Homeನಿಜವೋ ಸುಳ್ಳೋಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ - ರಾಮ್‌ ದೇವ್:‌ ನಿಜವೇನು?

ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ – ರಾಮ್‌ ದೇವ್:‌ ನಿಜವೇನು?

- Advertisement -
- Advertisement -

ಒಬ್ಬರು ಉಸಿರನ್ನು ಮೂವತ್ತು ಸೆಕೆಂಡ್‌ಗಳಿಂದ ಒಂದು ನಿಮಿಷದವರೆಗೆ ಹಿಡಿದಿಟ್ಟುಕೊಳ್ಳುವುದು COVID-19 ಗೆ ಸ್ವಯಂ ರೋಗನಿರ್ಣಯ ಪರೀಕ್ಷೆಯಾಗಬಹುದು. ಹಾಗೆಯೇ ಮೂಗಿನ ಹೊಳ್ಳೆಗೆ ಸಾಸಿವೆ ಎಣ್ಣೆಯನ್ನು ಹಚ್ಚುವುದರಿಂದ ವ್ಯಕ್ತಿಯ ಹೊಟ್ಟೆಯಲ್ಲಿ ವೈರಸ್‌ನ್ನು ಕೊಲ್ಲಬಹುದು ಎಂದು ಯೋಗಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಏಪ್ರಿಲ್ 25, 2020 ರಂದು ಆಜ್ ತಕ್ ಚಾನೆಲ್‌ನೊಂದಿಗೆ ಇ-ಅಜೆಂಡಾ ಎಂಬ 24 ನಿಮಿಷಗಳ ವೀಡಿಯೊ ಸಂಭಾಷಣೆಯಲ್ಲಿ ರಾಮದೇವ್ ಈ ಮೆಲಿನ ರೀತಿಯಾಗಿ ಹೇಳಿದ್ದಾರೆ. ಸಂದರ್ಶನದ ವೀಡಿಯೊ ನೋಡಿ.

ಯಾವುದೇ ಕಾಯಿಲೆ ಇರುವ ಅಥವಾ ಇಲ್ಲದ ವ್ಯಕ್ತಿಯು ಉಸಿರಾಡದೆ 30 ಸೆಕೆಂಡುಗಳು ಅಥವಾ ಒಂದು ನಿಮಿಷದವರೆಗೆ ತಮ್ಮ ಉಸಿರನ್ನು ಹಿಡಿದಿಡಲು ಸಾಧ್ಯವಾದರೆ, ಅವರಿಗೆ COVID-19 ತಗುಲಿಲ್ಲ ಎಂದು ಅವರು ಹೇಳಿದ್ದಾರೆ.

ಒಂದು ವೇಳೆ ಕೊರೊನಾ ಬಂದಿರುವವರು ಇದ್ದರೆ, ಸಾಸಿವೆ ಎಣ್ಣೆಯ ಹನಿಗಳನ್ನು ಮೂಗಿಗೆ ಹಾಕಿದರೆ ಅದು ಹೊಟ್ಟೆಗೆ ಹೋಗಿ ಅಲ್ಲಿನ ಕೊರೊನಾ ವೈರಸ್‌ ಅನ್ನು ಕೊಲ್ಲುತ್ತದೆ ಎಂದು ಶಿಫಾರಸು ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌

ರಾಮ್‌ದೇವ್‌ರವರು ಹೇಳಿರುವ ಮೇಲಿನ ಎರಡೂ ಹೇಳಿಕೆಗಳು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಂದ ದೃಢಪಟ್ಟಿಲ್ಲ.

ಮೊದಲನೇಯದಾಗಿ ಮುಂಬೈನ ವೋಕ್ಹಾರ್ಡ್ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ. ಜೀನಮ್ ಷಾರವರು ಹೇಳುವ ಹಾಗೆ “ಈ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ಅಧ್ಯಯನಗಳು ನಡೆದಿಲ್ಲ. ಕರೋನವೈರಸ್ ಅನ್ನು ಪರೀಕ್ಷಿಸುವ ಏಕೈಕ ಮಾರ್ಗವೆಂದರೆ RT-PCR ಪರೀಕ್ಷೆಯ ಮೂಲಕ” ಎಂದಿದ್ದಾರೆ.

COVID-19 ನ ಸಾಮಾನ್ಯ ಲಕ್ಷಣಗಳು ಜ್ವರ, ಒಣ ಕೆಮ್ಮು ಮತ್ತು ದಣಿವು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಕೆಲವು ರೋಗಿಗಳಿಗೆ ನೋವು, ನೆಗಡಿ ಮತ್ತು ಗಂಟಲು ನೋವು ಅಥವಾ ಅತಿಸಾರ ಇರಬಹುದು. ಹಾಗೆಯೇ ಐದರಲ್ಲಿ ಒಬ್ಬರಿಗೆ ಮಾತ್ರ ಉಸಿರಾಟದ ತೊಂದರೆ ಇರುತ್ತದೆ ಎಂದು ತಿಳಿಸಿದ್ದಾರೆ.

ಎರಡನೇಯದಾಗಿ ಸಾಸಿವೆ ಎಣ್ಣೆಯಿಂದ ಕರೋನವೈರಸ್ ಕೊಲ್ಲುತ್ತದೆ ಎನ್ನುವುದು. ಹೊಟ್ಟೆಯು ಗ್ಯಾಸ್ಟ್ರಿಕ್ ಜ್ಯೂಸ್ ರೂಪದಲ್ಲಿ ಹೈಡ್ರೋಕ್ಲೋರಿಕ್ ಆಮ್ಲವನ್ನು ಹೊಂದಿರುತ್ತದೆ ಆದರೆ ಈ ರಸಗಳು ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತವೆ ಎಂಬುದನ್ನು ಯಾವುದೇ ವೈಜ್ಞಾನಿಕ ಪುರಾವೆಗಳು ತೋರಿಸಿಲ್ಲ. ಈ ಕುರಿತು ಅಧ್ಯಯನಗಳು ನಡೆದಿಲ್ಲ. ಸಾಸಿವೆ ಎಣ್ಣೆ ಕೊರೊನಾ ವೈರಸ್‌ ಮೇಲೆ ಪರಿಣಾಮ ಬೀರುವ ಕುರಿತು ಯಾವುದೇ  ಅಧ್ಯಯನ ಅಥವಾ ಸಿದ್ಧಾಂತವಿಲ್ಲ ಎಂದು ಡಾ. ಜೀನಮ್ ಷಾ ಹೇಳಿದ್ದಾರೆ.

ಸಾಸಿವೆ ಎಣ್ಣೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ, ದೇಹದ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳುತ್ತದೆ, ಬ್ಯಾಕ್ಟೀರಿಯಾ ನಿರೋಧಕ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದೆ, ಕೆಂಪು ರಕ್ತ ಕಣಗಳನ್ನು ಬಲಪಡಿಸುತ್ತದೆ, ಕೊಲೆಸ್ಟ್ರಾಲ್ ಅನ್ನು ನಿರ್ವಹಿಸುತ್ತದೆ ಮತ್ತು ಮಧುಮೇಹವನ್ನು ಕಡಿಮೆ ಮಾಡುತ್ತದೆ. ಆದರೆ ಕೊರೊನಾ ಕಡಿಮೆ ಮಾಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ.


ಇದನ್ನೂ ಓದಿ: ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...