Homeಕರೋನಾ ತಲ್ಲಣಕೊರೊನಾ ಉಲ್ಬಣ: ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು? ಶೀಘ್ರದಲ್ಲೇ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

ಕೊರೊನಾ ಉಲ್ಬಣ: ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು? ಶೀಘ್ರದಲ್ಲೇ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ಸೋಮವಾರ 1290 ಹೊಸ ಪ್ರಕರಣಗಳು ವರದಿಯಾಗಿವೆ. ದೈನಂದಿನ ಪಾಸಿಟಿವಿಟಿ ದರ 1.60% ಇದ್ದು, ಅದರಲ್ಲೂ 90% ಪ್ರಕರಣಗಳು ಬೆಂಗಳೂರಿನಿಂದಲೇ ವರದಿಯಾಗುತ್ತಿವೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಶೀಘ್ರದಲ್ಲೇ ಕಠಿಣ ನಿರ್ಬಂಧಗಳನ್ನು ಹೇರಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

“ಇಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತನ್ನ ಹಿರಿಯ ಸಂಪುಟ ಸಹೋದ್ಯೋಗಿಗಳು ಮತ್ತು ಕೊರೊನಾ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಓಮೈಕ್ರಾನ್ ಹರಡುವಿಕೆಯನ್ನು ವಿಶ್ಲೇಷಿಸಿದ ನಂತರ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಿರ್ಧರಿಸಲಾಗುವುದು” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಂಗಳವಾರ ತಿಳಿಸಿದ್ದಾರೆ.

ಇದನ್ನೂ ಓದಿ:ಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

“ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕ್ರಮಗಳು, ಮೈಕ್ರೋ ಕಂಟೈನ್‌ಮೆಂಟ್ ವಲಯಗಳು, ಶಾಲೆಗಳು ಮತ್ತು ಇತರ ನಿರ್ಬಂಧಗಳ ಕುರಿತು ಚರ್ಚಿಸಲಾಗುವುದು. ಬೆಂಗಳೂರು ಈ ಹಿಂದಿನ ಎರಡು ಅಲೆಗಳ ಕೇಂದ್ರಬಿಂದುವಾಗಿತ್ತು. ಜೊತೆಗೆ ಕರ್ನಾಟಕದಲ್ಲಿ ಪ್ರಾರಂಭವಾಗಿರುವ ಮೂರನೇ ಅಲೆಯಲ್ಲಿ ಅದೇ ಸಂಭವಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ.

“ಬೇರೆ ದೇಶಗಳು ಮತ್ತು ರಾಜ್ಯಗಳ ಜನರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ನಗರದಲ್ಲಿ ಹರಡುವಿಕೆಯನ್ನು ನಿಯಂತ್ರಿಸಿದರೆ, ರಾಜ್ಯದಲ್ಲೂ ಹರಡುವಿಕೆಯನ್ನು ನಿಯಂತ್ರಿಸಬಹುದು” ಎಂದು ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ:ಪ್ರಕರಣ ಹೆಚ್ಚಾದರೆ ಶಾಲೆ ಮುಚ್ಚಲು ಹಿಂದೆ ಸರಿಯುವುದಿಲ್ಲ: ಶಿಕ್ಷಣ ಸಚಿವ ನಾಗೇಶ್

ರಾಜ್ಯದಲ್ಲಿ ಕೊರೊನಾ ಹರಡುವುದನ್ನು ತಡೆಯಲು ಸಾಧ್ಯವಿಲ್ಲ ಆದರೆ ವಿವಿಧ ಕ್ರಮಗಳ ಮೂಲಕ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಜನರ ಜೀವನ ಮತ್ತು ಜೀವನೋಪಾಯಗಳು ಸಹಜ ಸ್ಥಿತಿಗೆ ಮರಳಿರುವುದರಿಂದ ಲಾಕ್‌ಡೌನ್‌ನಂತಹ ಪದಗಳನ್ನು ಬಳಸಬೇಡಿ ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ಕ್ರಮಗಳನ್ನು ತರಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.

15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುದನ್ನು ರಾಜ್ಯದಲ್ಲಿ ಸೋಮವಾರದಿಂದ ಪ್ರಾರಂಭಿಸಲಾಗಿದೆ.

ಇದನ್ನೂ ಓದಿ:2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...