Homeಮುಖಪುಟಕೊರೊನಾ ವೈರಸ್ 28 ಪ್ರಕರಣ ಪತ್ತೆ: ಭಾರತದಲ್ಲಿ ಹಠಾತ್ ಏರಿದ ಸಂಖ್ಯೆ

ಕೊರೊನಾ ವೈರಸ್ 28 ಪ್ರಕರಣ ಪತ್ತೆ: ಭಾರತದಲ್ಲಿ ಹಠಾತ್ ಏರಿದ ಸಂಖ್ಯೆ

- Advertisement -
- Advertisement -

ಇಂದು ಭಾರತದಲ್ಲಿ ಕರೋನ ವೈರಸ್ ತಗುಲಿದ ಪ್ರಕರಣಗಳ ದಿಡೀರ್ ಏರಿಕೆಯಾಗಿದೆ. ಒಟ್ಟು 28 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 16 ಜನ ಇಟಲಿಯ ಪ್ರಜೆಗಳು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ತಿಂಗಳು ದೆಹಲಿಗೆ ಬಂದಿಳಿದ 15 ಇಟಾಲಿಯನ್ ಪ್ರವಾಸಿಗರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ಒಬ್ಬ ಭಾರತೀಯ ಸೇರಿದಂತೆ ಅವರೆಲ್ಲರಲ್ಲಿ ಕರೋನ ವೈರಸ್ ಇರುವುದು ಪತ್ತೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 28 ಕ್ಕೆ ಏರಿದ್ದರಿಂದ ಭಾರತವು ಇಂದು ಕರೋನವೈರಸ್ ಪ್ರಕರಣಗಳಲ್ಲಿ ಅತಿದೊಡ್ಡ ಏರಿಕೆಯನ್ನು ದಾಖಲಿಸಿದೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ “ದೇಶದಲ್ಲಿ ಈವರೆಗೆ 28 ​​ಪ್ರಕರಣಗಳು ವರದಿಯಾಗಿವೆ, ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ಪರೀಕ್ಷಿಸಲಾಗುವುದು” ಎಂದು ಹೇಳಿದ್ದಾರೆ. ಕಳೆದ ತಿಂಗಳು ವೈರಸ್‌ಗೆ ತುತ್ತಾದ ಕೇರಳದ ಇತರ ಮೂವರು ಗುಣಮುಖರಾಗಿದ್ದಾರೆ.

COVID-19 ಕೊರೊನಾ ವೈರಸ್‌ನ ಸನ್ನದ್ಧತೆಯ ಬಗ್ಗೆ ವ್ಯಾಪಕ ವಿಮರ್ಶೆ ನಡೆಸಿದೆ. ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ನಿನ್ನೆ ಟ್ವೀಟ್ ಮಾಡಿದ್ದರು.

ಇಂದು ಬೆಳಿಗ್ಗೆ, ತಜ್ಞರ ಹೇಳಿಕೆಯನ್ನು ಉಲ್ಲೇಖಿಸಿ “ಮುಂದಿನ ವಾರ ಯಾವುದೇ ಹೋಳಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ” ಎಂದು ಹೇಳಿದರಲ್ಲದೆ “ಕೊವಿಡ್-19 ನೋವೆಲ್ ಕೊರೊನಾವೈರಸ್ ಹರಡುವುದನ್ನು ತಪ್ಪಿಸಲು ಸಾಮೂಹಿಕ ಕೂಟಗಳನ್ನು ಕಡಿಮೆ ಮಾಡಲು ವಿಶ್ವದಾದ್ಯಂತ ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ, ಈ ವರ್ಷ ಯಾವುದೇ ಹೋಳಿ ಮಿಲನ್ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಾನು ನಿರ್ಧರಿಸಿದ್ದೇನೆ” ಎಂದು ಪ್ರಧಾನಿ ಹೇಳಿದ್ದಾರೆ.

ಕರೋನ ವೈರಸ್ ತಗುಲಿದ 2 ರಿಂದ 14 ದಿನಗಳ ನಡುವೆ ಯಾವುದೇ ಸಮಯದಲ್ಲಿ ಅದರ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ಇದರ ಲಕ್ಷಣಗಳಾಗಿವೆ. ವಿಶ್ವಾದ್ಯಂತ ಸುಮಾರು 90,000 ಜನರಿಗೆ ಈ ಸೋಂಕು ತಗುಲಿದ್ದು, ಅವರಲ್ಲಿ ಸುಮಾರು 3,000 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...