Homeಕರೋನಾ ತಲ್ಲಣಕೊರೊನಾ: ಜನರಿಗೆ ನೆರವಾಗಿ ಎಂದು ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ‌

ಕೊರೊನಾ: ಜನರಿಗೆ ನೆರವಾಗಿ ಎಂದು ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ‌

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರಗೊಳ್ಳುತ್ತಿದ್ದು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಮಯದಲ್ಲಿ ಜನರಿಗೆ ನೆರವಾಗಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಅವರು, “ಕೋವಿಡ್ 2ನೇ ಅಲೆ ರಾಜ್ಯ ಮತ್ತು ರಾಷ್ಟ್ರವನ್ನು ಬಾಧಿಸುತ್ತಿದೆ. ಈ ಸಂದರ್ಭದಲ್ಲಿ ಭ್ರಷ್ಟ, ಬೇಜವಾಬ್ದಾರಿ, ಅದಕ್ಷ ಮತ್ತು ಜನವಿರೋಧಿ ಸ್ವಭಾವದ ಬಿ.ಜೆ.ಪಿ. ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿವೆ. ತಜ್ಞರುಗಳು ಮತ್ತು ಪರಿಣಿತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆಯನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದರು. ಸದರಿ ವರದಿಗಳನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ಬದಲಾಗಿ ಕೇಂದ್ರದ ಆರೋಗ್ಯ ಸಚಿವರುಗಳಾದಿಯಾಗಿ ಅನೇಕರು ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿಯೇ ‘ನಾವು ಕೋವಿಡ್ ವಿರುದ್ದ ಜಯ ಸಾಧಿಸುವ ಹಂತಕ್ಕೆ ಬಂದಿದ್ದೇವೆ. ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಜಯಘೋಷ ಮಾಡಲಾರಂಭಿಸಿದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕ್ಷಮಿಸಿ, ಕೊರೊನಾ ಲಸಿಕೆ ಎಂದು ತಿಳಿದಿರಲಿಲ್ಲ- ಪತ್ರ ಬರೆದು ಕದ್ದಿದ್ದ ಲಸಿಕೆ ತಂದಿಟ್ಟ ಕಳ್ಳ

“ಆ ಸಂಧರ್ಭದಲ್ಲೂ ಸಹ ವೈದ್ಯಕೀಯ ತಜ್ಞರುಗಳು ನಾವಿನ್ನೂ ಕೊರೊನಾದ ವಿರುದ್ದ ಗೆಲುವು ಸಾಧಿಸಿಲ್ಲ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಾಗಿರಲಿದೆ ಎಂದು ಎಚ್ಚರಿಕೆ ನೀಡುತ್ತಲೆ ಬಂದರು. ಈ ಎಚ್ಚರಿಕೆಗಳನ್ನು ಸರ್ಕಾರಗಳು ಕಸದ ಬುಟ್ಟಿಗೆ ಎಸೆದವು. ಸಮರ್ಪಕವಾಗಿ ಟೆಸ್ಟ್‌‌ಗಳನ್ನೂ ಸಹ ನಡೆಸುತ್ತಿಲ್ಲ, ನಡೆಸಿದ ಟೆಸ್ಟ್‌‌ಗಳ ವರದಿ ವಾರವಾದರೂ ಜನರ ಕೈಗೆ ವೈದ್ಯರುಗಳ ಕೈಗೆ ಸಿಗುತ್ತಿಲ್ಲ. ಇದೆಲ್ಲದರಿಂದಾಗಿ ಕೋವಿಡ್‍ನಿಂದ ಮರಣ ಹೊಂದುವವರಷ್ಟೆ ಆತಂಕದಿಂದ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ತಜ್ಞರ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಲ್ಯಾಬುಗಳು, ಆಸ್ಪತ್ರೆಗಳು, ಹಾಸಿಗೆಗಳು, ಆಕ್ಸಿಜನ್ ವ್ಯವಸ್ಥೆ, ಐ.ಸಿ.ಯು, ವೆಂಟಿಲೇಟರ್‍ಗಳು, ಕೋವಿಡ್ ನಿಯಂತ್ರಣಕ್ಕೆ ಬೇಕಾದ ಔಷಧಿಗಳು ಇತ್ಯಾದಿಯಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದರೆ ಇವತ್ತಿನ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು. ಈ ಸಿದ್ದತೆಗಳನ್ನೇನೂ ಮಾಡಿಕೊಳ್ಳದ ಕಾರಣದಿಂದಾಗಿಯೇ ಜನರು ಅನಾಥರಂತೆ ರಸ್ತೆಗಳಲ್ಲಿ, ಆಸ್ಪತ್ರೆಯ ವರಾಂಡಗಳಲ್ಲಿ ಮರಣ ಹೊಂದುತ್ತಿದ್ದಾರೆ. ಹಾಗಾಗಿ ಜನ ಕೊರೊನಾದಿಂದ ಮರಣ ಹೊಂದಿದರು ಎಂಬುದಕ್ಕಿಂತ ಬಿ.ಜೆ.ಪಿ. ಸರ್ಕಾರಗಳು ತಮ್ಮ ಅದಕ್ಷತೆ ಮತ್ತು ಉಡಾಫೆ ಸ್ವಭಾವದಿಂದಾಗಿ ಅಮಾಯಕ ಜನಗಳ ಕೊಲೆಗಳಿಗೆ ಕಾರಣರಾಗುತ್ತಿವೆ. ಮರಣ ಹೊಂದುತ್ತಿರುವ ಬಹುಪಾಲು ಜನರು ರಾಜಕೀಯ ನಿರ್ಲಕ್ಷ್ಯದಿಂದ ಆದ ಕೊಲೆಗಳು ಎನ್ನದೆ ಅನ್ಯ ದಾರಿ ಇಲ್ಲ” ಎಂದು ಅವರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

“ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರಗಳಿಗೆ ಮರಣ ಹೊಂದಿದವರ ಶವಸಂಸ್ಕಾರವನ್ನೂ ಸಹ ಘನತೆಯಿಂದ ನಡೆಸಲು ಸಾಧ್ಯವಾಗದಷ್ಟರ ಮಟ್ಟಿಗೆ ಪರಿಸ್ಥಿತಿ ಅರಾಜಕವಾಗಿದೆ. ಈ ಬಿ.ಜೆ.ಪಿ. ಸರ್ಕಾರಗಳಿಂದ ಜನ ಏನನ್ನು ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಹತಶಾರಾಗಿದ್ದಾರೆ. ಕಳೆದ ವರ್ಷ ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ ಮಾಡಿದ ಅರಾಜಕ ಮತ್ತು ತುಘಲಕ್‍ಶಾಹಿ ಆಡಳಿತವನ್ನೇ ಬಿ.ಜೆ.ಪಿ. ಸರ್ಕಾರ ಈಗಲೂ ಮಾಡುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಎರಡೇಟು ತಿನ್ನುತ್ತಿ’; ಆಕ್ಸಿಜನ್ ಸಿಲಿಂಡರ್‌ ಕೇಳಿದ ವ್ಯಕ್ತಿಗೆ ಬೆದರಿಸಿದ ಕೇಂದ್ರ ಸಚಿವ!

“ಸರ್ಕಾರ ಏಕಾಏಕಿ ಕರ್ಫ್ಯೂ ವಿಧಿಸುವುದು, ಬೀದಿಗಳಲ್ಲಿದ್ದ ಜನರ ಮೇಲೆ ಲಾಠಿ ಚಾರ್ಜು ಮಾಡಿ ಓಡಿಸುವುದು. ಅಂಗಡಿ ಮುಂಗಟ್ಟುಗಳನ್ನು ಯಾವುದೇ ಮುನ್ಸೂಚನೆ ನೀಡದೆ ಬಾಗಿಲು ಮುಚ್ಚಿಸುವುದು. ಬಾಯಿಗೆ ಬಂದಂತೆ ಸಚಿವರುಗಳು, ಅಧಿಕಾರಿಗಳು ಮಾತನಾಡಿ ಜನರಲ್ಲಿ ಗೊಂದಲ ಹುಟ್ಟಿಸುವುದನ್ನೇ ಈಗಲೂ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

‘‘ಸಂಕಷ್ಟದಲ್ಲಿರುವ ಬಡಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಲು, ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಬೇಕಾಗಿತ್ತು. ಅದರ ಬದಲಾಗಿ ಜನರಿಗೆ ನೀಡುವ ಪಡಿತರ ಅಕ್ಕಿಯನ್ನು 2 ಕೆ.ಜಿ ಗೆ ಇಳಿಸಲಾಗಿದೆ. ಇಂದಿರಾ ಕ್ಯಾಂಟಿನ್‍ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ರೈತರು ಬಳಸುವ ರಸಗೊಬ್ಬರ ದರಗಳನ್ನು ಕ್ವಿಂಟಾಲ್‍ಗೆ 1400 ಗಳಷ್ಟು ಹೆಚ್ಚು ಮಾಡಲಾಗಿದೆ. ಜನರನ್ನು ಶತ್ರುಗಳು ಎಂದು ಭಾವಿಸುವ ಸರ್ಕಾರಗಳು ಮಾತ್ರ ಈ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯ. ಜನರು ಸಂಕಷ್ಟದಲ್ಲಿರುವಾಗ, ದುಡಿಮೆಯಿಲ್ಲದೆ ಕೈಯಲ್ಲಿ ಹಣವಿಲ್ಲದಿರುವಾಗ ಸರ್ಕಾರ ಅವರ ಕಡೆಯ ಹನಿ ರಕ್ತವನ್ನೂ ಹೀರಲು ಹೊರಟಿದೆ. ಇಂತಹ ಜನದ್ರೋಹಿ ಆಡಳಿತವನ್ನು ನಾನು ಚರಿತ್ರೆಯಲ್ಲಿ ಎಲ್ಲೂ ಓದಿಲ್ಲ ಮತ್ತು ಕೇಳಿಲ್ಲ” ಎಂದು ಪತ್ರದಲ್ಲಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

“ಇಂತಹ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಕಳೆದ ಬಾರಿ ಜನರ ಜೊತೆ ನಿಂತು ಅನ್ನ, ಆಹಾರದ ವ್ಯವಸ್ಥೆಯನ್ನು ಮಾಡಲು ಸಾಕಷ್ಟು ಶ್ರಮಿಸಿದ್ದೀರಿ. ಹಾಗೆಯೇ ರೈತರು ಬೆಳೆದ ತರಕಾರಿ, ಹಣ್ಣು ಇತರೆ ಉತ್ಪನ್ನಗಳನ್ನು ಖರೀದಿಸಿ, ಜನರಿಗೆ ತಲುಪಿಸುವ ಸ್ತುತ್ಯಾರ್ಹವಾದ ಕೆಲಸಗಳನ್ನು ಮಾಡಿದ್ದೀರಿ. ಇವೆಲ್ಲವನ್ನು ಜನತೆ ಕೃತಜ್ಞತೆಯಿಂದ ನೆನೆಸುತ್ತಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಕೋವಿಡ್‍ನ 2ನೇ ಅಲೆ ರಾಕ್ಷಸ ರೂಪವನ್ನು ತಳೆಯುತ್ತಿರುವ ಈ ಸಂದರ್ಭದಲ್ಲೂ ಸಹ ತಾವುಗಳು ಜನರ ಜೊತೆ ನಿಂತು, ಆಸ್ಪತ್ರೆ, ಆಕ್ಸಿಜನ್, ಔಷಧಿಗಳು, ಆಂಬ್ಯುಲೆನ್ಸ್‍ಗಳು, ಇನ್ನಿತರ ಚಿಕಿತ್ಸೆಗಳಿಗೆ ನೆರವಾಗಬೇಕೆಂದು ಹಾಗೂ ಹಸಿವಿನಿಂದ ಬಳಲುತ್ತಿರುವವರಿಗೆ ಅನ್ನ ಆಹಾರದ ವ್ಯವಸ್ಥೆಯನ್ನು ಸಹ ಕಳೆದ ವರ್ಷದಂತೆಯೇ ಈ ವರ್ಷವೂ ಮಾಡುವ ಮೂಲಕ ಜನರ ಸಕಲ ಸಂಕಷ್ಟಗಳಿಗೆ ಸ್ಪಂದಿಸುವ ಮಾನವೀಯ ಕಾರ್ಯಗಳನ್ನು ಮಾಡಬೇಕು” ಎಂದು ಶಾಸಕರೊಂದಿಗೆ ಸಿದ್ದರಾಮಯ್ಯ ಅವರು ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...