Homeಕೊರೊನಾ11 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ: ಆರೋಗ್ಯ ಸಚಿವಾಲಯ

11 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ: ಆರೋಗ್ಯ ಸಚಿವಾಲಯ

- Advertisement -
- Advertisement -

ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ ಕೂಡ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಆಂಟಿವೈರಲ್ ಅಥವಾ ಮೊನೊಕ್ಲೋನಲ್ (monoclonal) ಬಳಕೆಯನ್ನು ಶಿಫಾರಸು ಮಾಡುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಜನವರಿ 20 ರಂದು ತಿಳಿಸಿದೆ.

ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಹಾಗೆ 6 ರಿಂದ 11 ವರ್ಷ ವಯಸ್ಸಿನವರು ತಮ್ಮ ಪೋಷಕರ ಮೇಲ್ವಿಚಾರಣೆಯಲ್ಲಿ, ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾಸ್ಕ್ ಬಳಸಬಹುದು. 12 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ವಯಸ್ಕರಂತೆಯೇ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವಾಲಯ ಮಕ್ಕಳು ಮತ್ತು ಅಪ್ರಾಪ್ತರಿಗೆ ಸಂಬಂಧಿಸಿ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕೊರೊನಾ ತೀವ್ರತೆ ಹಿನ್ನೆಲೆಯಲ್ಲಿ ಸ್ಟೀರಾಯ್ಡ್‌ಗಳನ್ನು ಬಳಸಿದರೆ, ಕ್ಲಿನಿಕಲ್ ಸುಧಾರಣೆಗೆ ಒಳಪಟ್ಟು 10 ರಿಂದ 14 ದಿನಗಳಲ್ಲಿ ಅವುಗಳನ್ನು ನಿಲ್ಲಿಸಬೇಕು ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

ಕೊರೊನಾ ವೈರಸ್‌ನ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ತಜ್ಞರ ಸಮಿತಿ ಈ ಮಾರ್ಗಸೂಚಿಯನ್ನು ಪರಿಶೀಲಿಸಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇತರ ದೇಶಗಳಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ಓಮಿಕ್ರಾನ್ ರೂಪಾಂತರದಿಂದ ಉಂಟಾಗುವ ಸೋಂಕು ಕಡಿಮೆ ತೀವ್ರತೆ ಹೊಂದಿರುವುದು ತಿಳಿಯುತ್ತದೆ. ಆದರೂ, ಎಚ್ಚರಿಕೆಯ ಅವಶ್ಯಕತೆಯಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಹಿಂದೆ ಕೊರೊನಾ ಸೋಂಕಿನಿಂದ ಬಳಲುತ್ತಿರುವ ರೋಗಿಗಳಿಗೆ ನೀಡುವ ಔಷಧ ಮತ್ತು ಚಿಕಿತ್ಸೆ ಬಗ್ಗೆ ಪರಿಷ್ಕೃತ ಕ್ಲಿನಿಕಲ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದ ಆರೋಗ್ಯ ಸಚಿವಾಲಯ, ವೈದ್ಯರು ಚಿಕಿತ್ಸೆಗಾಗಿ ಸ್ಟಿರಾಯ್ಡ್‌ಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ತಿಳಿಸಿತ್ತು.

ಸ್ಟಿರಾಯ್ಡ್‌ಗಳಂತಹ ಔಷಧಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಅಥವಾ ಅಗತ್ಯಕ್ಕಿಂತ ಹೆಚ್ಚು ಕಾಲ ಬಳಸಿದಾಗ ಆಕ್ರಮಣಕಾರಿ ಮ್ಯೂಕಾರ್ಮೈಕೋಸಿಸ್ ಅಥವಾ ‘ಕಪ್ಪು ಶಿಲೀಂಧ್ರ’ ದಂತಹ ಸೆಕೆಂಡರಿ ಸೋಂಕಿನ ಅಪಾಯ ಉಂಟಾಗಬಹುದು ಎಂದು ಪರಿಷ್ಕೃತ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿತ್ತು.


ಇದನ್ನೂ ಓದಿ: ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...