Homeಮುಖಪುಟ‘ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಗೆ ಬರುತ್ತಿವೆ’: ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಕುಹಕ

‘ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಗೆ ಬರುತ್ತಿವೆ’: ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಕುಹಕ

- Advertisement -
- Advertisement -

ವಿರೋಧ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿರುವ ಸಂಬಂಧ ಕುಹಕವಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, “ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಯಲ್ಲಿ ಒಂದಾಗುತ್ತಿವೆ” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದರಾಗಿ ಅನರ್ಹಗೊಳಿಸಿದ ವಿರುದ್ಧ ಪ್ರತಿಪಕ್ಷಗಳು ಕಳೆದ ವಾರ ಒಗ್ಗಟ್ಟು ಪ್ರದರ್ಶಿಸಿದ ಬೆಳವಣಿಗೆಗಳ ನಡುವೆ ಮೋದಿ ಹೇಳಿಕೆ ಹೊರಬಿದ್ದಿದೆ.

ಅದಾನಿ ಗ್ರೂಪ್‌ನ ಹಗರಣಗಳ ಕುರಿತು ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳು ಜಂಟಿ ಪ್ರತಿಭಟನೆಗಳನ್ನು ನಡೆಸಿದ್ದು, ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ 14 ಪಕ್ಷಗಳು ಸುಪ್ರೀಂ ಕೋರ್ಟ್‌ ಮೊರೆ ಹೋಗಿವೆ.

ಮಂಗಳವಾರ ದೆಹಲಿಯ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಮೋದಿಯವರು, “ಪ್ರತಿಪಕ್ಷಗಳು ದೇಶದ ಸಂಸ್ಥೆಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ” ಎಂದು ಆರೋಪಿಸಿದ್ದಾರೆ.

“ಭಾರತವನ್ನು ತಡೆದು ನಿಲ್ಲಿಸುವ ಪ್ರಯತ್ನದಲ್ಲಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡಲಾಗುತ್ತಿದೆ” ಎಂದು ಪ್ರಧಾನಿ ಹೇಳಿದ್ದಾರೆ.

“ತನಿಖಾ ಸಂಸ್ಥೆಗಳು ಕ್ರಮ ಕೈಗೊಂಡಾಗ ದಾಳಿ ಮಾಡಲಾಗುತ್ತಿದೆ, ನ್ಯಾಯಾಲಯಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಇಂದು, ಎಲ್ಲಾ ಭ್ರಷ್ಟ ಮುಖಗಳು ಒಂದೇ ವೇದಿಕೆಯಲ್ಲಿ ಒಟ್ಟುಗೂಡುವುದನ್ನು ಕಾಣಬಹುದು” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ದೇಶದಲ್ಲಿ ಭ್ರಷ್ಟಾಚಾರವನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮೋದಿ ದೂರಿದ್ದಾರೆ.

“ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇವಲ 5,000 ಕೋಟಿ ರೂಪಾಯಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ 1.10 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದೇವೆ. ಕಳೆದ ಒಂಬತ್ತು ವರ್ಷಗಳಲ್ಲಿ, ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಅಭಿಯಾನವನ್ನು ನಡೆಸಿತು, ಇದು ಭ್ರಷ್ಟರನ್ನು ಅಸ್ಥಿರಗೊಳಿಸಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಕ್ರಮ ವಿತ್ತೀಯ ವಹಿವಾಟುಗಳನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯವು ಬಳಸುತ್ತಿರುವ ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯಿದೆಯು ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಭಾಗವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

ಮಾರ್ಚ್ 5ರಂದು ಎಂಟು ವಿರೋಧ ಪಕ್ಷಗಳ ನಾಯಕರು ಮೋದಿಯವರಿಗೆ ಪತ್ರ ಬರೆದು, “ತನಿಖಾ ಸಂಸ್ಥೆಗಳ ದುರುಪಯೋಗವು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಾಧಿಕಾರಕ್ಕೆ ಹೋಗುತ್ತಿದ್ದೇವೆ ಎಂದು ಸೂಚಿಸುತ್ತದೆ” ಎಂದಿದ್ದವು.

ದೆಹಲಿಯಲ್ಲಿ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಬಂಧಿಸಿದ ನಂತರ ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

‘ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಸೇಡಿನ ರಾಜಕೀಯ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ರ್‍ಯಾಲಿ ನಡೆಸಿವೆ.

ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ ಎಂದು ಪ್ರಜಾಪ್ರತಿನಿಧಿ ಕಾಯಿದೆ, 1951 ಹೇಳುತ್ತದೆ.

ಪ್ರತಿಪಕ್ಷಗಳ ಒಗ್ಗಟ್ಟಿನ ನಿಟ್ಟಿನಲ್ಲಿ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಭಾರತ್ ರಾಷ್ಟ್ರ ಸಮಿತಿ ಮತ್ತು ಆಮ್ ಆದ್ಮಿಯಂತಹ ಪಕ್ಷಗಳ ನಾಯಕರು ರಾಹುಲ್ ಗಾಂಧಿಯವರ ಅನರ್ಹತೆಯ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸೋಮವಾರ ಪಾಲ್ಗೊಂಡಿದ್ದರು. ಬಿಜೆಪಿಯ ಪ್ರಬಲ ವಿರೋಧಿ ಪಕ್ಷವೆಂದರೆ ಕಾಂಗ್ರೆಸ್ ಎಂಬ ವಾದವನ್ನು ಇಲ್ಲಿನ ಕೆಲವು ಪ್ರತಿಪಕ್ಷಗಳು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂಬುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...