Homeಕರ್ನಾಟಕಬೆಂಗಳೂರು ಪ್ರವೇಶಕ್ಕೆ ಕೊರೋನಾ ಟೆಸ್ಟ್‌ ನೆಗೆಟಿವ್‌ ವರದಿ ಕಡ್ಡಾಯ- ಸಿಎಂ ಬಿ.ಎಸ್‌ ಯಡಿಯೂರಪ್ಪ

ಬೆಂಗಳೂರು ಪ್ರವೇಶಕ್ಕೆ ಕೊರೋನಾ ಟೆಸ್ಟ್‌ ನೆಗೆಟಿವ್‌ ವರದಿ ಕಡ್ಡಾಯ- ಸಿಎಂ ಬಿ.ಎಸ್‌ ಯಡಿಯೂರಪ್ಪ

- Advertisement -
- Advertisement -

ಬೆಂಗಳೂರಿನಲ್ಲಿ ಕ್ರಮೇಣ ಸೋಂಕು ಇಳಿಮುಖವಾಗುತ್ತಿದೆ. ಒಂದು ತಿಂಗಳ ಹಿಂದೆ 15000 ದಿಂದ 20000 ದ ವರೆಗೆ ಇರುತ್ತಿದ್ದ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಈಗ ಕೇವಲ 2000-3000 ಕೋವಿಡ್‌ ಪ್ರಕರಣಗಳಷ್ಟೇ ಪತ್ತೆಯಾಗುತ್ತಿವೆ. ಸರ್ಕಾರ ಲಾಕ್‌ಡೌನ್‌ ಸಡಿಲಿಸಿ ಅನ್‌ಲಾಕ್‌ ಮಾಡಿದ ಪರಿಣಾಮದಿಂದ ಕೊರೋನಾ ಸೋಂಕಿನಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ. ಹಾಗಾಗಿ ಕಠಿಣ ನಿಯಮಗಳನ್ನು ಹೊರಡಿಸಲಾಗಿದೆ.

ದೇಶದ ಬೇರೆ ಬೇರೆ ರಾಜ್ಯಗಳು ಮತ್ತು ಇತರ ಜಿಲ್ಲೆಗಳಿಂದ ಕಾರ್ಮಿಕರು, ಉದ್ಯೋಗಿಗಳು ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ. ಇಂದು ಜೂನ್‌ 14 ರಿಂದ ಬೆಂಗಳೂರು ಅನ್‌ಲಾಕ್‌ ಆಗಿರುವ ಕಾರಣ ಬಹುತೇಕರು ತಮ್ಮ ತಮ್ಮ ಕೆಲಸ ಮತ್ತು ಉದ್ಯೋಗಗಳಿಗೆ ತೆರಳಲಿದ್ದಾರೆ. ಇದೆಲ್ಲದರ ಪರಿಣಾಮ ಬೆಂಗಳೂರಿನಲ್ಲಿ ಜನದಟ್ಟಣೆ ಹೆಚ್ಚಲಿದೆ. ಹಾಗೂ ಮೆಜೆಸ್ಟಿಕ್‌ ರೈಲ್ವೆ ನಿಲ್ಧಾಣ ಮುಂತಾದ ಕಡೆ ಜನ ಸಂದಣಿ ಉಂಟಾಗಲಿದೆ. ಇದೆಲ್ಲದರ ಪರಿಣಾಮ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಹೊರಗಡೆಯಿಂದ ಬೆಂಗಳೂರು ಪ್ರವೇಶಿಸುವವರಿಗೆ  ಕಡ್ಡಾಯ ಕೊರೋನಾ ನೆಗೆಟಿವ್‌ ವರದಿಯನ್ನು ತರುವಂತೆ ಸಹ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಜಿಲ್ಲಾ ಪ್ರವಾಸದಿಂದ ಮರಳಿದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರು ಈ ಸಂಬಂಧ ಕೊರೋನಾ ಟೆಸ್ಟ್‌ ನೆಗೆಟಿವ್‌ ವರದಿಯ ಕುರಿತು ಅಧಿಕಾರಿಗಳಿಗೆ ತಿಳಿಸುತ್ತೇನೆ. ಬೆಂಗಳೂರಿಗೆ ಬರುವವರನ್ನು ಕೊರೋನಾ ಟೆಸ್ಟ್‌ಗೆ ಒಳಪಡಿಸುವ ವ್ಯವಸ್ಥೆ ಮಾಡುವಂತೆ ಆದೇಶಿಸುತ್ತೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : Sanchari Vijay | ಬೈಕ್‌ ಅಪಘಾತಕ್ಕೀಡಾಗಿದ್ದ ನಟ ಸಂಚಾರಿ ವಿಜಯ್‌ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...