Homeಕರೋನಾ ತಲ್ಲಣಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

- Advertisement -
- Advertisement -

ಕೊರೊನಾ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸೋಂಕು ಹರಡುವುದಿಲ್ಲ. ಹಾಗಾಗಿ ಮೃತದೇಹಗಳ ಗೌರವಯುತ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಿ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಮನವಿ ಮಾಡಿದ್ದಾರೆ.

ಕೋವಿಡ್-19 ಸೋಂಕಿನಿಂದ ನಿಧನರಾದವರ ಅಂತಿಮ ಸಂಸ್ಕಾರಕ್ಕೆ ಹಲವಾರು ಕಡೆ ತಡೆವೊಡ್ಡಲಾಗಿದೆ ಎಂದು ಮಾಧ್ಯಮಗಳಿಂದ ತಿಳಿದುಬಂದಿದೆ. ಈ ವಿಚಾರದಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಭಯ ಮತ್ತು ಗೊಂದಲಗಳನ್ನು ನಿವಾರಿಸಲು ರಾಜ್ಯ ಸರ್ಕಾರದ ಯಾರೊಬ್ಬರೂ ಈವರೆಗೆ ಕಾರ್ಯೋನ್ಮುಖ ಆಗದಿರುವುದು ವಿಷಾದದ ಸಂಗತಿ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸಮಾಜಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ. ಈ ವಿಚಾರದಲ್ಲಿ ಬರೀ ಊಹಾಪೋಹಗಳನ್ನು ಹಬ್ಬಿಸಲಾಗಿದೆ. ಹೀಗಾಗಿ ಶವ ಸಂಸ್ಕಾರಕ್ಕೆ ಪ್ರತಿರೋಧ ಒಡ್ಡುವುದಾಗಲಿ, ಅಡ್ಡಿಪಡಿಸುವುದಾಗಲಿ ನಮ್ಮ ಸಂಸ್ಕೃತಿಯೂ ಅಲ್ಲ, ಸದಾಚಾರವೂ ಅಲ್ಲ. ಆದ್ದರಿಂದ ಆಯಾ ಪ್ರದೇಶಗಳಲ್ಲಿ ಕೋವಿಡ್‌ನಿಂದ ಮರಣ ಹೊಂದಿದ ವ್ಯಕ್ತಿಗಳ ಬಂಧುಗಳು ಹಾಗೂ ಗ್ರಾಮಸ್ಥರು ನಿರಾಂತಂಕವಾಗಿ, ಮೃತ ವ್ಯಕ್ತಿಗೆ ಗೌರವಯುತ ಅಂತಿಮ ಸಂಸ್ಕಾರ ನೆರವೇರಲು ಅವಕಾಶ ಮಾಡಿಕೊಡಬೇಕು. ಆ ಮೂಲಕ ಮಾನವೀಯತೆ ಮತ್ತು ಸೌಹಾರ್ದತೆ ಮೆರೆಯಬೇಕೆಂದು ನಾನು ವಿನಯಪೂರ್ವಕವಾಗಿ ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಈ ವಿಚಾರದಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಅನಗತ್ಯ ಭಯ ಹಾಗೂ ಅನುಮಾನಗಳನ್ನು ತೊಡೆದುಹಾಕಲು ಸಮಾಜಮುಖಿ ಚಿಂತನೆಯುಳ್ಳವರು, ವಿಚಾರವಂತರು ಹಾಗೂ ಬುದ್ಧಿಜೀವಿಗಳು ಕೈಜೋಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪ ಸರ್ಕಾರಕ್ಕೆ 1 ವರ್ಷ: ವಿವೇಚನೆಯನ್ನು ದೆಹಲಿ ದೊರೆಗಳ ಕಾಲಬುಡದಲ್ಲಿ ಅಡವಿಟ್ಟಿದ್ದಷ್ಟೇ ಸಾಧನೆ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...