Homeಅಂತರಾಷ್ಟ್ರೀಯಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಲ್ಲಿ ಹುಟ್ಟಿದೆ: ಚೀನಾ ಆರೋಪ

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಆರೋಪಿಸಿದ್ದಾರೆ.

- Advertisement -
- Advertisement -

ಇದುವರೆಗೂ ಕೊರೊನಾ ವೈರಸ್‌ ಚೀನಾದ ವುಹಾನ್‌ನಲ್ಲಿ ಹುಟ್ಟಿದೆ ಎಂಬ ಪ್ರಚಾರಗಳ ಮಧ್ಯೆ ಚೀನಾ ಬೇರೆಯೆ ವಿಚಾರವನ್ನು ವಿಶ್ವದ ಮುಂದಿಟ್ಟಿದೆ. ಪ್ರಪಂಚದೆಲ್ಲೆಡೆ ಏಕಾಏಕಿ ಎರಗಿದ ಕೊರೊನಾ ವೈರಸ್ ಅಮೆರಿಕಾದ ಮಿಲಿಟರಿ ಲ್ಯಾಬ್‌ನಿಂದ ಸೋರಿಕೆಯಾಗಿದೆ ಎಂಬ ಹೊಸ ಸಿದ್ಧಾಂತವನ್ನು ತೇಲಿ ಬಿಟ್ಟಿದೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ ನಿಯತಕಾಲಿಕೆ ಕ್ವಿಶಿಯಲ್ಲಿ ಪ್ರಕಟವಾದ ಲೇಖನದಲ್ಲಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು “ಹೊಸ ಕರೋನ ವೈರಸ್‌ನ ಮೂಲ ಮತ್ತು ಪ್ರಸರಣ ಮಾರ್ಗವನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ” ಎಂದು ಚೀನಾ ಸರ್ಕಾರ ಹೇಳಿದೆ.


ಓದಿ: ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ


ಲೇಖನವು ಭಾಗಶಃ ಮಾಹಿತಿಯನ್ನು ಉಲ್ಲೇಖಿಸಿ, ವುಹಾನ್ ನಗರದಲ್ಲಿ ಕರೋನವೈರಸ್ ಹುಟ್ಟಿಕೊಂಡಿಲ್ಲ ಎಂದು ಹೇಳಿದೆ. ಲೇಖನದಲ್ಲಿ ಅಮೇರಿಕದಲ್ಲಿನ ಪರಿಸ್ಥಿತಿಯನ್ನು ನಿರ್ದಿಷ್ಟವಾಗಿ ಎತ್ತಿ ತೋರಿಸಿದ್ದು, ಅಲ್ಲಿ ಸುಮಾರು 90,000 ಜನರು ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದು ಏಕೆ ಎಂದು ಪ್ರಶ್ನಿಸಿದೆ.

ಫೋರ್ಟ್ ಡೆಟ್ರಿಕ್ ಜೈವಿಕ ಪ್ರಯೋಗಾಲಯವನ್ನು ಯಾಕೆ ಮುಚ್ಚಲಾಗಿದೆ ಮತ್ತು ಇದು ಕೊರೊನಾ ವೈರಸ್‌ ಬಗ್ಗೆ ಸಂಶೋಧನೆ ನಡೆಸಿದೆಯೇ ಹಾಗೂ ವೈರಸ್ ಪ್ರಯೋಗಾಲಯದಿಂದ ಸೋರಿಕೆಯಾಗಿದೆಯೇ ಎಂದು ಅನೇಕ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಲೇಖನವು ಗಮನಸೆಳೆದೆ.

ಮೇರಿಲ್ಯಾಂಡ್‌‌ನಲ್ಲಿರುವ ಫೋರ್ಟ್ ಡೆಟ್ರಿಕ್, ಅಮೆರಿಕಾದ ಮಿಲಿಟರಿ ಸಾಂಕ್ರಾಮಿಕ ರೋಗಗಳ ಸಂಶೋಧನಾ ಸಂಸ್ಥೆಯಾಗಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳಾದ ಇಲ್ಲಿ ಜೈವಿಕ ಸುರಕ್ಷತೆಯ ಕೊರತೆಯನ್ನು ಕಂಡುಕೊಂಡ ನಂತರ ಅದನ್ನು ಕಳೆದ ಆಗಸ್ಟ್‌ನಲ್ಲಿ ಮುಚ್ಚಲಾಗಿತ್ತು.

ಇದರ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಲ್ಯಾಬ್ “ತ್ಯಾಜ್ಯ ನೀರನ್ನು ಶುದ್ದೀಕರಿಸುವ ಸಾಕಷ್ಟು ವ್ಯವಸ್ಥೆಗಳನ್ನು ಹೊಂದಿಲ್ಲ” ಎಂದು ಪ್ರಯೋಗಾಲಯವನ್ನು ಸ್ಥಗಿತಗೊಳಿಸುವ ಆದೇಶ ಬಂದಿದೆ ಎಂದು ವರದಿಯಾಗಿತ್ತು. ಆದರೆ ರೋಗ-ಉಂಟುಮಾಡುವ ವಸ್ತುಗಳು ಪ್ರಯೋಗಾಲಯಗಳಿಂದ ಸೋರಿಕೆಯಾದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ.

ಫೋರ್ಟ್ ಡೆಟ್ರಿಕ್‌‌ನ ಅಮೆರಿಕಾ ಮಿಲಿಟರಿ ಸಿಬ್ಬಂದಿ ಅಕ್ಟೋಬರ್‌‌ನಲ್ಲಿ ಚೀನಾದ ವುವಾನ್‌ನಲ್ಲಿ ನಡೆದ ವಿಶ್ವ ಮಿಲಿಟರಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅವರು ವುಹಾನ್‌‌‌ಗೆ ವೈರಸ್ ಅನ್ನು ಹರಡಿದ್ದಾರೆ ಎಂದು ಚೀನಾದ ಸರ್ಕಾರಿ ಅಧಿಕಾರಿಗಳು ಈ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಆಡಳಿತವು ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್‌ ಸೋರಿಕೆಯಾಗಿದೆ ಎಂದು ಹೇಳುತ್ತಲೇ ಬಂದಿದ್ದಾರೆ, ಆದರೆ ಇದನ್ನು ಹೆಚ್ಚಿನ ವಿಜ್ಞಾನಿಗಳು ನಿರಾಕರಿಸಿದ್ದಾರೆ.


ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ಆದಾಗ್ಯೂ, ಕಳೆದವಾರ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರು ಕರೋನ ವೈರಸ್ ವುಹಾನ್ ಲ್ಯಾಬ್‌ನಲ್ಲಿ ಹುಟ್ಟಿಕೊಂಡಿದೆ ಎಂಬ ಈ ಹಿಂದಿನ ಕೆಲವು ಹೇಳಿಕೆಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು “ಇದು ವುಹಾನ್‌ನಲ್ಲಿ ಪ್ರಾರಂಭವಾಯಿತು ಎಂದು ನಮಗೆ ತಿಳಿದಿದೆ, ಆದರೆ ಎಲ್ಲಿಂದ ಅಥವಾ ಯಾರಿಂದ ಎಂಬುದು ನಮಗೆ ಗೊತ್ತಿಲ್ಲ, ಇದು ಮುಖ್ಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

ವೈರಸ್ ಮೂಲ ಚೀನಾವಲ್ಲ ಎಂದು ಡಿಸೆಂಬರ್ 27 ರಂದು ಫ್ರಾನ್ಸ್‌ನಲ್ಲಿ ದೃಡೀಕರಿಸಿದ ಕೊರೊನಾ ವೈರಸ್ ಪ್ರಕರಣವನ್ನು ಸಹ ಪತ್ರಿಕೆ ಕ್ವಿಶಿ ಉಲ್ಲೇಖಿಸಿ, ಸೋಂಕಿಗೆ ಒಳಗಾಗುವ ಮೊದಲು ಮನುಷ್ಯನಿಗೆ ಚೀನಾದೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಹಾಗೂ ಪ್ರಯಾಣ ಮಾಡಿರಲಿಲ್ಲ ಎಂದು ಹೇಳಿದೆ.

ಆದರೆ, ರೋಗಿಯ ಪತ್ನಿ ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ಸಮೀಪವಿರುವ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ಇತ್ತೀಚೆಗೆ ಚೀನಾದಿಂದ ಆಗಮಿಸಿದ ಜನರೊಂದಿಗೆ ಸಂಪರ್ಕಕ್ಕೆ ಒಳಗಾಗಿರಬಹುದಾದ ಸಂಭವವಿದೆ ಎಂದು ಹೇಳಲಾಗಿದೆ, ಇದರ ಬಗ್ಗೆ ಕ್ವಿಶಿಯ ಲೇಖನವೂ ಸೂಚಿಸಿಲ್ಲ.

ಒಟ್ಟಿನಲ್ಲಿ ಕೊರೊನಾ ವೈರಸ್‌ ಉಗಮದ ಬಗ್ಗೆ ಅಮೆರಿಕಾ ಮತ್ತು ಚೀನಾ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿದೆ.

ಈ ಎರಡು ರಾಷ್ಟ್ರಗಳ ಕಚ್ಚಾಟ ಹಾಗೂ ಕೊರೊನಾ ವೈರಸ್ ಹೇಗೆ ಹರಡಿತು ಎಂಬುದನ್ನು ಸ್ಥಾಪಿಸಲು ಸಮಗ್ರವಾದ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ  ಆಡಳಿತ ಮಂಡಳಿಯಾದ WHA ಯೂ ಕರಡು ತಯಾರಿಸಿದೆ.

ಈ ಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ, “ನಾವೆಲ್ಲರೂ ಮುಕ್ತತೆ, ಪಾರದರ್ಶಕತೆ ಮತ್ತು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈಗಾಗಲೇ, ಯುರೋಪಿಯನ್ ಯೂನಿಯನ್ ದೇಶಗಳು, ಆಸ್ಟ್ರೇಲಿಯಾದ ಸೇರಿದಂತೆ 120 ಕ್ಕೂ ಹೆಚ್ಚು ದೇಶಗಳು ಕರಡು ನಿರ್ಣಯವನ್ನು ಬೆಂಬಲಿಸಿ, ಕೊರೊನಾದ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. WHA ಯ 194 ಸದಸ್ಯ ರಾಷ್ಟ್ರಗಳಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಸಾಧ್ಯವಾದರೆ ಈ ನಿರ್ಣಯವನ್ನು ಇಂದು (ಮಂಗಳವಾರ) ಮಂಡಿಸುವ ಸಾಧ್ಯತೆಯಿದೆ.

ಮೂಲ: ದಿ ವೈಸ್‌.ಕಾಂ


ಓದಿ:  ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ?; ಪ್ಯಾಕ್ಟ್ ಚೆಕ್


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...