ಬಿ.ಎಸ್ ಯಡಿಯೂರಪ್ಪನವರಿಗೆ ಸೋಂಕು ದೃಢಪಟ್ಟಒಂದು ದಿನದ ನಂತರ, ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಆರು ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ ಎಂದು ತಿಳಿದುಬಂದಿದೆ.
ಯಡಿಯೂರಪ್ಪ ಅವರನ್ನು ನಿನ್ನೆ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮಗಳು ಪದ್ಮಾವತಿ ಕೂಡ ಸೋಂಕಿಗೆ ಒಳಗಾಗಿದ್ದಾರೆ. ಪುತ್ರ ವಿಜಯೇಂದ್ರ ಅವರಿಗೆ ಸೋಂಕು ತಗುಲಿಲ್ಲ ಎಂದು ತಿಳಿದು ಬಂದಿದೆ.
“ನನಗೆ ಸೋಂಕು ದೃಢಪಟ್ಟಿದೆ. ನಾನು ಚೆನ್ನಾಗಿಯೇ ಇದ್ದೇನಾದರೂ, ವೈದ್ಯರ ಶಿಫಾರಸಿನ ಮೇರೆಗೆ ಮುನ್ನೆಚ್ಚರಿಕೆಯಾಗಿ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಸ್ವಯಂ-ಸಂಪರ್ಕತಡೆಯನ್ನು ಮಾಡಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸೋಂಕು ದೃಢಪಟ್ಟ ಕೆಲವೇ ಗಂಟೆಗಳಲ್ಲಿ ಯಡಿಯೂರಪ್ಪ ಅವರ ಪರೀಕ್ಷಾ ಫಲಿತಾಂಶಗಳು ಬಂದವು.
ಇದನ್ನೂ ಓದಿ: ಕೊರೊನಾ ಲಸಿಕೆಯ 2 ಮತ್ತು 3ನೇ ಹಂತದ ಮಾನವ ಪ್ರಯೋಗಕ್ಕೆ ಅನುಮತಿ: SII


