Homeಕರೋನಾ ತಲ್ಲಣಗಂಗಾ ನದಿಯಲ್ಲಿ ಮೃತದೇಹಗಳ ಹರಿವು: ನದಿಗೆ ಅಡ್ಡಲಾಗಿ ಬಲೆ ಹಾಕಿದ ಅಧಿಕಾರಿಗಳು

ಗಂಗಾ ನದಿಯಲ್ಲಿ ಮೃತದೇಹಗಳ ಹರಿವು: ನದಿಗೆ ಅಡ್ಡಲಾಗಿ ಬಲೆ ಹಾಕಿದ ಅಧಿಕಾರಿಗಳು

- Advertisement -
- Advertisement -

ಬಿಹಾರ ಮತ್ತು ಉತ್ತರ ಪ್ರದೇಶದ ಗಂಗಾ ನದಿ ತಟದಲ್ಲಿ ಮೃತದೇಹಗಳು ಹರಿದು ಬಂದು ಆತಂಕಕ್ಕೆ ಕಾರಣವಾಗಿದ್ದವು. ಇವುಗಳನ್ನು ಹೊರ ತೆಗೆಯಲಾಗುತ್ತಿದ್ದು, ಉತ್ತರ ಪ್ರದೇಶ ಮತ್ತು ಬಿಹಾರದ ಗಡಿಯಲ್ಲಿರುವ ರಾಣಿಘಾಟ್ ಬಳಿ ಗಂಗಾ ನದಿಗೆ ಅಡ್ಡಲಾಗಿ ಬಲೆಯನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮೃತದೇಹಗಳು ಕೊರೊನಾ ಸೋಂಕಿತರದ್ದು ಎಂದು ಸ್ಥಳೀಯರು ಮತ್ತು ಅಧಿಕಾರಿಗಳು ಶಂಕಿಸಿ ಆತಂಕಕ್ಕೆ ಒಳಗಾಗಿದ್ದರು. ನೂರಕ್ಕೂ ಹೆಚ್ಚು ಮೃತದೇಹಗಳು ತೇಲುತ್ತಾ ಬಂದಿವೆ ಎಂದು ಬಿಹಾರದ ಅಧಿಕಾರಿಗಳು ತಿಳಿಸಿದ್ದರು. ಸದ್ಯ 73 ಕ್ಕೂ ಅಧಿಕ ಶವಗಳನ್ನು ನದಿಯಿಂದ ತೆಗೆಯಲಾಗಿದ್ದು, ನಂತರ ಗಂಗಾ ನದಿಗೆ ಅಡ್ಡಲಾಗಿ ಬಲೆಯನ್ನು ಸ್ಥಾಪಿಸಲಾಗಿದೆ ಎಂದು ಉತ್ತರ ಭಾರತದ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಬಿಹಾರದ ಬಕ್ಸಾರ್‌ನ ಗಂಗಾ ನದಿ ತಟದಲ್ಲಿ ನೂರಕ್ಕೂ ಹೆಚ್ಚು ಮೃತದೇಹಗಳು ಕಂಡು ಬಂದಿದ್ದು, ಜನರ ಆತಂಕಕ್ಕೆ ಕಾರಣವಾಗಿತ್ತು. ಮಂಗಳವಾರ ಬಕ್ಸಾರ್‌ನಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಘಾಜಿಪುರದಲ್ಲಿಯೂ ಗಂಗೆಯಲ್ಲಿ ಮೃತದೇಹಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಉತ್ತರ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗಿದ್ದು, ಸಾಂಪ್ರದಾಯಿಕ ಹಿಂದೂ ಶವಸಂಸ್ಕಾರಗಳಿಗೆ ಕಟ್ಟಿಗೆ ಸಿಗದ ಕಾರಣ ಅಥವಾ ಅಂತ್ಯಕ್ರಿಯೆಗಳಿಂದ ಚಿತಾಗಾರಗಳು ತುಂಬಿರುವ ಕಾರಣ ಮೃತರ ಸಂಬಂಧಿಕರು ಶವಗಳನ್ನು ನದಿಯಲ್ಲಿ ತೇಲಿಬಿಟ್ಟಿರಬೇಕೆಂದು ಸ್ಥಳೀಯರು ಶಂಕಿಸಿದ್ದಾರೆ.

ಅಂತಿಮ ವಿಧಿ-ವಿಧಾನಗಳನ್ನು ನಡೆಸದೆಯೇ ಈ ಶವಗಳನ್ನು ಗಂಗಾ ನದಿಗೆ ಎಸೆದಿರುವ ಸಾಧ್ಯತೆಯಿದೆ ಎಂಬ ಶಂಕೆ ವ್ಯಕ್ತವಾಗುತ್ತಿದ್ದು, ಬಿಹಾರದ ಬಕ್ಸಾರ್‌ನ  ಚೌಸಾ ಗ್ರಾಮದ ಮಹಾದೇವ್ ಘಾಟ್‌ನಲ್ಲಿ ನದಿಯಿಂದ ಹೊರ ತೆಗೆಯಲಾದ ಮೃತದೇಹಗಳನ್ನು ಜೆಸಿಬಿ ಬಳಸಿ ಹೂಳಲಾಗುತ್ತಿದೆ.

ಬಿಹಾರ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಜಾ, ಟ್ವೀಟ್ ಮಾಡಿ ಬಕ್ಸಾರ್ ಜಿಲ್ಲೆಯ ಚೌಸಾ ಗ್ರಾಮದ ಬಳಿಯ ಗಂಗಾ ನದಿಯಲ್ಲಿ ಪತ್ತೆಯಾದ ಮೃತದೇಹಗಳು, 4 ರಿಂದ 5 ದಿನಗಳ ಹಿಂದೆ ಮರಣ ಹೊಂದಿರುವವರ ದೇಹಗಳು ಎಂದು ಮರಣೋತ್ತರ ಪರೀಕ್ಷೆಗಳು ದೃಢಪಡಿಸಿವೆ ಎಂದಿದ್ದಾರೆ.

ಕೊಳೆತಿರುವ ಈ  ದೇಹಗಳು ನೆರೆಯ ರಾಜ್ಯವಾದ ಉತ್ತರ ಪ್ರದೇಶದಿಂದ ಕೊಚ್ಚಿಕೊಂಡು ಬಂದಿವೆ. ಉತ್ತರ ಪ್ರದೇಶದ ಗಡಿಯಲ್ಲಿ ನದಿಯಲ್ಲಿ ಬಲೆಯನ್ನು ಇರಿಸಲಾಗಿದೆ ಮತ್ತು ಗಸ್ತು ಹೆಚ್ಚಿಸಲಾಗಿದೆ ಎಂದು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಮೃತ ಪಟ್ಟಿರುವವರಲ್ಲಿ ಯಾರೊಬ್ಬರೂ ಬಕ್ಸಾರ್ ಜಿಲ್ಲೆಯ ನಿವಾಸಿಗಳಲ್ಲ ಎಂದು ಚೌಸಾದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರವೂ ಕೂಡ ಉತ್ತರ ಪ್ರದೇಶದ ಗಹ್ಮರ್ ಜಿಲ್ಲೆಯಲ್ಲಿಯೂ 25 ಮೃತದೇಹಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ವರದಿಗಳು ತಿಳಿಸಿವೆ.


ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...