Homeಕರೋನಾ ತಲ್ಲಣದೇಶದ ಹಲವೆಡೆ ಶಾಲೆ ಪುನರಾರಂಭಕ್ಕೆ ಮಿಶ್ರ ಪ್ರತಿಕ್ರಿಯೆ

ದೇಶದ ಹಲವೆಡೆ ಶಾಲೆ ಪುನರಾರಂಭಕ್ಕೆ ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಕರ್ನಾಟಕ, ಕೇರಳ ಮತ್ತು ಅಸ್ಸಾ ರಾಜ್ಯಗಳಲ್ಲಿ 10 ಮತ್ತು 12 ತರಗತಿಯ ವಿದ್ಯಾರ್ಥಿಗಳಿಗಾಗಿ ಶಾಲೆ ಆರಂಭಿಸಲಾಗಿದೆ. ರೂಪಾಂತರಿ ಕೊರೊನಾ ಆತಂಕ ನಡುವೆಯೇ ಶಾಲೆ ಪುನರಾರಂಭಿಸಿರುವ ರಾಜ್ಯ ಸರ್ಕಾರಗಳ ಕ್ರಮಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ಈಗಾಗಲೇ, ಉತ್ತರ ಪ್ರದೇಶ, ಪಂಜಾಬ್, ಮಧ್ಯಪ್ರದೇಶ, ಆಂಧ್ರಪ್ರದೇಶ, ಸಿಕ್ಕಿಂ ರಾಜ್ಯಗಳಲ್ಲಿ ಶಾಲೆ ಪುನರಾರಂಭಿಸಲಾಗಿದೆ. ಇಂದಿನಿಂದ ಕರ್ನಾಟಕ, ಕೇರಳ ಮತ್ತು ಅಸ್ಸಾ ರಾಜ್ಯಗಳಲ್ಲೂ ಶಾಲೆ ಆರಂಭವಾಗಿದೆ.

ಕರ್ನಾಟಕದಲ್ಲಿ ಶಾಲೆ, ಕಾಲೇಜಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಶಾಲೆಗೆ ತಳಿರು ತೋರಣಗಳಿಂದ ಅಲಂಕರಿಸಿದ್ದ ದೃಶ್ಯಗಳು ಕಾಣಿಸಿದವು. ಕೊರೊನಾ ಆತಂಕ ಭಯದಲ್ಲೇ ಶಾಲೆಗೆ ಕಾಲಿಟ್ಟ ವಿದ್ಯಾರ್ಥಿಗಳು, ಆನ್‌ಲೈನ್ ಪಾಠಕ್ಕಿಂತ ಶಾಲೆಗಳಿಗೆ ಬರುವುದು ತುಂಬ ಉತ್ತಮ. ನಾವು ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನವರಿ 1 ರಿಂದ ಶಾಲೆ ಆರಂಭ: ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ

ಇತ್ತ ಕೇರಳದಲ್ಲೂ ಶಾಲೆ ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲಿನ ಶಾಲಾ-ಕಾಲೇಜುಗಳಿಗೆ ಸ್ಥಳೀಯ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಸ್ಸಾಂನಲ್ಲಿ ಕೆಲವು ಶಾಲೆಗಳಿಗೆ ವಿದ್ಯಾರ್ಥಿಗಳು ಹಾಜರಾಗಿದ್ದರೇ ಕೆಲವು ಕಡೆಗಳಲ್ಲಿ ಶಾಲೆಗೆ ಒಬ್ಬ ವಿದ್ಯಾರ್ಥಿ ಕೂಡ ಹಾಜರಾಗಿಲ್ಲದ ಘಟನೆಗಳು ನಡೆದಿವೆ.

“ಒಬ್ಬ ವಿದ್ಯಾರ್ಥಿಯೂ ಇಂದು ಶಾಲೆಗೆ ಬಂದಿಲ್ಲ. ನಾವು ಸಂಜೆಯವರೆಗೆ ಇರಬೇಕಾಗಿರುವುದರಿಂದ, ನಮ್ಮ ನಡುವೆ ಸ್ವಲ್ಪ ಆಟವಾಡುತ್ತಿದ್ದೇವೆ” ಎಂದು ಅಸ್ಸಾಂನ ಗೋಪಾಲ್ ಬೊರೊ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಹೇಳಿದ್ದಾರೆ.


ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...