Homeಕರ್ನಾಟಕಕೊರೊನಾ ಉಲ್ಬಣ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

ಕೊರೊನಾ ಉಲ್ಬಣ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

- Advertisement -
- Advertisement -

ಕೊರೊನಾ ಉಲ್ಬಣಗೊಳ್ಳುತ್ತಿರುವುದರಿಂದ ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಭಾನುವಾರ ಸುತ್ತೋಲೆ ಹೊರಡಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ 28-04-2021 ರಿಂದ ದಿನಾಂಕ 18-05-2021 ರವರೆಗೆ ನಡೆಸಲು ತೀರ್ಮಾನಿಸಿತ್ತು.

ಇಲಾಖೆಯು ಪ್ರಾಯೋಗಿಕ ಪರೀಕ್ಷೆಯನ್ನು ಆಯಾ ಕಾಲೇಜುಗಳ ಹಂತದಲ್ಲಿಯೇ ನಡೆಸಲು ಈ ಹಿಂದೆ ಸೂಚಿಸಿತ್ತು. ಆದರೆ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಬೇಕೆಂದು ಪೋಷಕರು, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಇಲಾಖೆಗೆ ಮನವಿಗಳು ನೀಡಿದ್ದರು.

ಇದನ್ನೂ ಓದಿ: ಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ಸಲ್ಲಿಕೆಯಾದ ಮನವಿಗಳ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲು ಇಲಾಖೆಯು ತೀರ್ಮಾನಿಸಿದೆ.

ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್‌‌, “ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...