ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್

ವಿಶೇಷ ಆರೈಕೆಯ ಅಗತ್ಯವಿರುವವರನ್ನು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿಯವರು ನೋಡಿಕೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ.

0
ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್

ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಪಡೆಯಲು ಹೆಣಗಾಡುತ್ತಿರುವ ಕೊರೊನಾ ರೋಗಿಗಳ ದೂರುಗಳು, ಚಿಕಿತ್ಸೆಯ ಬೆಲೆ ಮತ್ತು ಆಸ್ಪತ್ರೆಯ ವಾಸ್ತವ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕೈಗೆತ್ತಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ನೇತೃತ್ವದ ವಿಭಾಗೀಯ ಪೀಠವು ಬೆಂಗಳೂರಿನ ವಕೀಲರ ಸಂಘ (ಎಎಬಿ) ಬರೆದ ಪತ್ರಗಳನ್ನು ಹೈಕೋರ್ಟ್ ಗಣನೆಗೆ ತೆಗೆದುಕೊಂಡಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಹಾಗೆಯೇ  ಹಾಸಿಗೆಗಳ ಹುಡುಕಾಟದಲ್ಲಿ ಜನರು ಎದುರಿಸುತ್ತಿರುವ ಅನಾನುಕೂಲತೆಯನ್ನು ಒತ್ತಿಹೇಳಿದೆ ಎಂದು ವರದಿ ಹೇಳಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೊರೊನಾ ನಿರ್ವಹಣೆಯ ವಿಷಯದಲ್ಲಿ ರಿಜಿಸ್ಟ್ರಾರ್‌ ರಿಟ್ ಅರ್ಜಿಯನ್ನು ನೋಂದಾಯಿಸಬೇಕು ಕೋರ್ಟ್ ಆದೇಶಿಸಿದೆ. ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ರೋಗಿಗಳು ಹೆಚ್ಚಿನ ದರ ಪಾವತಿಸಬೇಕಾಗುತ್ತದೆ ಎಂಬ ಆರೋಪವನ್ನು ಉಲ್ಲೇಖಿಸಿದ ನ್ಯಾಯಾಲಯ ವಿಶೇಷ ಆರೈಕೆಯ ಅಗತ್ಯವಿರುವವರನ್ನು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿಯವರು ನೋಡಿಕೊಳ್ಳಬೇಕು ಎಂದು ಹೇಳಿದೆ.

ಸರ್ಕಾರದ ಅನುಮೋದಿತ ಪ್ಯಾಕೇಜ್ ಹೆಚ್ಚಿನ ದರದದ್ದಾಗಿದೆ, ರೋಗಿಗಳಲ್ಲದ ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳ ಹಿತಾಸಕ್ತಿಯನ್ನು ಕಾಪಾಡುತ್ತಿದೆ ಎಂದು ವಕೀಲರ ಸಂಘವು ಬರೆದ ಒಂದು ಪತ್ರದಲ್ಲಿ ಹೇಳಲಾಗಿದೆ. ಇದಲ್ಲದೆ, ಸಾಂಕ್ರಾಮಿಕ ರೋಗವನ್ನು ಸ್ವಂತವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ವಿಫಲವಾದ ಕಾರಣ ಈ ಹೆಚ್ಚಿನ ದರಗಳನ್ನು ನಿಗದಿಪಡಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರದ ಹಸ್ತಕ್ಷೇಪವಿಲ್ಲದೆ ಆಸ್ಪತ್ರೆಗಳ ಮೂಲಕ ನೇರವಾಗಿ ಪ್ರವೇಶ ಪಡೆಯಲು ಬಯಸುವ ರೋಗಿಗಳಿಗೆ ಆಸ್ಪತ್ರೆಗಳ ಜೊತೆಗೆ ಸರ್ಕಾರವು ನಿಗದಿಪಡಿಸಿದ ದರವನ್ನು ಹೇಳಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಲಭ್ಯವಿದ್ದರೂ, ರೋಗಿಗಳಿಗೆ ಅವಕಾಶ ನೀಡಲಾಗಿಲ್ಲ ಮತ್ತು ಕೊರೊನಾ ಅಲ್ಲದ ರೋಗಿಗಳು ಸಹ ವೈದ್ಯಕೀಯ ಆರೈಕೆಯ ಕೊರತೆಯಿಂದ ಬಳಲುತ್ತಿರುವ ಘಟನೆಗಳು ನಡೆದಿವೆ ಎಂದು ವಿವಿಧ ಸುದ್ದಿ ವರದಿಗಳನ್ನು ಉಲ್ಲೇಖಿಸಿ ವಕೀಲ ಚೆಂಗಪ್ಪ ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಆಜ್ಞೆಯ ಮೇರೆಗೆ ರೋಗಿಗಳು ಮತ್ತು ಅವರ ಕುಟುಂಬಗಳು ಎದುರಿಸುತ್ತಿರುವ ಕಿರುಕುಳ ಮತ್ತು ಆಘಾತದ ಘಟನೆಗಳನ್ನು ಚೆಂಗಪ್ಪ ಅವರ ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹಿಂದೂ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ರೋಗಿಗಳನ್ನು ದಾಖಲಿಸಿಕೊಳ್ಳದ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಕೇಸ್: ಸಚಿವ ಸುಧಾಕರ್


 

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here