Homeಕರೋನಾ ತಲ್ಲಣಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಹಾಗೂ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ

- Advertisement -
- Advertisement -

ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದೆಂದು ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳಿಗೆ ಆದೇಶಿದ್ದಾರೆ.

ದೀಪಾವಳಿಯ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ಅವರು, ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್‌ 1 ರಿಂದ 17 ರವರೆಗೆ ಮಾತ್ರ ತೆರೆದಿರಬೇಕು. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಬೇಕೆಂದು ಸೂಚಿಸಿದ್ದಾರೆ.

ಇದನ್ನೂ ಓದಿ: ರಿಯಲ್‌ ಪಿಸ್ತೂಲ್ ನಿಂದ ಗುಂಡು ಹಾರಿಸುವ ಮೂಲಕ ದೀಪಾವಳಿ ಆಚರಿಸಿ ಸಿಕ್ಕಿಬಿದ್ದ ಕುಟುಂಬ!

ಪಟಾಕಿಯ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು. ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು, ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಜಾಗ್ರತೆ ವಹಿಸಬೇಕೆಂದು ತಿಳಿಸಲಾಗಿದೆ.

ಕೊರೊನಾ ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕೂಡಾ ತಪ್ಪದೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದಿದ್ದು, ”ಸಾರ್ವಜನಿಕರು ಅರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು” ಎಂದು ತಿಳಿಸಲಾಗಿದೆ.

“ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಹಾಗೂ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುದು” ಎಂದು ಆದೇಶದಲ್ಲಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದೇಶವ್ಯಾಪಿ ಮುಷ್ಕರಕ್ಕೆ BSNL ನೌಕರರ ಸಿದ್ಧತೆ : ದೀಪಾವಳಿಗೂ ಮೊದಲೇ ವೇತನ ನೀಡುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...