Homeಕೊರೊನಾಸಂಸತ್ ಭವನದ 402 ಸಿಬ್ಬಂದಿಗೆ ಕೊರೊನ ಸೋಂಕು: ಅಗತ್ಯ ಕ್ರಮಕ್ಕೆ ಅಧ್ಯಕ್ಷರ ಸೂಚನೆ

ಸಂಸತ್ ಭವನದ 402 ಸಿಬ್ಬಂದಿಗೆ ಕೊರೊನ ಸೋಂಕು: ಅಗತ್ಯ ಕ್ರಮಕ್ಕೆ ಅಧ್ಯಕ್ಷರ ಸೂಚನೆ

- Advertisement -
- Advertisement -

ಕೇಂದ್ರ ಬಜೆಟ್‌ಗೆ ಕೆಲವೇ ವಾರಗಳಿರುವಾಗ ಕಳೆದ ನಾಲ್ಕು ದಿನಗಳಲ್ಲಿ ಸಂಸತ್ತಿನ 402 ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ರಾಜ್ಯಸಭೆಯು ಭಾನುವಾರ ನೌಕರರ ಹಾಜರಾತಿ ಕುರಿತು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಕೊರೊನಾ ವೈರಸ್ ಹರಡುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವಾಲಯದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನ ಎಲ್ಲಾ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಾಯ್ಡು ನಿರ್ದೇಶನ ನೀಡಿದ್ದಾರೆ. ಸೋಂಕಿತರ ಚೇತರಿಕೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು. ಅಗತ್ಯವಿದ್ದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೆರವು ನೀಡುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?

ರಾಜ್ಯಸಭಾ ಸಚಿವಾಲಯವು ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಮೇಲೆ ಮತ್ತೆ ನಿರ್ಬಂಧ ಹೇರಿದೆ. ಅಧೀನ ಕಾರ್ಯದರ್ಶಿ ಅಥವಾ ಕಾರ್ಯನಿರ್ವಾಹಕ ಅಧಿಕಾರಿಗಳ ಶ್ರೇಣಿಗಿಂತ ಕಡಿಮೆ ಇರುವ ಶೇ.50 ರಷ್ಟು ಅಧಿಕಾರಿಗಳು ಮತ್ತು ಸಿಬ್ಬಂದಿ ಈ ತಿಂಗಳ ಅಂತ್ಯದವರೆಗೆ ಮನೆಯಿಂದಲೇ ಕೆಲಸ ಮಾಡಬೇಕಾಗುತ್ತದೆ. ಈ ಸಿಬ್ಬಂದಿ ಒಟ್ಟು ಉದ್ಯೋಗಿಗಳಲ್ಲಿ ಶೇಕಡಾ 65 ರಷ್ಟು ಮಂದಿಯಿದ್ದಾರೆ.

ಮೂಲಗಳ ಪ್ರಕಾರ, ಅಂಗವಿಕಲರು ಮತ್ತು ಗರ್ಭಿಣಿಯರಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಎಲ್ಲಾ ಅಧಿಕೃತ ಸಭೆಗಳನ್ನು ವರ್ಚ್‌ವಲ್‌ ಆಗಿ ನಡೆಸಲು ನಿರ್ಧರಿಸಲಾಗಿದೆ.

ಮೂಲಗಳ ಪ್ರಕಾರ, ಜನವರಿ 4 ರಿಂದ8 ರ ಅವಧಿಯಲ್ಲಿ ರಾಜ್ಯಸಭಾ ಸಚಿವಾಲಯದ 65, ಲೋಕಸಭೆಯ ಸಚಿವಾಲಯದ 200 ಮತ್ತು 133 ಅಧಿಕಾರಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಸಂಸತ್ತಿನ ಉಭಯ ಸದನಗಳಲ್ಲಿ ಕೆಲಸ ಮಾಡುತ್ತಿರುವ ಹಲವಾರು ಉದ್ಯೋಗಿಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...