Homeಕರೋನಾ ತಲ್ಲಣಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೊರೊನಾ: ಡೇಟಾಗಳನ್ನು ಸರಿಯಾಗಿ ನಿರ್ವಹಿಸದ ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ ಎಂದು ವೈದ್ಯರೊಬ್ಬರು ಹೇಳಿದ್ದಾರೆ

- Advertisement -
- Advertisement -

ಕೊರೊನಾ ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳು, ಖಾಲಿ ಇರುವ ಹಾಸಿಗೆಗಳು ಮತ್ತು ಪರೀಕ್ಷೆಗಳ ಅಂಕಿ-ಅಂಶವನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕಾಗಿ ಗುಜರಾತ್ ಹೈಕೋರ್ಟ್‌‌ ರಾಜ್ಯ ಸರ್ಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಪೀಠವು ರಾಜ್ಯದ ಆರೋಗ್ಯ ಸೌಲಭ್ಯದ ವೆಬ್‌ಸೈಟ್‌‌ ಪ್ರಸ್ತುತ ಸಮಯದ ಅಂಕಿಅಂಶಗಳನ್ನು ಒದಗಿಸುವುದಿಲ್ಲ ಎಂದು ಹೇಳಿದ್ದಾರೆ. “ಅದರಲ್ಲಿ ಆರೋಗ್ಯ ಸೌಲಭ್ಯದ ಲಭ್ಯತೆ ಇದೆ ಎಂದು ಇದು ತೋರಿಸುತ್ತದೆ, ಆದರೆ ಆಸ್ಪತ್ರೆಗೆ ಹೋಗಿ ನೋಡಿದಾಗ ಅಲ್ಲಿ ಸೌಲಭ್ಯವು ಇಲ್ಲದೆ ಇರುವುದನ್ನು ಕಾಣಬಹುದು” ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮ್‌ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಆರೋಗ್ಯ ಸೌಲಭ್ಯದ ಪೋರ್ಟಲ್‌ ಅನ್ನು ಆಸ್ಪತ್ರೆಗಳ ಸಂಘವು ನಿರ್ವಹಿಸುತ್ತಿದೆ ಎಂದು ರಾಜ್ಯ ಸರ್ಕಾವು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು ಅಂಕಿ ಅಂಶವನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಮತ್ತು ನಿಖರವಾದ ಮಾಹಿತಿಯನ್ನು ಒದಗಿಸಬೇಕು ಎಂದು ಆದೇಶ ನೀಡಿದೆ.

“ಅದನ್ನು ಆಸ್ಪತ್ರೆಗಳ ಸಂಘಕ್ಕೆ ಬಿಡಲು ಸಾಧ್ಯವಿಲ್ಲ. ಬಹಳಷ್ಟು ಕುಟುಂಬಗಳು ಸಣ್ಣ ಮನೆಯಲ್ಲಿ ವಾಸಿಸುತ್ತವೆ. ಎರಡು ಪರೀಕ್ಷೆಗಳಲ್ಲೂ ಪಾಸಿಟಿವ್‌ ಬಂದರೆ, ಇತರರು ಏನು ಮಾಡಬೇಕು? ಪೋಷಕರು ಪಾಸಿಟಿವ್ ಆದರೆ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಕುಟುಂಬ ಸದಸ್ಯರಿಗೆ ಏನಾದರೂ ವ್ಯವಸ್ಥೆ ಇದೆಯೇ?” ಎಂದು ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.

ಗುಜರತ್‌‌ನಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಪರಿಸ್ಥಿತಿ ಕೈಮೀರಿದೆ ಎಂದು ವರದಿಯಾಗಿದೆ. ಸೋಂಕಿನಿಂದಾಗಿ ಮೃತಪಟ್ಟವರ ಅಂತ್ಯಕ್ರಿಯೆಗೂ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಅಲ್ಲಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು: ಮಣಿಪಾಲ ಆಸ್ಪತ್ರೆಗೆ ದಾಖಲು

ಈ ನಡುವೆ ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ.

ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.

ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...