷ್ಟು ಆಸನ ಸಾಮರ್ಥ್ಯದೊಂದಿಗೆ ಬಾರ್‌ಗಳನ್ನು ಹೊಂದಿರುವ ರೆಸ್ಟೋರೆಂಟ್‌ಗಳು ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ತೆರೆಯಬಹುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮೇ 16 ರಿಂದ ಕೊರೊನಾ ನಿರ್ಬಂಧಗಳನ್ನು ವಿಧಿಸಲಾಗಿತ್ತು. ರಾಜ್ಯದಲ್ಲಿ ಕಳೆದ ಒಂದೇ ದಿನದಲ್ಲಿ 19,117 ಹೊಸ ಪ್ರಕರಣಗಳು ಮತ್ತು 147 ಸಾವುನೋವುಗಳು ವರದಿಯಾಗಿದೆ. ಆದಾಗ್ಯೂ, ಕೊರೊನಾ ನಿರ್ಬಂಧಗಳನ್ನು ಹೇರಿದ ನಂತರ ರಾಜ್ಯದಲ್ಲಿ ದೈನಂದಿನ ಪ್ರಕರಣವು ಇಳಿಕೆಯಲ್ಲಿದೆ.

ಪಶ್ಚಿಮ ಬಂಗಾಳದಲ್ಲಿ ಭಾನುವಾರ 3,984 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿನ ಪ್ರಕರಣ 14,61,257 ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 16,896 ಕ್ಕೆ ಏರಿದೆ.

ಇದನ್ನೂ ಓದಿ: ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಹತ್ಯೆ

0
ಗದಗದ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಹತ್ಯೆಗೈದಿರುವ ಘಟನೆ ನಗರದಲ್ಲಿ ಗುರುವಾರ (ಏ.18) ಮಧ್ಯರಾತ್ರಿ ನಡೆದಿದೆ. ನಗರದ ಚನ್ನಮ್ಮ ವೃತ್ತದ ಸಮೀಪವಿರುವ ದಾಸರ ಓಣಿಯಲ್ಲಿ ಈ ಘಟನೆ...