Homeಕರೋನಾ ತಲ್ಲಣಸಿಬ್ಬಂದಿಗೆ ಕೊರೊನಾ: ತುಮಕೂರು ಎಸ್ಪಿ ಕಚೇರಿ ಸೀಲ್ ಡೌನ್

ಸಿಬ್ಬಂದಿಗೆ ಕೊರೊನಾ: ತುಮಕೂರು ಎಸ್ಪಿ ಕಚೇರಿ ಸೀಲ್ ಡೌನ್

ಕೊರೊನಾ ಸೋಂಕಿತ ಭೇಟಿ ಹಿನ್ನೆಲೆಯಲ್ಲಿ ಈಗಾಗಲೇ ಮಧುಗಿರಿ ಡಿವೈಎಸ್ಪಿ ಕಚೇರಿ ಮತ್ತು ಕೋಡಿಗೇನಹಳ್ಳಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು.

- Advertisement -
- Advertisement -

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕಚೇರಿಯ ಸಿಬ್ಬಂದಿ ಸೇರಿದಂತೆ ಮೂರು ಮಂದಿ ಪೊಲೀಸರಿಗೆ ಕೊರೊನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ.

ಎಸ್ಪಿ ಕಚೇರಿಯನ್ನು ಸ್ಯಾನಿಟೈಜ್ ಮಾಡಲಾಗಿದ್ದು, ಪೊಲೀಸರಲ್ಲಿ ಕೂಡಾ ಹೆಚ್ಚಾಗಿ ಸೋಂಕು ಕಂಡು ಬರುತ್ತಿರುವುದು ಅವರ ಮಾನಸಿಕ ಸ್ಥೈರ್ಯಕ್ಕೆ ಸವಾಲಾಗಿದೆ.

ಕೊರೊನಾ ಸೋಂಕಿತ ಭೇಟಿ ಹಿನ್ನೆಲೆಯಲ್ಲಿ ಈಗಾಗಲೇ ಮಧುಗಿರಿ ಡಿವೈಎಸ್ಪಿ ಕಚೇರಿ ಮತ್ತು ಕೋಡಿಗೇನಹಳ್ಳಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಈಗ ಜಿಲ್ಲಾ ಪೊಲೀಸ್ ವರಿಷ್ಠರ ಕಚೇರಿಯನ್ನು ಸೀಲ್ ಮಾಡಿದೆ.

ಸೋಂಕಿತ ಸಿಬ್ಬಂದಿಯ ಪ್ರಯಾಣ ಇತಿಹಾಸ, ಪ್ರಾಥಮಿಕ ಮತ್ತು ಮಾಧ್ಯಮಿಕ ಸಂಪರ್ಕಿತರ ವಿವರವನ್ನು ಆರೋಗ್ಯ ಮತ್ತು ಕುಟುಂಬ ಇಲಾಖೆ ಸಂಗ್ರಹಿಸುತ್ತಿದೆ. ಇಬ್ಬರು ಕೆಎಸ್‌ಆರ್‌ಪಿ ಪೊಲೀಸರಿಗೂ ಕೊರೋನ ದೃಢಪಟ್ಟಿದೆ.

ವೀರಸಾಗರದ ಮುನಿಸಿಪಲ್ ಕಚೇರಿಯಲ್ಲೂ ವ್ಯಕ್ತಿಯೊಬ್ಬರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಇಂದು ತುಮಕೂರು ಜಿಲ್ಲೆಯಲ್ಲಿ 25 ಪ್ರಕರಣಗಳು ಕಂಡುಬಂದಿದ್ದು, ತುಮಕೂರಿನಲ್ಲಿ 11 ಕೇಸುಗಳು ದಾಖಲಾಗಿವೆ.

ಸಪ್ತಗಿರಿ ಬಡಾವಣೆ, ಎಸ್ಐಟಿ ಬಡಾವಣೆ ಸೇರಿದಂತೆ ಜಿಲ್ಲೆಯ ಕುಣಿಗಲ್, ಪಾವಗಡ, ಕೊರಟಗೆರೆ ತಾಲೂಕುಗಳಲ್ಲೂ ಕೊರೊನ ಪ್ರಕರಣಗಳು ವರದಿಯಾಗಿವೆ.


ಓದಿ: ವಿಚಾರಣಾಧೀನ ಖೈದಿಗೆ ಕೊರೊನಾ;ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಸೀಲ್ ಡೌನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 195 ಕ್ಕೂ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...