Homeಕರೋನಾ ತಲ್ಲಣಕೊರೊನಾ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆಸ್ಪತ್ರೆಗೆ ದಾಖಲು

ಕೊರೊನಾ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆಸ್ಪತ್ರೆಗೆ ದಾಖಲು

- Advertisement -
- Advertisement -

ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ವೈರಸ್ ತಗುಲಿದ್ದು, ಅವರನ್ನು ಚಿಕಿತ್ಸೆಗಾಗಿ ಚೆನ್ನೈಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಆರೋಗ್ಯ ಸಚಿವ ಶ್ರೀರಾಮುಲು “ಗಾನ ಗಂಧರ್ವ ಶ್ರೀ #SPBalasubrahmanyam ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಮದ್ರಾಸಿನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ತಮ್ಮ ಆರೋಗ್ಯದ ಕುರಿತು ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಸ್ವತಃ ಅವರೇ ತಿಳಿಸಿದ್ದಾರೆ. ನಮ್ಮೆಲ್ಲರ ಪ್ರೀತಿಯ ಗಾಯಕ, ಶ್ರೀಯುತ ಎಸ್ ಪಿಬಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ: ಮಸ್ಕಿಯಿಂದ ರಾಜ್ಯದೆಲ್ಲೆಡೆ ಹೋರಾಟದ ಹಾಡುಗಳನ್ನು ಪಸರಿಸಿದ ಜನಕವಿ ದಾನಪ್ಪ ನಿಲೋಗಲ್


ಬುಧವಾರ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ್ದ ಬಾಲಸುಬ್ರಮಣ್ಯಂ ತನ್ನಲ್ಲಿರುವ ಏಕೈಕ ಲಕ್ಷಣವೆಂದರೆ ಶೀತ ಎಂದು ಹೇಳಿಕೊಂಡಿದ್ದರು. ಆದರೆ ಕಳೆದ ಮೂರು ದಿನಗಳಲ್ಲಿ ಅವರಿಗೆ ಎದೆಯ ದಟ್ಟಣೆ ಮತ್ತು ಜ್ವರ ಇತ್ತು ಎಂದು ತಿಳಿದುಬಂದಿದೆ. ಇದೇ ವೇಳೆ ಅವರು ಕಳೆದ ಎರಡು ಮೂರು ದಿನಗಳಿಂದ ನಾನು ಸ್ವಲ್ಪ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದೇನೆ ಯಾರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದರು.


ಓದಿ: ಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...