Homeಕೊರೊನಾವಿದೇಶದಿಂದ ಬಂದ ಪ್ರಯಾಣಿಕರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ: ಆರೋಗ್ಯ ಸಚಿವಾಲಯ

ವಿದೇಶದಿಂದ ಬಂದ ಪ್ರಯಾಣಿಕರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ: ಆರೋಗ್ಯ ಸಚಿವಾಲಯ

- Advertisement -
- Advertisement -

ದೇಶದಲ್ಲಿ ಕೊರೊನಾ, ಓಮಿಕ್ರಾನ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ವಿದೇಶದಿಂದ ಭಾರತಕ್ಕೆ ಬಂದಿಳಿರುವ ಪ್ರಯಾಣಿಕರು ನಂತರ ಒಂದು ವಾರದವರೆಗೆ ಹೋಮ್ ಕ್ವಾರಂಟೈನ್‌ನಲ್ಲಿರಬೇಕು. ಜೊತೆಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಬೇಕು ಎಂದು ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

ಜನವರಿ 11 ಮಂಗಳವಾರದಿಂದ ಈ ನಿಯಮಗಳು ಜಾರಿಗೆ ಬರಲಿವೆ. ವಿಶ್ವದಲ್ಲಿ ಅಪಾಯದಲ್ಲಿರುವ ದೇಶಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಡಿಸೆಂಬರ್‌ನಿಂದ ಒಂಬತ್ತು ರಾಷ್ಟ್ರಗಳನ್ನು ಸೇರಿಸಲಾಗಿದೆ.

ವಿದೇಶದಿಂದ ಬರಿವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳವರೆಗೆ ಹೋಮ್ ಐಸೋಲೇಶನ್‌ಗೆ ಹೋಗಲೇಬೇಕು. ಬಳಿಕ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಬೇಕು. ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದರೆ ಅವರನ್ನು ಪ್ರತ್ಯೇಕವಾಗಿಸಲಾಗುತ್ತದೆ. ಅವರ ಮಾದರಿಗಳನ್ನು ಜೀನೋಮ್ ಪರೀಕ್ಷೆಗೆ ಕಳುಹಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ರ್‍ಯಾಲಿಯ ವೈಫಲ್ಯ ಮುಚ್ಚಿ ಹಾಕಲು ‘ಜೀವ ಬೆದರಿಕೆ’ ನೆಪ ಹೇಳುತ್ತಿರುವ ಪ್ರಧಾನಿ: ಸಂಯುಕ್ತ ಕಿಸಾನ್ ಮೋರ್ಚಾ

ಪಾಸಿಟಿವ್ ಬಂದ ಪ್ರಯಾಣಿಕರ ಪಕ್ಕ ಕುಳಿತ ಇತರ ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿಯನ್ನು ಪ್ರಥಮ ಸಂಪರ್ಕಿತರು ಎಂದು ಪರಿಗಣಿಸಲಾಗುತ್ತದೆ.

ಪರೀಕ್ಷೆಯು ನೆಗೆಟಿವ್ ಬಂದರೂ ಕೂಡ ವಿದೇಶದಿಮದ ಬಂದ ಪ್ರಯಾಣಿಕರು “ಮುಂದಿನ ಏಳು ದಿನಗಳವರೆಗೆ ಪ್ರತ್ಯೇಕವಾಗಿರಬೇಕು ಮತ್ತು ತಮ್ಮ ಆರೋಗ್ಯದ ನಿಗಾ ವಹಿಸಬೇಕು” ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಗುರುವಾರ ದೇಶದಲ್ಲಿ ಕಳೆದ 7 ತಿಂಗಳಲ್ಲಿ ಮೊದಲ ಬಾರಿಗೆ ಒಂದು ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ವರದಿಯಾಗಿವೆ. ಬುಧವಾರ ದಾಖಲಾಗಿದ್ದ ಪ್ರಕರಣಗಳಿಗೆ ಹೋಲಿಸಿದರೆ ಇದು ಶೇಕಡಾ 28 ರಷ್ಟು ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಕೆ.ಸುಧಾಕರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರು ಹುದ್ದೆಯಿಂದ ವಜಾ!

0
ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಹುದ್ದೆಯಿಂದ ವಜಾಗೊಳಿಸಿದ್ದಾರೆ. ಈ ಹಿಂದೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದ ಎಎಪಿಯ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಅವರು...