Homeಕರೋನಾ ತಲ್ಲಣರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿಧಾನಗತಿಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹರಡಿಸಿದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಮಾರ್ಷಲ್‌ಗಳು ಅಥವಾ ಪೊಲೀಸ್ ಸಿಬ್ಬಂದಿಯ ಸಹಾಯ ಪಡೆಯುವಂತೆ ಸುತ್ತೊಲೆಯಲ್ಲಿ ಸೂಚಿಸಲಾಗಿದೆ.

ಶುಕ್ರವಾರ ರಾಜ್ಯದಲ್ಲಿ 525 ಹೊಸ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 494 ಪ್ರಕರಣಗಳು ದಾಖಲಾಗಿವೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,177 ಇದ್ದು, ಬೆಂಗಳೂರಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3,061 ಆಗಿದೆ.

ಮುಚ್ಚಿದ ಸ್ಥಳಗಳಾದ ಶಾಪಿಂಗ್‌ ಮಾಲ್‌ಗಳು, ರೆಸ್ಟೊರೆಂಟ್‌ಗಳು, ಪಬ್‌ಗಳು, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್‌ ಧರಿಸಿದ್ದರೆ ಮಾತ್ರವೇ ಪ್ರವೇಶ ಕಲ್ಪಿಸುವುದು ಆಯಾ ಸಂಸ್ಥೆಯ ಮಾಲೀಕರು, ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

 

ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್‌ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ ಎಂದು ಸೂಚಿಸಲಾಗಿದೆ.

ವಿಷಮ ಶೀತ ಜ್ವರ (ILI) ಮತ್ತು ತೀವ್ರ ಉಸಿರಾಟದ ತೊಂದರೆ (SARI) ಲಕ್ಷಣಗಳನ್ನು ಹೊಂದಿದವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯೇ ಮೇರೆಗೆ ಪರೀಕ್ಷೆಗೆ ಒಳಪಡಿಸಬೇಕು. ಫಲಿತಾಂಶ ಲಭ್ಯವಾಗುವವರೆಗೆ ಮನೆಯಲ್ಲಿ ಪ್ರತ್ಯೇಕವಾಗಿರಬೇಕು.

ಮುಂಜಾಗ್ರತಾ ಕ್ರಮವಾಗಿ ಎಲ್ಲ ಅರ್ಹರು ಮುನ್ನೆಚ್ಚರಿಕಾ ಡೋಸ್ ಸೇರಿದಂತೆ ಕೋವಿಡ್‌ 19 ಲಸಿಕೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್‌ ನಿರ್ದೇಶನ ನೀಡಿದ್ದಾರೆ.


ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...