Homeಮುಖಪುಟಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

- Advertisement -
- Advertisement -

ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ಹರಡಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೆ ಕಾರಣವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್ತಿನಲ್ಲಿ ಆರೋಪಿಸಿದ್ದಾರೆ. ವಿರೋಧ ಪಕ್ಷಗಳು ಸಕರಾತ್ಮಕವಾಗಿ ಏನನ್ನು ಮಾಡಲಿಲ್ಲ, ಕೋವಿಡ್ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಿ ಎಂದು ಜನರಿಗೆ ಮನವಿ ಮಾಡಲಿಲ್ಲ, ಆದರೆ ದೇಶಾದ್ಯಂತ ಕೋವಿಡ್ ಹರಡಲು ಅವರ ಕೊಡುಗೆ ಸಾಕಷ್ಟಿದೆ ಎಂದು ದೂರಿದ್ದಾರೆ.

“ಮೊದಲ ಕೋವಿಡ್ ಅಲೆಯಲ್ಲಿ ನಾವು ಲಾಕ್‌ಡೌನ್ ಹೇರಿದ್ದೆವು. ವಿಶ್ವ ಆರೋಗ್ಯ ಸಂಸ್ಥೆಯು ನೀವು ಇರುವಲ್ಲಿಯೇ ಇರಿ ಎಂದು ಎಚ್ಚರಿಕೆ ನೀಡಿತ್ತು. ಆದರೆ ಕಾಂಗ್ರೆಸ್ ಪಕ್ಷವು ತನ್ನ ಮಿತಿಯನ್ನು ದಾಟಿತು. ಅದು ಮುಂಬೈ ರೈಲ್ವೆ ಸ್ಟೇಷನ್‌ನಲ್ಲಿ ವಲಸೆ ಕಾರ್ಮಿಕರಿಗೆ ಟಿಕೆಟ್ ಕೊಡಿಸಿ ದೇಶಾದ್ಯಂತ ವೈರಸ್ ಹರಡಿ ಎಂದು ಹುರಿದುಂಬಿಸಿತು” ಎಂದು ನರೇಂದ್ರ ಮೋದಿ ಆರೋಪಿಸಿದ್ದಾರೆ.

ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳೇ ಕೋವಿಡ್ ಹರಡಲು ಕಾರಣವಾಗಿವೆ. ಅವು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿದವು. ದೆಹಲಿ ಸರ್ಕಾರವು ವಾಹನಗಳಲ್ಲಿ ಮೈಕ್ ಹಾಕಿಕೊಂಡು ನಿಮಗಾಗಿ ಬಸ್ ವ್ಯವಸ್ಥೆ ಮಾಡಿದ್ದೇವೆ ಎಂದು ಸಾರಿತು. ಹಾಗಾಗಿ ಉತ್ತರ ಪ್ರದೇಶ ಸೇರಿದಂತೆ ಯಾವ ರಾಜ್ಯಗಳಲ್ಲಿ ಕೊರೊನಾ ಇರಲಿಲ್ಲವೋ ಅಲ್ಲಿಯೂ ಕೊರೊನಾ ಹರಡಲು ಕಾರಣವಾಯಿತು ಎಂದು ದೂರಿದ್ದಾರೆ.

ಕೆಲವರು ಕೊರೊನಾ ಮೋದಿಯವರ ವರ್ಚಸ್ಸನ್ನು ಹಾಳು ಮಾಡುತ್ತದೆ ಎಂದು ನಂಬಿದ್ದರು. ಹಾಗಾಗಿಯೇ ಈ ಕೆಲಸ ಮಾಡಿದರು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಈ ರೀತಿಯ ಸಂಕಷ್ಟ ಬಂದಾಗ ಎಷ್ಟು ಜನ ಜನಪ್ರತಿನಿಧಿಗಳು ಜನರಿಗೆ ಮಾಸ್ಕ್ ಹಾಕುವಂತೆ, ಕೈತೊಳೆಯುವಂತೆ, ಸಾಮಾಜಿಕ ಅಂತರ ಕಾಪಾಡುವಂತೆ ಹೇಳಿದರು? ನೀವು ಹೀಗೆ ಹೇಳಿದರೆ ಇದರಿಂದ ಬಿಜೆಪಿ ಅಥವಾ ಮೋದಿ ಹೇಗೆ ಲಾಭ ಪಡೆದುಕೊಳ್ಳುತ್ತಾರೆ? ಕಾಂಗ್ರೆಸ್ ವರ್ತನೆಯಿಂದ ನಾನು ಮಾತ್ರವಲ್ಲ, ಇಡೀ ದೇಶವೇ ತೊಂದರೆಗೆ ಸಿಲುಕಿತು. ಹಾಗಾಗಿಯೇ ಹಲವು ರಾಜ್ಯಗಳು ದಶಕಗಳಿಂದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿವೆ ಎಂದಿದ್ದಾರೆ.


ಇದನ್ನೂ ಓದಿ: ಯುಪಿಯಲ್ಲಿನ ತನ್ನ ಮೊದಲ ಚುನಾವಣಾ ರ್ಯಾಲಿ ರದ್ದುಗೊಳಿಸಿದ ಪಿಎಂ ಮೋದಿ: ಬಿಜೆಪಿಗೆ ಜನರೆಂದರೆ ಭಯವೆಂದು ವ್ಯಂಗ್ಯವಾಡಿದ ಜಯಂತ್ ಚೌಧರಿ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ತನ್ನ ತಪ್ಪನ್ನು ಮರೆಮಾಚಲು ಎಂತಹ ಮಾರ್ಗ ಕಂಡು ಕೊಂಡಿಯ ಮಾರಾಯ, ಥು ನಿನ್ನ ಜನ್ಮಕ್ಕೆ.

  2. ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ

  3. ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ

  4. ಈ ಹಿಂದೆ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣ ಆಗಿದ್ದಕ್ಕೆ ಕಾಂಗ್ರೆಸ್ನವರು ಕಾರಣ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...