Homeಕರೋನಾ ತಲ್ಲಣಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ಹಾಲುಣಿಸುವ ಮಹಿಳೆಯರಿಗೆ ಕೂಡಾ ಕೊರೊನಾ ಲಸಿಕೆಯನ್ನು ಶಿಫಾರಸು ಮಾಡಲಾಗಿದೆ.

- Advertisement -
- Advertisement -

ಕೊರೊನಾ ಸೋಂಕಿನ ವಿರುದ್ದ ನೀಡುವ ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ ಎಂದು ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಮತ್ತೆ ಹೇಳಿದ್ದು, ಲಸಿಕೆಯಿಂದಾಗಿ ಸ್ತ್ರೀ-ಪುರುಷರಲ್ಲಿ ಬಂಜೆತನ ಉಂಟಾಗುತ್ತದೆ ಎಂದು ಹೇಳಲು ಯಾವುದೆ ವೈಜ್ಞಾನಿಕ ಆಧಾರವಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಲಸಿಕೆ ಪಡೆಯುವುದರಿಂದಾಗಿ ಬಂಜೆತನ ಉಂಟಾಗುತ್ತದೆ ಎಂದು ಮಾಧ್ಯಮಗಳಲ್ಲಿ ಬಂದ ವರದಿಗಳ ಬೆನ್ನಿಗೆ ಒಕ್ಕೂಟ ಸರ್ಕಾರವು ಲಸಿಕೆಯ ಬಗ್ಗೆ ಸ್ಪಷ್ಟನೆ ನೀಡಿದೆ. ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರ, ನರ್ಸುಗಳ ಹಾಗೂ ಮುಂಚೂಣಿಯ ಆರೋಗ್ಯ ಕಾರ್ಯಕರ್ತರ ಕುರಿತಂತೆ ಊಹಾಪೋಹದ, ಸುಳ್ಳು ಮಾಹಿತಿಯ ವರದಿಗಳನ್ನು ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮಗಳು ಪ್ರಕಟಿಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಪೊಲಿಯೊ, ದಡಾರ, ರುಬೆಲ್ಲಾ ಮೊದಲಾದ ಲಸಿಕಾ ಪ್ರಕ್ರಿಯೆಯ ಸಂದರ್ಭದಲ್ಲೂ ಅಂತಹ ಲಸಿಕೆಯ ವಿರುದ್ಧ ಅಪಪ್ರಚಾರಗಳು ನಡೆದಿದ್ದವು ಎಂದು ಒಕ್ಕೂಟ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರಿಗೆ 4 ಲಕ್ಷ ರೂ.ಪರಿಹಾರ ನೀಡಲಾಗದು: ಒಕ್ಕೂಟ ಸರ್ಕಾರ

ಎಲ್ಲಾ ಲಸಿಕೆಗಳನ್ನು ಮೊದಲು ಪ್ರಾಣಿಗಳ ಮೇಲೆ ಹಾಗೂ ಮನುಷ್ಯರ ಮೇಲೆ ಪ್ರಯೋಗಿಸಿಯೆ ಧೃಡೀಕರಿಸಲಾಗಿದೆ. ಲಸಿಕೆಗಳಲ್ಲಿ ಯಾವ ಅಡ್ಡ ಪರಿಣಾಮಗಳೂ ಇಲ್ಲವೆಂದು ಪ್ರಮಾಣಿಸಿದ ಮೇಲೆಯೆ ಲಸಿಕಾ ಪ್ರಕ್ರಿಯೆ ಆರಂಭಿಸಲಾಗಿದೆ. ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಖಚಿತಪಡಿಸಿದ ನಂತರವೇ ಬಳಕೆಗೆ ಅವಕಾಶ ನೀಡಲಾಗುತ್ತದೆ ಎಂದು ಸಚಿವಾಲಯವು ಒತ್ತಿ ಹೇಳಿದೆ.

“ಇದಲ್ಲದೆ ಕೊರೊನಾ ಲಸಿಕೆಯು ಪುರುಷರು ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾಗಬಹುದು ಎಂದು ಸೂಚಿಸುವ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟಪಡಿಸಿದೆ. ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಕಂಡುಬಂದಿದೆ” ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹಾಲುಣಿಸುವ ಮಹಿಳೆಯರಿಗೆ ಕೊರೊನಾ ಲಸಿಕೆ ನೀಡಲು “ನ್ಯಾಷನಲ್ ಎಕ್ಸ್‌ಪರ್ಟ್ ಗ್ರೂಪ್ ಫಾರ್ ಕೋವಿಡ್ -19” (ಎನ್‌ಇಜಿವಿಎಸಿ) ಶಿಫಾರಸು ಮಾಡಿದೆ. ಲಸಿಕೆಗೆ ಮೊದಲು ಅಥವಾ ನಂತರ ಸ್ತನ್ಯಪಾನವನ್ನು ನಿಲ್ಲಿಸುವ ಅಥವಾ ವಿರಾಮಗೊಳಿಸುವ ಅಗತ್ಯ ಕೂಡಾ ಇಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...