Homeಕರೋನಾ ತಲ್ಲಣಕೊರೊನಾ ಉಲ್ಭಣ: ಗುರುವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಮೋದಿ?

ಕೊರೊನಾ ಉಲ್ಭಣ: ಗುರುವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಮೋದಿ?

- Advertisement -
- Advertisement -

ದೇಶದ ಕೊರೊನಾ ಪರಿಸ್ಥಿತಿಯ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ಸಭೆ ನಡೆಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕೊರೊನಾದ ಹೊಸ ರೂಪಾಂತರವಾದ ಒಮೈಕ್ರಾನ್‌‌ ಪ್ರಕರಣವು ದಿನದಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ರಾಜ್ಯಗಳು ಜನ ಜೀವನದ ಮೇಲೆ ಹಲವು ನಿರ್ಬಂಧಗಳನ್ನು ಹೊಸದಾಗಿ ಹೇರಿವೆ.

ಭಾನುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ಮೋದಿ, ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಮಿಷನ್ ಮೋಡ್‌ನಲ್ಲಿ ಹದಿಹರೆಯದವರಿಗೆ ಲಸಿಕೆ ಅಭಿಯಾನವನ್ನು ವೇಗಗೊಳಿಸಲು ಕರೆ ನೀಡಿದ್ದಾರೆ.

ಇದನ್ನೂ ಓದಿ:ಉಡುಪಿ: ಕೋವಿಡ್ ಕರ್ಫ್ಯೂ ಕಾಲದಲ್ಲಿ ಯಕ್ಷಗಾನಕ್ಕೆ ಅವಕಾಶ ಕೋರಿ ಕಲಾವಿದರ ಮನವಿ

ಇತರ ಖಾಯಿಲೆ ಇರದ 60 ವರ್ಷಕ್ಕಿಂತ ಮೇಲ್ಪಟ್ಟವರನ್ನು ಹೊರತುಪಡಿಸಿ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಲಸಿಕೆ ಅಭಿಯಾನವನ್ನು ಕೂಡಾ ಪ್ರಾರಂಭಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಇಂದು ಒಂದೇ ದಿನ ಬರೋಬ್ಬರಿ 12,000 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 9,020 ಕೇಸ್‌ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿವೆ.

ಕೊರೊನಾ ಪಾಸಿಟಿವಿಟ್ ದರ 6.33% ರಷ್ಟಿದ್ದು, ಕೊರೊನಾ ಸಂಬಂಧಿತ ಸಮಸ್ಯೆಗಳಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಅದರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ನಿನ್ನೆ ವರದಿಯಾಗಿದ್ದ ಪ್ರಕರಣಗಳಿಗಿಂತ ಇಂದು 27%ದಷ್ಟು ಏರಿಕೆಯಾಗಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ಪ್ರಸ್ತುತ ರಾಜ್ಯದಲ್ಲಿ ಒಟ್ಟು 49,602 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿಯೇ 40 ಸಾವಿರ ಸಕ್ರಿಯ ಪ್ರಕರಣಗಳಿವೆ. ಇಂದು 901 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1,89,499 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಈ ಕುರಿತು ಆರೋಗ್ಯ ಸಚಿವ ಕೆ.ಸುಧಾಕರ್‌ ಟ್ವೀಟ್ ಮಾಡಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಳೆದ ವಾರದಿಂದ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿದೆ. ಜೊತೆಗೆ ಈ ಹಿಂದೆ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ:ಗುಜರಾತ್‌ ಹೈಕೋರ್ಟ್‌‌ನಲ್ಲಿ ಕನ್ನಡ ಮಾತನಾಡಿದ ಮುಖ್ಯ ನ್ಯಾಯಮೂರ್ತಿ: ಏನಿದು ಪ್ರಕರಣ? ಹೇಗೆ ನೋಡಬೇಕು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...