Homeಕರೋನಾ ತಲ್ಲಣಕೊರೊನಾ ಉಲ್ಬಣ: ಮೇ 1ರ ವರೆಗೆ ಮಹಾರಾಷ್ಟ್ರದಲ್ಲಿ ಕರ್ಫ್ಯೂ

ಕೊರೊನಾ ಉಲ್ಬಣ: ಮೇ 1ರ ವರೆಗೆ ಮಹಾರಾಷ್ಟ್ರದಲ್ಲಿ ಕರ್ಫ್ಯೂ

- Advertisement -
- Advertisement -

ಮಹಾರಾಷ್ಟ್ರದಾದ್ಯಂತ ಕೊರೊನಾ ಉಲ್ಬಣವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಏಪ್ರಿಲ್ 14 ರ ರಾತ್ರಿ 08 ರಿಂದ ಮೇ 1 ರವರೆಗೆ ರಾಜ್ಯದ ಜನರ ಸಂಚಾರಕ್ಕೆ ಕರ್ಫ್ಯೂ ತರಹದ ನಿರ್ಬಂಧಗಳನ್ನು ಮಂಗಳವಾರ ಘೋಷಿಸಿದ್ದಾರೆ. ಆದರೆ ಅದು ಲಾಕ್‌ಡೌನ್ ಅಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯವನ್ನು ಉದ್ದೇಶಿಸಿ ಮಾಡಿದ 38 ನಿಮಿಷಗಳ ಭಾಷಣದಲ್ಲಿ, ಏಪ್ರಿಲ್ 6 ರಿಂದ ಜಾರಿಗೆ ತಂದಿದ್ದ ನಿಯಮಗಳಿಗಿಂತ ಕಠಿಣವಾದ ನಿರ್ಬಂಧಗಳನ್ನು ಠಾಕ್ರೆ ಘೋಷಿಸಿದರು. ಆದರೆ ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಿದ್ದಾರೆ. ಇದರಿಂದಾಗಿ ಪರಿಣಾಮ ಬೀರುವ ಕ್ಷೇತ್ರಗಳು ಮತ್ತು ಕೆಲವು ವಿಭಾಗಗಳಿಗೆ 5,476 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ.

ಆಡಳಿತ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ಸೆಕ್ಷನ್ 144 ರ ಅಡಿಯಲ್ಲಿ ರಾಜ್ಯದಲ್ಲಿ ಬುಧವಾರ ರಾತ್ರಿಯಿಂದ ನಿಷೇಧಾಜ್ಞೆ ವಿಧಿಸಲಾಗಿದ್ದು, ಮೇ 1 ರವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಿರ್ಬಂಧದಂತೆ, ಯಾವುದೇ ವ್ಯಕ್ತಿಯು ಸಕಾರಣವಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಓಡಾಡಬಾರದು. ಕೆಲಸದ ದಿನಗಳಲ್ಲಿ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳು, ಚಟುವಟಿಕೆಗಳು ಮತ್ತು ಸೇವೆಗಳು ಮುಚ್ಚಲ್ಪಡುತ್ತವೆ. ಚಲನಚಿತ್ರಗಳು, ಧಾರಾವಾಹಿಗಳು ಮತ್ತು ಜಾಹೀರಾತುಗಳ ಚಿತ್ರೀಕರಣವು ಮುಚ್ಚಲ್ಪಡುತ್ತದೆ. ಮದುವೆಗಳಲ್ಲಿ ಕೇವಲ 25 ಜನರಿಗೆ ಮಾತ್ರ ಅವಕಾಶವಿರುತ್ತದೆ.

ಆದಾಗ್ಯೂ, ರೈಲುಗಳು ಮತ್ತು ಬಸ್ ಸೇವೆಗಳು ಸೇರಿದಂತೆ ಸಾರ್ವಜನಿಕ ಸಾರಿಗೆ, ದಿನಸಿ, ತರಕಾರಿ ಅಂಗಡಿಗಳು, ಹಣ್ಣು ಮಾರಾಟಗಾರರು, ಡೈರಿಗಳು, ಬೇಕರಿಗಳು, ಮಿಠಾಯಿಗಳು, ಎಲ್ಲಾ ರೀತಿಯ ಆಹಾರ ಮಳಿಗೆಗಳು ಮತ್ತು ಸಾರ್ವಜನಿಕ ಉಪಯುಕ್ತತೆಗಳಂತಹ ಅಗತ್ಯ ಸೇವೆಗಳು ತೆರೆದಿರುತ್ತವೆ.

ಉತ್ಪಾದನಾ ವಲಯಕ್ಕೆ ಸಂಬಂಧಿಸಿದಂತೆ, ಕೈಗಾರಿಕೆಗಳಿಗೆ 50% ಸಾಮರ್ಥ್ಯದಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಿದೆ. ಆದರೆ ಈ ಕೈಗಾರಿಕೆಗಳು ತಮ್ಮ ಕಾರ್ಮಿಕರಿಗೆ ಉಳಿದುಕೊಳ್ಳಲು ಕ್ಯಾಂಪಸ್‌ನಲ್ಲೇ ಅಥವಾ ಪ್ರತ್ಯೇಕವಾದ ವ್ಯವಸ್ಥೆ ಮಾಡಬೇಕಾಗುತ್ತದೆ. ಕೈಗಾರಿಕೆಯ ಆವರಣದ ಹೊರಗೆ ಸಿಬ್ಬಂದಿಗಳು ಓಡಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಿಣರಾಯಿ ವಿಜಯನ್ ಸಂಪುಟಕ್ಕೆ ಕೇರಳ ಶಿಕ್ಷಣ ಸಚಿವ ಕೆ.ಟಿ. ಜಲೀಲ್‌‌ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...